Covid 19 Karnataka Update: 406 ಮಂದಿಗೆ ಕೊರೊನಾ ಸೋಂಕು, 10 ಮಂದಿ ಸಾವು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 10, 2021 | 7:34 PM

ಕರ್ನಾಟಕದಲ್ಲಿ ಪ್ರಸ್ತುತ 10,154 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.35, ಸೋಂಕಿತರ ಸಾವಿನ ಪ್ರಮಾಣ ಶೇ 2.46 ಇದೆ.

Covid 19 Karnataka Update: 406 ಮಂದಿಗೆ ಕೊರೊನಾ ಸೋಂಕು, 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಒಟ್ಟು 406 ಮಂದಿಯಲ್ಲಿ ಕೊವಿಡ್ ಸೋಂಕು ಪತ್ತೆಯಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಒಟ್ಟು 637 ಮಂದಿ ಕೊವಿಡ್​ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 10,154 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.35, ಸೋಂಕಿತರ ಸಾವಿನ ಪ್ರಮಾಣ ಶೇ 2.46 ಇದೆ. ರಾಜ್ಯದಲ್ಲಿ ಈವರೆಗೆ 29,81,027 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,32,959 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 37,885 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 156 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 229 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ನಗರದಲ್ಲಿ ಪ್ರಸ್ತುತ 6649 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಈವರೆಗೆ 12,48,313 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,25,475 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 16,188 ಮಂದಿ ಮೃತಪಟ್ಟಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು ನಗರ 156, ದಕ್ಷಿಣ ಕನ್ನಡ 38, ಹಾಸನ 32, ಮೈಸೂರು 56, ತುಮಕೂರು 13, ಉತ್ತರ ಕನ್ನಡ 12, ಶಿವಮೊಗ್ಗ 11, ಕೊಡಗು 9, ಧಾರವಾಡ 7, ಬೆಳಗಾವಿ, ಬೆಂಗಳೂರು ಗ್ರಾಮಾಂತರ 5, ಬಳ್ಳಾರಿ, ದಾವಣಗೆರೆ, ಕೋಲಾರ 4, ರಾಮನಗರ 3, ಚಾಮರಾಜನಗರ, ಬಾಗಲಕೋಟೆ 2, ಮಂಡ್ಯ, ರಾಯಚೂರು 1

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 5, ದಕ್ಷಿಣ ಕನ್ನಡ, ಬೆಳಗಾವಿ, ತುಮಕೂರು, ಉಡುಪಿ, ಉತ್ತರ ಕನ್ನಡ 1.

ಇದನ್ನೂ ಓದಿ: ‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ
ಇದನ್ನೂ ಓದಿ: Coronavirus cases in India ಭಾರತದಲ್ಲಿ 18,166 ಹೊಸ ಕೊವಿಡ್ ಪ್ರಕರಣ ಪತ್ತೆ, 24 ಮಂದಿ ಸಾವು