ಬೆಂಗಳೂರು: ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ಸೋಂಕಿತ ವ್ಯಕ್ತಿ ವಾಸವಿದ್ದ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಟೆಸ್ಟ್ ಮಾಡಿಸಲಾಗಿತ್ತು. ಆದ್ರೆ ವರದಿ ಬರುವುದಕ್ಕೂ ಮುನ್ನವೇ ಆತ ಬೆಂಗಳೂರಿಗೆ ಬಂದಿದ್ದ.
ಕೊರೊನಾ ವರದಿ ಪಾಸಿಟಿವ್ ಬಂದಾಗ ಆತ ಕೋಲಾರದಲ್ಲಿ ಇರಲಿಲ್ಲ. ಹಾಗಾಗಿ ಸೋಂಕಿತನ ಮೊಬೈಲ್ ನೆಟ್ವರ್ಕ್ ಟ್ರೇಸ್ ಮಾಡಿ ಸೋಂಕಿತನನ್ನು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಬಸವನಗುಡಿ ಬಳಿ ಸೋಂಕಿತ ಪತ್ತೆಯಾಗಿದ್ದು, ಆತ ಪತ್ನಿಯ ಮನೆಗೆ ಬಂದು ತಲೆಮರೆಸಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ. ಕೂಡಲೇ ಆತನನ್ನು ಆ್ಯಂಬುಲೆನ್ಸ್ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
Published On - 9:26 am, Sat, 16 May 20