Covid 19 Karnataka Update: ಕರ್ನಾಟಕದಲ್ಲಿ 6835 ಮಂದಿಗೆ ಕೊರೊನಾ ಸೋಂಕು, 120 ಮಂದಿ ಸಾವು
ಬೆಂಗಳೂರಲ್ಲಿ ಇಂದು ಒಂದೇ ದಿನ 1470 ಜನರಿಗೆ ಸೋಂಕು ದೃಢಪಟ್ಟಿದ್ದು, 12 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,71,969ಕ್ಕೆ ಏರಿಕೆಯಾಗಿದೆ. ಈ ಪೈಕಿ 25,66,774 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಸೋಮವಾರ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 7 ಸಾವಿರಕ್ಕೂ ಕಡಿಮೆ ವರದಿಯಾಗಿದೆ. ಒಟ್ಟು 6835 ಜನರಲ್ಲಿ ಸೋಂಕು ದೃಢಪಟ್ಟಿದ್ದು, 120 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 1470 ಜನರಿಗೆ ಸೋಂಕು ದೃಢಪಟ್ಟಿದ್ದು, 12 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,71,969ಕ್ಕೆ ಏರಿಕೆಯಾಗಿದೆ. ಈ ಪೈಕಿ 25,66,774 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 33,033 ಜನರು ಸಾವನ್ನಪ್ಪಿದ್ದಾರೆ. 1,72,141 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 1470 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 11,98,158ಕ್ಕೆ ಏರಿಕೆಯಾಗಿದೆ. ಈ ಪೈಕಿ 10,97,794 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಂದು 12 ಜನರು ಮೃತಪಟ್ಟಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 15,319ಕ್ಕೆ ಏರಿಕೆಯಾಗಿದೆ. 85,044 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಒಂದೇ ದಿನ 6,835 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 1470 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರು 670, ದಕ್ಷಿಣ ಕನ್ನಡ 648, ಹಾಸನ 507, ತುಮಕೂರು 386, ಶಿವಮೊಗ್ಗ 353, ಮಂಡ್ಯ 256, ಉತ್ತರ ಕನ್ನಡ 204, ಬಳ್ಳಾರಿ 203, ದಾವಣಗೆರೆ 200, ಚಿತ್ರದುರ್ಗ 195, ಬೆಳಗಾವಿ 191, ಚಿಕ್ಕಮಗಳೂರು 185, ಬೆಂಗಳೂರು ಗ್ರಾಮಾಂತರ 168, ಚಿಕ್ಕಬಳ್ಳಾಪುರ 160, ಉಡುಪಿ 122, ಚಾಮರಾಜನಗರ 119, ಕೋಲಾರ 115, ಕೊಡಗು 110, ಧಾರವಾಡ 103, ವಿಜಯಪುರ 103, ಕೊಪ್ಪಳ 95, ಹಾವೇರಿ 63, ಬಾಗಲಕೋಟೆ 57, ರಾಯಚೂರು 33, ಕಲಬುರಗಿ 31, ಗದಗ 28, ರಾಮನಗರ 26, ಯಾದಗಿರಿ 20, ಬೀದರ್ 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 120 ಜನರು ಸಾವನ್ನಪ್ಪಿದ್ದಾರೆ. 2ನೇ ಅಲೆ ಕಾಣಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ವರದಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 25 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ 12, ದಾವಣಗೆರೆ 10, ಧಾರವಾಡ 10, ಬಳ್ಳಾರಿ 6, ದಕ್ಷಿಣ ಕನ್ನಡ 6, ಶಿವಮೊಗ್ಗ 6, ಬೆಳಗಾವಿ, ಹಾವೇರಿ 5, ಬೆಂಗಳೂರು ಗ್ರಾಮಾಂತರ 3, ಹಾಸನ, ಕೊಡಗು, ಕೋಲಾರ, ಮಂಡ್ಯ, ತುಮಕೂರು ತಲಾ 3, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಪ್ಪಳ, ರಾಯಚೂರು, ಉಡುಪಿ ತಲಾ ಇಬ್ಬರು, ಚಿತ್ರದುರ್ಗ, ಕಲಬುರಗಿ, ಉತ್ತರ ಕನ್ನಡ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 33,033 ಜನರು ಸಾವನ್ನಪ್ಪಿದ್ದಾರೆ.
ಇಂದಿನ 14/06/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ. @CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi https://t.co/l3ADFEfQ0m pic.twitter.com/fgWHm5veVH
— K’taka Health Dept (@DHFWKA) June 14, 2021
(Coronavirus Karnataka Numbers Total Infection and Deaths in June 14)
ಇದನ್ನೂ ಓದಿ: ಕೊರೊನಾ ವೈರಸ್ ಚೀನಾದ ವುಹಾನ್ನಿಂದ ಹೊರಬಿದ್ದಿದ್ದು ಅಂತ ಭಾರತೀಯನನ್ನೊಳಗೊಂಡ ಹವ್ಯಾಸಿ ಪತ್ತೇದಾರರು ಪತ್ತೆ ಮಾಡಿದ್ದು ಹೀಗೆ!