Covid-19 Karnataka Update: ಕರ್ನಾಟಕದಲ್ಲಿ 26,962 ಮಂದಿಗೆ ಕೊರೊನಾ ಸೋಂಕು, 190 ಸಾವು

ಬೆಂಗಳೂರಿನಲ್ಲಿ ಒಂದೇ ದಿನ 16,662 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 124 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,74,959ಕ್ಕೆ (12.74 ಲಕ್ಷ) ಏರಿಕೆಯಾಗಿದೆ.

Covid-19 Karnataka Update: ಕರ್ನಾಟಕದಲ್ಲಿ 26,962 ಮಂದಿಗೆ ಕೊರೊನಾ ಸೋಂಕು, 190 ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 23, 2021 | 8:08 PM

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಒಂದೇ ದಿನ 26,962 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 190 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 16,662 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 124 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,74,959ಕ್ಕೆ (12.74 ಲಕ್ಷ) ಏರಿಕೆಯಾಗಿದೆ. ಮೃತರ ಒಟ್ಟು ಸಂಖ್ಯೆ 14,075 ತಲುಪಿದೆ. ಸೋಂಕಿತರ ಪೈಕಿ 10,46,554 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,14,311 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 190 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 124 ಜನರು ಸಾವನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 8, ಕಲಬುರಗಿ 7, ಬಳ್ಳಾರಿ 6, ತುಮಕೂರು, ಕೋಲಾರ, ಧಾರವಾಡ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ಐವರು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾವೇರಿ ಜಿಲ್ಲೆಗಳಲ್ಲಿ ತಲಾ ನಾಲ್ವರು, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ಯಾದಗಿರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 14,075 ಜನರು ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 26,962 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂದರೆ, 16,662 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯಲ್ಲಿ ಸತತವಾಗಿ ಸೋಂಕು ಪ್ರಕರಣಗಳ ಸಂಖ್ಯೆ ಒಂದು ಸಾವಿರ ದಾಟುತ್ತಿದೆ. ಇಂದು ತುಮಕೂರು ಜಿಲ್ಲೆಯಲ್ಲಿ 1,004 ಪ್ರಕರಣಗಳು ದೃಢಪಟ್ಟಿದೆ. ಕಲಬುರಗಿ 742, ಬಳ್ಳಾರಿ 695, ಮೈಸೂರು 645, ಬೆಂಗಳೂರು ಗ್ರಾಮಾಂತರ 588, ಮಂಡ್ಯ 519, ಕೋಲಾರ 504, ದಕ್ಷಿಣ ಕನ್ನಡ 485, ಧಾರವಾಡ 472, ಚಿಕ್ಕಬಳ್ಳಾಪುರ 471, ವಿಜಯಪುರ 429, ರಾಯಚೂರು 428, ಬೀದರ್ 416, ಕೊಡಗು 295, ಉಡುಪಿ 282, ಚಾಮರಾಜನಗರ 249, ಚಿಕ್ಕಮಗಳೂರು 229, ಶಿವಮೊಗ್ಗ 225, ರಾಮನಗರ 206, ದಾವಣಗೆರೆ 200, ಉತ್ತರ ಕನ್ನಡ 181, ಹಾಸನ 148, ಚಿತ್ರದುರ್ಗ 133, ಬೆಳಗಾವಿ 120, ಯಾದಗಿರಿ 114, ಬಾಗಲಕೋಟೆ 88, ಕೊಪ್ಪಳ 84, ಗದಗ 74, ಹಾವೇರಿ 74 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

(Coronavirus Karnataka update 26962 covid19 infections 190 dead on April 23)

ಇದನ್ನೂ ಓದಿ: Coronavirus India Update: ದೇಶದಲ್ಲಿ ಒಂದೇ ದಿನ 2,263 ಸಾವು, 3.32 ಲಕ್ಷ ಕೊವಿಡ್ ಪ್ರಕರಣ ದಾಖಲು

ಇದನ್ನೂ ಓದಿ: Covid-19 Vaccine: ಮೇ 1ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ

Published On - 7:54 pm, Fri, 23 April 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?