Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 3222 ಮಂದಿಗೆ ಕೊರೊನಾ ಸೋಂಕು, 93 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 753 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 3222 ಮಂದಿಗೆ ಕೊರೊನಾ ಸೋಂಕು, 93 ಮಂದಿ ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 29, 2021 | 8:09 PM

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಜೂನ್ 29) ಒಟ್ಟು 3,222 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಒಟ್ಟು 93 ಮಂದಿ ಮೃತಪಟ್ಟಿದ್ದರು. ಬೆಂಗಳೂರಿನಲ್ಲಿ ಇಂದು ಒಂದೇ ದಿನ 753 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ. ಈ ಪೈಕಿ 27,19,479 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ 34,929 ಜನರು ಸಾವನ್ನಪ್ಪಿದ್ದಾರೆ. ಒಟ್ಟು 85,997 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,12,746ಕ್ಕೆ ಏರಿಕೆಯಾಗಿದೆ. ಈ ಪೈಕಿ 11,44,685 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,615 ಜನರು ಸಾವನ್ನಪ್ಪಿದ್ದಾರೆ. 52,445 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 3222 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 753 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ ಬಾಗಲಕೋಟೆ 8, ಬಳ್ಳಾರಿ 18, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 48, ಬೀದರ್ 2, ಚಾಮರಾಜನಗರ 50, ಚಿಕ್ಕಬಳ್ಳಾಪುರ 25, ಚಿಕ್ಕಮಗಳೂರು 114, ಚಿತ್ರದುರ್ಗ 44, ದಕ್ಷಿಣ ಕನ್ನಡ 385, ದಾವಣಗೆರೆ 95, ಧಾರವಾಡ 30, ಗದಗ 26, ಹಾಸನ 242, ಹಾವೇರಿ 10, ಕಲಬುರಗಿ 36, ಕೊಡಗು 130, ಕೋಲಾರ 105, ಕೊಪ್ಪಳ 20, ಮಂಡ್ಯ 89, ಮೈಸೂರು 415, ರಾಯಚೂರು 7, ರಾಮನಗರ 16, ಶಿವಮೊಗ್ಗ 225, ತುಮಕೂರು 99, ಉಡುಪಿ 83, ಉತ್ತರ ಕನ್ನಡ 25, ವಿಜಯಪುರ 6, ಯಾದಗಿರಿ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 93 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂತರೆ 16 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ 15, ಮೈಸೂರು 10, ಬಳ್ಳಾರಿ, ಹಾವೇರಿ 8, ಧಾರವಾಡ ಐವರು, ದಾವಣಗೆರೆ ನಾಲ್ವರು, ಮಂಡ್ಯ, ಶಿವಮೊಗ್ಗ, ತುಮಕೂರು ತಲಾ ಮೂವರು, ಬೆಳಗಾವಿ, ಚಾಮರಾಜನಗರ, ಗದಗ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ರಾಮನಗರ ತಲಾ ಇಬ್ಬರು, ಬೆಂಗಳೂರು ಗ್ರಾಮಾಂತರ, ಕೊಡಗು, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 34,929ಕ್ಕೆ ಏರಿಕೆಯಾಗಿದೆ.

(Coronavirus Karnataka Numbers 3222 infected 93 deaths due to Covid on June 29)

ಇದನ್ನೂ ಓದಿ: ಭಾರತದಲ್ಲಿ ಈಗ 4 ಲಸಿಕೆಗಳಿವೆ; ದೇಶದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ: ಡಾ.ವಿ.ಕೆ.ಪೌಲ್

ಇದನ್ನೂ ಓದಿ: Covid Vaccine: ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ