Covid-19 Karnataka Update: ಕರ್ನಾಟಕದಲ್ಲಿ 12,209 ಜನರಿಗೆ ಕೊರೊನಾ ಸೋಂಕು, 320 ಸಾವು

ಬೆಂಗಳೂರಲ್ಲಿ 2,944 ಜನರಿಗೆ ಸೋಂಕು ದೃಢಪಟ್ಟಿದ್ದು, 187 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26,95,523ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 24,09,417 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Covid-19 Karnataka Update: ಕರ್ನಾಟಕದಲ್ಲಿ 12,209 ಜನರಿಗೆ ಕೊರೊನಾ ಸೋಂಕು, 320 ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 06, 2021 | 7:15 PM

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಒಟ್ಟು 12,209 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಟ್ಟು 320 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ 2,944 ಜನರಿಗೆ ಸೋಂಕು ದೃಢಪಟ್ಟಿದ್ದು, 187 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26,95,523ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 24,09,417 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,54,505 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೊನಾದಿಂದ 31,580 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 2944 ಜನರಿಗೆ ಸೋಂಕು ದೃಢಪಟ್ಟಿದ್ದು, 187 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 11,83,126ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 10,50,910 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಈವರೆಗೆ ಕೊರೊನಾದಿಂದ 14,875 ಜನರು ಮೃತಪಟ್ಟಿದ್ದಾರೆ. 1,17,340 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 2944 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 166, ಬಳ್ಳಾರಿ 285, ಬೆಳಗಾವಿ 418, ಬೆಂಗಳೂರು ಗ್ರಾಮಾಂತರ 277, ಬೀದರ್ 7, ಚಾಮರಾಜನಗರ 247, ಚಿಕ್ಕಬಳ್ಳಾಪುರ 348, ಚಿಕ್ಕಮಗಳೂರು 416, ಚಿತ್ರದುರ್ಗ 266, ಮಂಡ್ಯ 571, ದಾವಣಗೆರೆ 143, ಧಾರವಾಡ 262, ಕೊಡಗು 162, ಹಾಸನ 655, ಹಾವೇರಿ 138, ಕಲಬುರಗಿ 60, ಗದಗ 133, ಕೋಲಾರ 257, ಕೊಪ್ಪಳ 212, ದಕ್ಷಿಣ ಕನ್ನಡ 609, ಮೈಸೂರು 1237, ರಾಯಚೂರು 104, ರಾಮನಗರ 60, ಶಿವಮೊಗ್ಗ 456, ತುಮಕೂರು 698, ಉಡುಪಿ 494, ಉತ್ತರ ಕನ್ನಡ 360, ವಿಜಯಪುರ 190, ಯಾದಗಿರಿ 34 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 320 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ 187 ಜನರು ಮೃತಪಟ್ಟಿದ್ದಾರೆ. ಮೈಸೂರು 19, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 15, ಧಾರವಾಡ 9, ಹಾಸನ, ಕೋಲಾರದಲ್ಲಿ ತಲಾ 8, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಹಾವೇರಿ, ತುಮಕೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 6 ಜನರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ತಲಾ ಐವರು, ಗದಗ, ಕೊಡಗು, ವಿಜಯಪುರ ಜಿಲ್ಲೆಗಳಲ್ಲಿ ತಲಾ ನಾಲ್ವರು, ಉಡುಪಿ, ರಾಯಚೂರುಗಳಲ್ಲಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 31580 ಜನರ ಸಾವನ್ನಪ್ಪಿದ್ದಾರೆ.

(Coronavirus Karnataka Update 12209 People Infected from Covid 320 Deaths on June 6)

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಲ್ಲಿ ರೆಮ್​ಡೆಸಿವಿರ್ ಔಷಧ ಕೊಡಿಸುವುದಾಗಿ ಕೊವಿಡ್ ಸೋಂಕಿತರಿಗೆ ವಂಚನೆ

ಇದನ್ನೂ ಓದಿ: Coronavirus Cases in India: ದೇಶದಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 1.14 ಲಕ್ಷಕ್ಕೆ ಇಳಿಕೆ, 2677 ಮಂದಿ ಸಾವು

Published On - 7:14 pm, Sun, 6 June 21

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ