Covid 19 Karnataka Update: ಕರ್ನಾಟಕದಲ್ಲಿ 4436 ಮಂದಿಗೆ ಸೋಂಕು, 123 ಸಾವು
ಬೆಂಗಳೂರಿನಲ್ಲಿ ಒಂದೇ ದಿನ 1,008 ಜನರಿಗೆ ಸೋಂಕು ದೃಢಪಟ್ಟಿದ್ದು, 24 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,19,465ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 4,436 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 123 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 1,008 ಜನರಿಗೆ ಸೋಂಕು ದೃಢಪಟ್ಟಿದ್ದು, 24 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,19,465ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 26,68,705 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 34,287 ಜನರು ಮೃತಪಟ್ಟಿದ್ದಾರೆ. ಪ್ರಸ್ತುತ 1,16,450 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 1008 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 12,081,04ಕ್ಕೆ ಏರಿಕೆಯಾಗಿದೆ. ಈ ಪೈಕಿ 11,233,23 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 24 ಜನರು ಮೃತಪಟ್ಟಿದ್ದಾರೆ. ನಗರದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,523ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಪ್ರಸ್ತುತ 69,257 ಸಕ್ರಿಯ ಪ್ರಕರಣಗಳಿವೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 1008 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 9, ಬಳ್ಳಾರಿ 42, ಬೆಳಗಾವಿ 179, ಬೆಂಗಳೂರು ಗ್ರಾಮಾಂತರ 125, ಬೀದರ್ 1, ಚಾಮರಾಜನಗರ 89, ಚಿಕ್ಕಬಳ್ಳಾಪುರ 103, ಚಿಕ್ಕಮಗಳೂರು 163, ಚಿತ್ರದುರ್ಗ 57, ದಕ್ಷಿಣ ಕನ್ನಡ 538, ದಾವಣಗೆರೆ 119, ಧಾರವಾಡ 90, ಗದಗ 15, ಹಾಸನ 301, ಹಾವೇರಿ 24, ಕಲಬುರಗಿ 41, ಕೊಡಗು 152, ಕೋಲಾರ 92, ಕೊಪ್ಪಳ 32, ಮಂಡ್ಯ 110, ಮೈಸೂರು 499, ರಾಯಚೂರು 21, ರಾಮನಗರ 26, ಶಿವಮೊಗ್ಗ 219, ತುಮಕೂರು 126, ಉಡುಪಿ 135, ಉತ್ತರ ಕನ್ನಡ 104, ವಿಜಯಪುರ 7, ಯಾದಗಿರಿ 9 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 123 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 24 ಜನರು ಮೃತಪಟ್ಟಿದ್ದಾರೆ. ಮೈಸೂರು 18, ದಕ್ಷಿಣ ಕನ್ನಡ 13, ಬಳ್ಳಾರಿ 10, ಧಾರವಾಡ 9, ದಾವಣಗೆರೆ 8, ಹಾಸನ 6, ಬೆಳಗಾವಿ 5, ಶಿವಮೊಗ್ಗ, ಉಡುಪಿ ತಲಾ 4, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ ತಲಾ 3, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ತುಮಕೂರು, ಉತ್ತರ ಕನ್ನಡ, ವಿಜಯಪುರದಲ್ಲಿ ತಲಾ 2, ಕೊಡಗು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿನಿಂತ ಮೃತಪಟ್ಟವರ ಒಟ್ಟು ಸಂಖ್ಯೆ 34,287ಕ್ಕೆ ಏರಿಕೆಯಾಗಿದೆ.
ಇಂದಿನ 23/06/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/xZqfkLHHI0
@CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/8rh4R7Qvmv
— K’taka Health Dept (@DHFWKA) June 23, 2021
(Coronavirus Karnataka Numbers 4436 people infected of Covid 123 deaths June 23)
ಇದನ್ನೂ ಓದಿ: Delta Plus Variant: ಕರ್ನಾಟಕದಲ್ಲಿ ಇದುವರೆಗೆ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿಲ್ಲ; ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?