AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘಿಸಿ ಚಿಕ್ಕಮಗಳೂರು, ರಾಯಚೂರು, ಬಾದಾಮಿಯಲ್ಲಿ ಜಾತ್ರೆ: ದೇಗುಲ ಟ್ರಸ್ಟಿಗಳ ವಿರುದ್ಧ ಮೊಕದ್ದಮೆ ದಾಖಲು

ಮಾಸ್ಕ್​ ಧರಿಸದೆ, ದೈಹಿಕ ಅಂತರ ಮರೆತು ಜನರು ಜಾತ್ರೆಯಲ್ಲಿ ಭಾಗಿಯಾಗಿದ್ದರು. ನಿಷೇಧದ ನಡುವೆಯೂ ಅದ್ಧೂರಿ ರಥೋತ್ಸವ ನಡೆಯಿತು.

ಕೊರೊನಾ ನಿಯಮ ಉಲ್ಲಂಘಿಸಿ ಚಿಕ್ಕಮಗಳೂರು, ರಾಯಚೂರು, ಬಾದಾಮಿಯಲ್ಲಿ ಜಾತ್ರೆ: ದೇಗುಲ ಟ್ರಸ್ಟಿಗಳ ವಿರುದ್ಧ ಮೊಕದ್ದಮೆ ದಾಖಲು
ಸಖರಾಯಪಟ್ಟಣದಲ್ಲಿ ಶಕುಲ ರಂಗನಾಥಸ್ವಾಮಿ ರಥೋತ್ಸವ ನಡೆಯಿತು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 17, 2022 | 11:02 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ 3ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ನಿಯಮಗಳನ್ನು ವಿಧಿಸಿ, ಕೊರೊನಾ ಮಾರ್ಗಸೂಚಿ ಹೊರಡಿಸಿದೆ. ಕೊವಿಡ್ ಶಿಷ್ಟಾಚಾರದ ಪ್ರಕಾರ ಜಾತ್ರೆ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೂ ರಾಜ್ಯದ ವಿವಿಧೆಡೆ ಜಾತ್ರೆಗಳು ನಡೆಯುತ್ತಲೇ ಇವೆ. ರಾಯಚೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೋಮವಾರ ಜಾತ್ರೆಗಳು ನಡೆದಿದ್ದು ಸಾವಿರಾಜು ಜನರು ಪಾಲ್ಗೊಂಡಿದ್ದರು.

ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮದಲ್ಲಿ ಸೋಮವಾರ ಅದ್ಧೂರಿಯಾಗಿ ವೀರಭದ್ರೇಶ್ವರ ಜಾತ್ರೆ ನಡೆಯಿತು. ಮಾಸ್ಕ್​ ಧರಿಸದೆ, ದೈಹಿಕ ಅಂತರ ಮರೆತು ಜನರು ಜಾತ್ರೆಯಲ್ಲಿ ಭಾಗಿಯಾಗಿದ್ದರು. ನಿಷೇಧದ ನಡುವೆಯೂ ಅದ್ಧೂರಿ ರಥೋತ್ಸವ ನಡೆಯಿತು.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಸಖರಾಯಪಟ್ಟದ ಶಕುನ ರಂಗನಾಥಸ್ವಾಮಿ ಜಾತ್ರೆಯೂ ಸೋಮವಾರ ನಡೆಯಿತು. ರಂಗನಾಥಸ್ವಾಮಿ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಜಾತ್ರೆ ನಡೆಸದಂತೆ ಜಿಲ್ಲಾಧಿಕಾರಿ ವಿಧಿಸಿದ್ದ ಆದೇಶವನ್ನೂ ಯಾರೂ ಲೆಕ್ಕಿಸಲಿಲ್ಲ. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಜಾತ್ರೆ ನಿಷೇಧಿಸಿದ್ದರು. ಡಿಸಿ ಆದೇಶ ನಿರ್ಲಕ್ಷಿಸಿಸ ಸಾವಿರಾರು ಭಕ್ತರು ರಥೋತ್ಸವ ನಡೆಸಿದರು.

ಬನಶಂಕರಿ ದೇಗುಲ ಟ್ರಸ್ಟಿಗಳು, ಗ್ರಾಮಸ್ಥರ ವಿರುದ್ಧ ಮೊಕದ್ದಮೆ ಸರ್ಕಾರದ ನಿಷೇಧಾಜ್ಞೆ ಉಲ್ಲಂಘಿಸಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಬನಶಂಕರಿ ದೇವಸ್ಥಾನದಲ್ಲಿ ರಥೋತ್ಸವ ನಡೆಸಿದ್ದ ಟ್ರಸ್ಟಿಗಳು, ಗ್ರಾಮಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತದ ಜತೆ ದೇಗುಲ ಸಮಿತಿ ಸಹಕರಿಸಲಿಲ್ಲ. ಕೊವಿಡ್​ ನಿಮಯವನ್ನೂ ಉಲ್ಲಂಘಿಸಲಾಯಿತು ಎಂದು ದೂರಪಾಗಿದೆ. ಗದಗ ಜಿಲ್ಲೆ ಮಾಡಲಗೇರಿ ಗ್ರಾಮದಿಂದ ಭಕ್ತರು ರಥ ಎಳೆಯುವ ಹಗ್ಗ ತಂದಿದ್ದರು. ಮಾಡಲಗೇರಿ ಗ್ರಾಮದ ಹಿರಿಯರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದೇಗುಲ ಪ್ರವೇಶಿಸದಂತೆ ನಾಕಾಬಂದಿ ಹಾಕಿದ್ದರೂ ಭಕ್ತರು ಬ್ಯಾರಿಕೇಡ್​ ತೆಗೆದು ಒಳನುಗ್ಗಿ ರಥೋತ್ಸವ ನೆರವೇರಿಸಿದ್ದರು. ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಾದಾಮಿ ಠಾಣೆಯಲ್ಲಿ ಬನಶಂಕರಿ ದೇವಸ್ಥಾನದ ಟ್ರಸ್ಟಿಗಳು, ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬಾಗಲಕೋಟೆ ಎಸ್​ಪಿ ಲೋಕೇಶ್ ಜಗಲಾಸರ್​ ಮಾಹಿತಿ ನೀಡಿದರು.

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 27,156 ಜನರಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 14 ಮಂದಿ ಸಾವು ಇದನ್ನೂ ಓದಿ: Corona Review Meeting: ಜನವರಿ 25ರ ಹೊತ್ತಿಗೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತೀವ್ರ: ಸಚಿವ ಆರ್ ಅಶೋಕ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ