ಜೂನ್​ ತನಕವೂ ಕೊರೊನಾ ಎಚ್ಚರಿಕೆ ಅಗತ್ಯವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ; ಎಚ್ಚರ ಎಚ್ಚರಾ- ಆರೋಗ್ಯ ಸಚಿವ ಸುಧಾಕರ್

ಕರ್ನಾಟಕದಲ್ಲಿ ಜಾರಿಗೊಳಿಸಲಾದ ಕಠಿಣ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ತಾಂತ್ರಿಕ ಸಮಿತಿ ಜೂನ್​ ತಿಂಗಳ ತನಕವೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಪರಿಸ್ಥಿತಿ ಹೆಚ್ಚೂಕಡಿಮೆ ಆಗಲಿದೆ. ಕೊರೊನಾ ಬಿಗಡಾಯಿಸಬಾರದೆಂದರೆ ಮುನ್ನೆಚ್ಚರಿಕೆ ಬೇಕೇಬೇಕು.

ಜೂನ್​ ತನಕವೂ ಕೊರೊನಾ ಎಚ್ಚರಿಕೆ ಅಗತ್ಯವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ; ಎಚ್ಚರ ಎಚ್ಚರಾ- ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
Follow us
| Updated By: ಸಾಧು ಶ್ರೀನಾಥ್​

Updated on:Apr 03, 2021 | 11:14 AM

ಬೆಂಗಳೂರು: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಾವಳಿಗಳನ್ನು ಹೊರಡಿಸಿದೆ. ಕೊರೊನಾ ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಬೇರೆ ದಾರಿ ಇಲ್ಲ. ತಜ್ಞರ ವೈಜ್ಞಾನಿಕ ವರದಿ ಆಧಾರದ ಮೇಲೆಯೇ ನಿಯಮಗಳನ್ನು ರೂಪಿಸಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಜಾರಿಗೊಳಿಸಲಾದ ಕಠಿಣ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ತಾಂತ್ರಿಕ ಸಮಿತಿ ಜೂನ್​ ತಿಂಗಳ ತನಕವೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಪರಿಸ್ಥಿತಿ ಹೆಚ್ಚೂಕಡಿಮೆ ಆಗಲಿದೆ. ಕೊರೊನಾ ಬಿಗಡಾಯಿಸಬಾರದೆಂದರೆ ಮುನ್ನೆಚ್ಚರಿಕೆ ಬೇಕೇಬೇಕು. ತಾಂತ್ರಿಕ ಸಲಹಾ ಸಮಿತಿ ವರದಿ ತರಿಸಿಕೊಂಡು, ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿಯೇ ನಿರ್ಧಾರ ಕೈಗೊಂಡಿದ್ದೇವೆ. ಈ ಸಂದರ್ಭದಲ್ಲಿ ಬಂದ ಕೆಲ ಪ್ರಸ್ತಾವನೆಗಳನ್ನು ಅಳವಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಸದ್ಯ ಜಾರಿಗೊಳಿಸಿರುವ ಕಠಿಣ ನಿಯಮಗಳ ಪಾಲನೆ ಆಗಬೇಕು. ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‌ಡೌನ್ ಬಗ್ಗೆ ಇನ್ನೂ ಗೊತ್ತಿಲ್ಲ. ಅನ್​ಲಾಕ್​ ವಿಚಾರದಲ್ಲಿ ಕರ್ನಾಟಕ ರಾಜ್ಯವೇ ಮುಂದೆ ನಿಂತು ನಿಯಮ ಸಡಿಲಿಸಿತ್ತು. ಆದರೆ, ಈಗ ಅನಿವಾರ್ಯವಾಗಿ ಐದು ಸಾವಿರ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲೇ ಮೂರು ಸಾವಿರ ಪ್ರಕರಣಗಳು ಕಂಡುಬಂದಿವೆ. ಕಳೆದ ಬಾರಿ ಕೊವಿಡ್​ 19 ಪೀಕ್​ನಲ್ಲಿದ್ದಾಗ ನಾಲ್ಕೂವರೆ ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಮೈಮರೆಯುವಂತಿಲ್ಲ ಎಂದು ಸರ್ಕಾರದ ನಿಯಮಾವಳಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಜನಸಂದಣಿ ಇರೋ ಕಡೆ ಹೋಗ್ಲೇಬೇಡಿ ಎಂದು ಮನವಿ ಕೊವಿಡ್ ತಡೆಗೆ ಜನ ಎಚ್ಚೆತ್ತುಕೊಳ್ಳದಿದ್ದರೆ ಗಂಡಾಂತರ ಕಾದಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ, ನಿಮ್ಹಾನ್ಸ್ ವೈರಲಾಜಿಸ್ಟ್ ಡಾ.ರವಿ ಇದೇ ಸಂದರ್ಭದಲ್ಲಿ ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.

ಎರಡನೇ ಅಲೆಯಲ್ಲಿ ಕೊರೊನಾ ತೀವ್ರತೆ ಜೋರಾಗಿದೆ. ಹೆಚ್ಚು ಜನದಟ್ಟಣೆ ಇರುವ ಪ್ರದೇಶಗಳು ಅಪಾಯಕಾರಿ. ಜನಸಂದಣಿ ಇರೋ ಕಡೆ ಹೋಗ್ಲೇಬೇಡಿ ಎಂದು ಡಾ.ರವಿ ಮನವಿ ಮಾಡಿದ್ದಾರೆ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯುವಂತೆ ಸಲಹೆ ನೀಡಿರುವ ಡಾ.ರವಿ ಅವರು ಸರ್ಕಾರದ ಗೈಡ್​ಲೈನ್ಸ್​ ಚಾಚೂತಪ್ಪದೇ ಪಾಲಿಸಬೇಕು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿದ ಜನ; ಎರಡನೇ ಅಲೆ ಬಗ್ಗೆ ನಿರ್ಲಕ್ಷ್ಯ 

ಕೊರೊನಾ ತಡೆಗೆ ಹೊಸ ಮಾರ್ಗಸೂಚಿ: ಬಾರ್​, ರೆಸ್ಟೋರೆಂಟ್, ಜಿಮ್, ಸ್ವಿಮ್​ಗೆ ನಿರ್ಬಂಧ

Published On - 11:09 am, Sat, 3 April 21

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ