AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರಿಗೆ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ

ಕೊರೊನಾ ರೂಪಾಂತರಿ ಹರಡುವಿಕೆ ಪ್ರಮಾಣ ಕಡಿಮೆ‌ ಮಾಡುವ ಉದ್ದೇಶದಿಂದ ಜೂನ್ 28ರಿಂದ ಈ ಕ್ರಮ ಜಾರಿಯಲ್ಲಿರಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರಿಗೆ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 28, 2021 | 9:44 PM

Share

ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಕರ್ನಾಟಕ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು‌ ಮುಂದಾಗಿದೆ. ಕರ್ನಾಟಕದ ನೆರೆಯ ರಾಜ್ಯಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಕಂಡುಬಂದಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಹೊಸ ಪ್ರಕರಣಗಳು ಆತಂಕ‌ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರ ಬಳಿ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ.

ಕೊರೊನಾ ರೂಪಾಂತರಿ ಹರಡುವಿಕೆ ಪ್ರಮಾಣ ಕಡಿಮೆ‌ ಮಾಡುವ ಉದ್ದೇಶದಿಂದ ಜೂನ್ 28ರಿಂದ ಈ ಕ್ರಮ ಜಾರಿಯಲ್ಲಿರಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ಕೊರೊನಾ ಹೆಚ್ಚಾಗುತ್ತಿದೆ. ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಟುಬರುತ್ತಿದೆ. ಹೀಗಾಗಿ ಗಡಿಭಾಗಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದೊಂದಿಗೆ ಗಡಿಭಾಗಗಳನ್ನು ಹಂಚಿಕೊಂಡಿದೆ. ಮೈಸೂರು, ಚಾಮರಾಜನಗರ, ಮಂಗಳೂರು, ಸುಳ್ಯ, ಪುತ್ತೂರು ಹಾಗೂ ದಕ್ಷಿಣ ಕನ್ನಡದ ಇನ್ನೂ ಕೆಲವು ಊರುಗಳು ಕೇರಳದ ಗಡಿಭಾಗವಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡದ ಕಾರವಾರದಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಬಗ್ಗೆ ನಿಗಾ ವಹಿಸಲಾಗುತ್ತದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿಯಂತೆ ಒಟ್ಟು 51 ಡೆಲ್ಟಾ ಪ್ಲಸ್ ಕೊರೊನಾ ಪ್ರಕರಣಗಳು ವರದಿಯಾಗಿದೆ. ದೇಶದ 12 ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಕೊರೊನಾ ಕಂಡುಬಂದಿದೆ. ಡೆಲ್ಟಾ ಪ್ಲಸ್ ಕೊವಿಡ್ ವೈರಾಣು ಡೆಲ್ಟಾದ ರೂಪಾಂತರವಾಗಿದೆ. ಡೆಲ್ಟಾ ರೂಪಾಂತರಿಯ ಕಾರಣದಿಂದಲೇ ಕೊರೊನಾ ಎರಡನೇ ಅಲೆ ಭಾರತದಲ್ಲಿ ಗಾಢ ಪರಿಣಾಮ ಬೀರಿತ್ತು.

ಈ ಮಧ್ಯೆ, ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಕಂಡುಬರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಇದನ್ನು ಕೆಲವು ತಜ್ಞರು ಅಲ್ಲಗಳೆದಿದ್ದಾರೆ. ಮುಂಬೈ ನಗರದಲ್ಲಿ ನಡೆಸಿರುವ ಸೆರೋ ಗಣತಿಯ ಪ್ರಕಾರ 18 ವರ್ಷದ ಒಳಗಿನ ಶೇಕಡಾ 51.18 ರಷ್ಟು ಮಕ್ಕಳ ದೇಹದಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ‌ ಶಕ್ತಿ ಇರುವುದು ಕಂಡುಬಂದಿದೆ. ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆ ಹಾಗೂ ಕಸ್ತೂರ್ಬಾ ಮಾಲಿಕ್ಯುಲರ್ ಡಯಾಗ್ನಿಸ್ಟಿಕ್ ಲ್ಯಾಬೊರೇಟರಿ ಏಪ್ರಿಲ್ 1ರಿಂದ ಜೂನ್ 15ರ ವರೆಗೆ ನಡೆಸಿರುವ ಈ ಸರ್ವೆ ಪ್ರಕಾರ ಈ‌ಮಾಹಿತಿ ದೃಢಪಟ್ಟಿದೆ.

ಇದನ್ನೂ ಓದಿ: ಮುಂಬೈನ ಶೇಕಡಾ 50ಕ್ಕೂ ಹೆಚ್ಚಿನ ಮಕ್ಕಳಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಕಂಡುಬಂದಿದೆ: ಸೆರೊ ಸರ್ವೆ

ಡೆಲ್ಟಾ ಪ್ಲಸ್ ರೂಪಾಂತರಿ ಲಸಿಕೆ ಪರಿಣಾಮಕಾರಿತ್ವವನ್ನು ಕಡಿಮೆ ಮಾಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಮಾಹಿತಿ ಇಲ್ಲ: ವಿ.ಕೆ.ಪೌಲ್

Published On - 8:48 pm, Mon, 28 June 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?