Covid 19 Karnataka Update: ಕರ್ನಾಟಕದಲ್ಲಿ 3222 ಮಂದಿಗೆ ಕೊರೊನಾ ಸೋಂಕು, 93 ಮಂದಿ ಸಾವು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 29, 2021 | 8:09 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 753 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 3222 ಮಂದಿಗೆ ಕೊರೊನಾ ಸೋಂಕು, 93 ಮಂದಿ ಸಾವು
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಜೂನ್ 29) ಒಟ್ಟು 3,222 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಒಟ್ಟು 93 ಮಂದಿ ಮೃತಪಟ್ಟಿದ್ದರು. ಬೆಂಗಳೂರಿನಲ್ಲಿ ಇಂದು ಒಂದೇ ದಿನ 753 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ. ಈ ಪೈಕಿ 27,19,479 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ 34,929 ಜನರು ಸಾವನ್ನಪ್ಪಿದ್ದಾರೆ. ಒಟ್ಟು 85,997 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,12,746ಕ್ಕೆ ಏರಿಕೆಯಾಗಿದೆ. ಈ ಪೈಕಿ 11,44,685 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,615 ಜನರು ಸಾವನ್ನಪ್ಪಿದ್ದಾರೆ. 52,445 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ರಾಜ್ಯದಲ್ಲಿಂದು ಹೊಸದಾಗಿ 3222 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 753 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ ಬಾಗಲಕೋಟೆ 8, ಬಳ್ಳಾರಿ 18, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 48, ಬೀದರ್ 2, ಚಾಮರಾಜನಗರ 50, ಚಿಕ್ಕಬಳ್ಳಾಪುರ 25, ಚಿಕ್ಕಮಗಳೂರು 114, ಚಿತ್ರದುರ್ಗ 44, ದಕ್ಷಿಣ ಕನ್ನಡ 385, ದಾವಣಗೆರೆ 95, ಧಾರವಾಡ 30, ಗದಗ 26, ಹಾಸನ 242, ಹಾವೇರಿ 10, ಕಲಬುರಗಿ 36, ಕೊಡಗು 130, ಕೋಲಾರ 105, ಕೊಪ್ಪಳ 20, ಮಂಡ್ಯ 89, ಮೈಸೂರು 415, ರಾಯಚೂರು 7, ರಾಮನಗರ 16, ಶಿವಮೊಗ್ಗ 225, ತುಮಕೂರು 99, ಉಡುಪಿ 83, ಉತ್ತರ ಕನ್ನಡ 25, ವಿಜಯಪುರ 6, ಯಾದಗಿರಿ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು?
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 93 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂತರೆ 16 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ 15, ಮೈಸೂರು 10, ಬಳ್ಳಾರಿ, ಹಾವೇರಿ 8, ಧಾರವಾಡ ಐವರು, ದಾವಣಗೆರೆ ನಾಲ್ವರು, ಮಂಡ್ಯ, ಶಿವಮೊಗ್ಗ, ತುಮಕೂರು ತಲಾ ಮೂವರು, ಬೆಳಗಾವಿ, ಚಾಮರಾಜನಗರ, ಗದಗ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ರಾಮನಗರ ತಲಾ ಇಬ್ಬರು, ಬೆಂಗಳೂರು ಗ್ರಾಮಾಂತರ, ಕೊಡಗು, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 34,929ಕ್ಕೆ ಏರಿಕೆಯಾಗಿದೆ.

(Coronavirus Karnataka Numbers 3222 infected 93 deaths due to Covid on June 29)

ಇದನ್ನೂ ಓದಿ: ಭಾರತದಲ್ಲಿ ಈಗ 4 ಲಸಿಕೆಗಳಿವೆ; ದೇಶದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ: ಡಾ.ವಿ.ಕೆ.ಪೌಲ್

ಇದನ್ನೂ ಓದಿ: Covid Vaccine: ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ