ಬೆಂಗಳೂರು, ಜನವರಿ 15: ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು (Corona virus) ದೃಢಪಟ್ಟಿದೆ. ಆ ಮೂಲಕ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಯಲ್ಲಿ 3,123 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 863 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಮೈಸೂರು 8, ಬೆಳಗಾವಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ಬಳ್ಳಾರಿ 2, ಚಾಮರಾಜನಗರ 2, ಶಿವಮೊಗ್ಗ 2, ವಿಜಯನಗರ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿವೆ.
#COVID19 Media Bulletin – 15/01/2024 pic.twitter.com/ngwrt3TOUN
— K’taka Health Dept (@DHFWKA) January 15, 2024
ಕೊರೊನಾ ಬಳಿಕ ರಾಜಧಾನಿ ಬೆಂಗಳೂರಿನ ಶೇ 30 ರಷ್ಟು ಜನರಲ್ಲಿ ಗೊರಕೆ ಸಮಸ್ಯೆ ಕಾಣಿಸಿದೆ. ಇದು ಗೊರಕೆಗಷ್ಟೇ ಸೀಮಿತವಾಗದೆ, ಹೃದಯ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಬರುವ ಸಾಧ್ಯತೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.
ಇದನ್ನೂ ಓದಿ: ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ
ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್ ಆರ್ಭಟ; 199 ಜನರಲ್ಲಿ JN.1 ದೃಢ
ರಾಜ್ಯದ ಹೆಚ್ಚಿನ ಕುಟುಂಬಗಳಲ್ಲಿ ಒಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೋವಿಡ್ ಅಥವಾ ಇತರೆ ವೈರಲ್, ಜ್ವರದಂಥ ರೋಗಲಕ್ಷಣ ಹೊಂದಿದ್ದಾರೆ ಎಂದು ಲೋಕಲ್ ಸರ್ಕಲ್ಸ್ ಸಮೀಕ್ಷೆ ಇತ್ತೀಚೆಗೆ ತಿಳಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.