Covid 19 Karnataka Update: ಕರ್ನಾಟಕದಲ್ಲಿ 4867 ಮಂದಿಗೆ ಕೊರೊನಾ ಸೋಂಕು, 142 ಸಾವು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆಯು 5 ಸಾವಿರಕ್ಕಿಂತಲೂ ಕಡಿಮೆಯಾಗಿರುವುದು ಮತ್ತು ಪಾಸಿಟಿವಿಟಿ ದರ ಶೇ 5ಕ್ಕೂ ಕಡಿಮೆಯಾಗಿರುವುದು ಇಂದಿನ ಗಮನಾರ್ಹ ಬೆಳವಣಿಗೆ ಎನಿಸಿದೆ.

Covid 19 Karnataka Update: ಕರ್ನಾಟಕದಲ್ಲಿ 4867 ಮಂದಿಗೆ ಕೊರೊನಾ ಸೋಂಕು, 142 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 21, 2021 | 8:22 PM

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ 4867 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 142 ಜನರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 3.25ಕ್ಕೆ ಇಳಿದಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆಯು 5 ಸಾವಿರಕ್ಕಿಂತಲೂ ಕಡಿಮೆಯಾಗಿರುವುದು ಮತ್ತು ಪಾಸಿಟಿವಿಟಿ ದರ ಶೇ 5ಕ್ಕೂ ಕಡಿಮೆಯಾಗಿರುವುದು ಇಂದಿನ ಗಮನಾರ್ಹ ಬೆಳವಣಿಗೆ ಎನಿಸಿದೆ.

ಬೆಂಗಳೂರಲ್ಲಿ 1034 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 28 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ. ಈವರೆಗೆ 26,54,139 ಜನರು ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 34,025 ಜನರು ಸಾವನ್ನಪ್ಪಿದ್ದಾರೆ. 1,23,134 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿ ಹೊಸದಾಗಿ 4867 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 1034 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ ಬಾಗಲಕೋಟೆ 23, ಬಳ್ಳಾರಿ 106, ಬೆಳಗಾವಿ 93, ಬೆಂಗಳೂರು ಗ್ರಾಮಾಂತರ 134, ಬೀದರ್ 12, ಚಾಮರಾಜನಗರ 109, ಚಿಕ್ಕಬಳ್ಳಾಪುರ 128, ಚಿಕ್ಕಮಗಳೂರು 152, ಚಿತ್ರದುರ್ಗ 138, ದಕ್ಷಿಣ ಕನ್ನಡ 542, ದಾವಣಗೆರೆ 176, ಧಾರವಾಡ 55, ಗದಗ 17, ಹಾಸನ 364, ಹಾವೇರಿ 18, ಕಲಬುರಗಿ 26, ಕೊಡಗು 206, ಕೋಲಾರ 90, ಕೊಪ್ಪಳ 26, ಮಂಡ್ಯ 154, ಮೈಸೂರು 546, ರಾಯಚೂರು 20, ರಾಮನಗರ 21, ಶಿವಮೊಗ್ಗ 217, ತುಮಕೂರು 182, ಉಡುಪಿ 117, ಉತ್ತರ ಕನ್ನಡ 119, ವಿಜಯಪುರ 34, ಯಾದಗಿರಿ 8 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 142 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 28 ಜನರು ಸಾವನ್ನಪ್ಪಿದ್ದಾರೆ. ಮೈಸೂರು 22, ದಕ್ಷಿಣ ಕನ್ನಡ 14, ಬಳ್ಳಾರಿ 12, ಧಾರವಾಡ 8, ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡ ತಲಾ ಐವರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ 4, ಚಿಕ್ಕಮಗಳೂರು, ಹಾಸನ, ತುಮಕೂರು 3, ಕೊಡಗು, ರಾಯಚೂರು, ಮಂಡ್ಯ ತಲಾ 2, ವಿಜಯಪುರ, ಉಡುಪಿ, ಗದಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೀದರ್​​, ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 34,025 ಜನರು ಮೃತಪಟ್ಟಿದ್ದಾರೆ.

(Coronavirus Karnataka Numbers 4857 infected 142 deaths due to covid on june 21)

ಇದನ್ನೂ ಓದಿ: School Reopening: ಕೊವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಸಾದ್ ಶೆಟ್ಟಿ ನಾಳೆ ನೀಡುವ ವರದಿ ಪರಿಶೀಲಿಸಿ ಶಾಲೆ ಆರಂಭದ ನಿರ್ಧಾರ: ಸಚಿವ ಸುರೇಶ್ ಕುಮಾರ್

ಇದನ್ನೂ ಓದಿ: ಕೊವಿಡ್ ನಿಯಮ ಉಲ್ಲಂಘಿಸಿದ ಸಚಿವ ಸಿ.ಪಿ.ಯೋಗೇಶ್ವರ್; ದೇವಸ್ಥಾನದಲ್ಲಿ ಕೇಕ್ ಕತ್ತರಿಸಿ ಪತ್ನಿ ಹುಟ್ಟುಹಬ್ಬ ಆಚರಣೆ

Published On - 8:05 pm, Mon, 21 June 21