AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karantaka Update: ಕರ್ನಾಟಕದಲ್ಲಿ 3310 ಮಂದಿಗೆ ಕೊರೊನಾ ಸೋಂಕು, 114 ಮಂದಿ ಸಾವು

ಬೆಂಗಳೂರಿನಲ್ಲಿ 614 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 17 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,26,754ಕ್ಕೆ ಏರಿಕೆಯಾಗಿದೆ.

Covid 19 Karantaka Update: ಕರ್ನಾಟಕದಲ್ಲಿ 3310 ಮಂದಿಗೆ ಕೊರೊನಾ ಸೋಂಕು, 114 ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jun 25, 2021 | 8:07 PM

Share

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಒಟ್ಟು 3,310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 114 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಖ್ಯೆ 4 ಸಾವಿರಕ್ಕೂ ಕಡಿಮೆಯಾಗಿರುವುದು ಗಮನಾರ್ಹ ಬೆಳವಣಿಗೆ ಎನಿಸಿದೆ.

ಬೆಂಗಳೂರಿನಲ್ಲಿ 614 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 17 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,26,754ಕ್ಕೆ ಏರಿಕೆಯಾಗಿದೆ. ಈ ಪೈಕಿ 26,84,997 ಜನರು ಗುಣಮುಖರಾಗಿದ್ದಾರೆ. 1,07,195 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 34539 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 614 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,09,687ಕ್ಕೆ ಏರಿಕೆಯಾಗಿದೆ. ಈ ಪೈಕಿ 11,27,900 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 17 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15554 ಜನರು ಸಾವನ್ನಪ್ಪಿದ್ದಾರೆ. 66,232 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 3310 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 614 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಾಗಲಕೋಟೆ 8, ಬಳ್ಳಾರಿ 29, ಬೆಳಗಾವಿ 87, ಬೆಂಗಳೂರು ಗ್ರಾಮಾಂತರ 80, ಬೀದರ್ 6, ಚಾಮರಾಜನಗರ 71, ಚಿಕ್ಕಬಳ್ಳಾಪುರ 47, ಚಿಕ್ಕಮಗಳೂರು 39, ಚಿತ್ರದುರ್ಗ 13, ದಕ್ಷಿಣ ಕನ್ನಡ 377, ದಾವಣಗೆರೆ 89, ಧಾರವಾಡ 34, ಗದಗ 23, ಹಾಸನ 399, ಹಾವೇರಿ 29, ಕಲಬುರಗಿ 14, ಕೊಡಗು 183, ಕೋಲಾರ 140, ಕೊಪ್ಪಳ 21, ಮಂಡ್ಯ 119, ಮೈಸೂರು 367, ರಾಯಚೂರು 14, ರಾಮನಗರ 11, ಶಿವಮೊಗ್ಗ 212, ತುಮಕೂರು 80, ಉಡುಪಿ 92, ಉತ್ತರ ಕನ್ನಡ 99, ವಿಜಯಪುರ 8, ಯಾದಗಿರಿ 5 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 114 ಜನರು ಸಾವನ್ನಪ್ಪಿದ್ದಾರೆ. ಮೈಸೂರು 22, ಬೆಂಗಳೂರು ನಗರ 17, ದಕ್ಷಿಣ ಕನ್ನಡ 14, ಬಳ್ಳಾರಿ, ಧಾರವಾಡ 9, ದಾವಣಗೆರೆ, ಶಿವಮೊಗ್ಗ 5, ಬಾಗಲಕೋಟೆ, ಮಂಡ್ಯ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾವೇರಿ ತಲಾ 3, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ರಾಯಚೂರು, ರಾಮನಗರ, ಉಡುಪಿ ತಲಾ ಇಬ್ಬರು, ವಿಜಯಪುರ, ಕೊಡಗು ತಲಾ ಒಬ್ಬರು ಮೃತಪಟ್ಟಿದ್ದಾರೆ.

(Coronavirus Karnataka Numbers 3310 People Infected of Covid 114 deaths june 25)

ಇದನ್ನೂ ಓದಿ: ಕೊವಿಡ್ ಲಸಿಕೆಯನ್ನು ಗರ್ಭಿಣಿಯರಿಗೆ ನೀಡಬೇಕು, ಅದು ಅವರಿಗೆ ಉಪಯುಕ್ತ: ಐಸಿಎಂಆರ್

ಇದನ್ನೂ ಓದಿ: ಭಾರತಕ್ಕೆ ಶೀಘ್ರ ಮತ್ತೊಂದು ಲಸಿಕೆ: ಕೊವಾವ್ಯಾಕ್ಸ್​ ಲಸಿಕೆ ಉತ್ಪಾದನೆ ಆರಂಭಿಸಿದ ಪುಣೆಯ ಸೆರಮ್ ಇನ್​ಸ್ಟಿಟ್ಯೂಟ್

Published On - 7:56 pm, Fri, 25 June 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್