AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 48,781 ಮಂದಿಗೆ ಸೋಂಕು ದೃಢ, 346 ಸಾವು

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 346 ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 7,491ಕ್ಕೆ ಏರಿಕೆಯಾಗಿದೆ.

Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 48,781 ಮಂದಿಗೆ ಸೋಂಕು ದೃಢ, 346 ಸಾವು
ಕೊರೊನಾ ವೈರಸ್
Ghanashyam D M | ಡಿ.ಎಂ.ಘನಶ್ಯಾಮ
|

Updated on:May 07, 2021 | 9:15 PM

Share

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಒಟ್ಟು 48,781 ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು 592 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 21,376 ಜನರಿಗೆ ಸೋಂಕು ತಗುಲಿದೆ. 346 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 18,38,885ಕ್ಕೆ (18.38 ಲಕ್ಷ) ಏರಿಕೆಯಾಗಿದೆ. ಸೋಂಕಿತರ ಪೈಕಿ 12,84,420 ಮಂದಿ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ 17,804 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 5,36,641 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 346 ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 7,491ಕ್ಕೆ ಏರಿಕೆಯಾಗಿದೆ. ನಗರದಲ್ಲಿ 3,41,978ಕ್ಕೆ ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 48,781 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 21,376, ತುಮಕೂರು 3040, ಹಾಸನ 2422, ಮೈಸೂರು 2246, ಕಲಬುರಗಿ 1722, ದಕ್ಷಿಣ ಕನ್ನಡ 1633, ಬಳ್ಳಾರಿ 1284, ಮಂಡ್ಯ 1110, ಉಡುಪಿ 976, ಬೆಳಗಾವಿ 965, ಬೆಂಗಳೂರು ಗ್ರಾಮಾಂತರ 959, ಧಾರವಾಡ 942, ಉತ್ತರ ಕನ್ನಡ 833, ಕೋಲಾರ 828, ರಾಯಚೂರು 762, ಚಿಕ್ಕಬಳ್ಳಾಪುರ 734, ಚಾಮರಾಜನಗರ 725, ಯಾದಗಿರಿ 714, ಬಾಗಲಕೋಟೆ 661, ಚಿಕ್ಕಮಗಳೂರು 632, ಕೊಡಗು 622, ಶಿವಮೊಗ್ಗ 563, ದಾವಣಗೆರೆ 538, ಕೊಪ್ಪಳ 523, ರಾಮನಗರ 501, ವಿಜಯಪುರ 445, ಬೀದರ್ 437, ಗದಗ 248, ಹಾವೇರಿ 214, ಚಿತ್ರದುರ್ಗ 126.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 592 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಅತಿಹೆಚ್ಚು ಅಂದರೆ 346 ಜನರು ಮೃತಪಟ್ಟಿದ್ದಾರೆ. ಬಳ್ಳಾರಿ 24, ಮೈಸೂರು 22, ಹಾಸನ 20, ಕಲಬುರಗಿ 19, ತುಮಕೂರು 15, ಶಿವಮೊಗ್ಗ 14, ಉತ್ತರ ಕನ್ನಡ 12, ಬೆಂಗಳೂರು ಗ್ರಾಮಾಂತರ 12, ಮಂಡ್ಯ 11, ಕೊಡಗು, ರಾಮನಗರ ಜಿಲ್ಲೆಯಲ್ಲಿ ತಲಾ 10, ಹಾವೇರಿ 9, ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತಲಾ 7 ಮಂದಿ, ಉಡುಪಿ, ವಿಜಯಪುರ 6, ಬೀದರ್ 5, ಚಿಕ್ಕಮಗಳೂರು, ರಾಯಚೂರು 4. ಗದಗ 3, ದಾವಣಗೆರೆ, ಕೋಲಾರ 2, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 17,804 ಜನರು ಸಾವನ್ನಪ್ಪಿದ್ದಾರೆ.

(Coronavirus Karnataka Update 48781 infections and 346 deaths due to covid on may 7)

ಇದನ್ನೂ ಓದಿ: Explainer: ಮಕ್ಕಳಿಗೆ ಸಮಸ್ಯೆ ತಂದೊಡ್ಡುವ ಕೊರೊನಾ 3ನೇ ಅಲೆ ಎದುರಿಸಲು ಸಿದ್ಧತೆ ಹೇಗಿರಬೇಕು? ತಜ್ಞರ ಅಭಿಪ್ರಾಯ ಇಲ್ಲಿದೆ

ಇದನ್ನೂ ಓದಿ: Explainer: ಲಸಿಕೆಗೆ ಬೇಡಿಕೆ ಹೆಚ್ಚು, ಪೂರೈಕೆಗೆ ಹಲವು ಸಮಸ್ಯೆ; ಉತ್ಪಾದನೆ ಹೆಚ್ಚಿಸಲು ಸರ್ಕಾರದ ಮುಂದಿರುವ ಆಯ್ಕೆಗಳೇನು?

Published On - 9:14 pm, Fri, 7 May 21

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ