ರಾಜ್ಯದಲ್ಲಿಂದ 1240 ಹೊಸ ಕೊರೊನಾ ಕೇಸ್ ಪತ್ತೆ; ಒಂದಂಕಿಗೆ ಇಳಿದ ಸಾವಿನ ಸಂಖ್ಯೆ
ಬೆಂಗಳೂರಿನಲ್ಲಿಂದು 676 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. 6 ಜನರ ಪೈಕಿ ನಾಲ್ವರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ರಾಮನಗರದಲ್ಲಿ ಅತಿ ಕಡಿಮೆ ಎಂದರೆ 4 ಕೊರೊನಾ ಕೇಸ್ ಪತ್ತೆ ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ನಿಧಾನವಾಗಿ ತಗ್ಗತ್ತಿದೆ. ಇತ್ತೀಚೆಗೆ ಮೂರಂಕಿಗೆ ಇಳಿಕೆ ಆಗಿದ್ದ ಕೊರೊನಾ ಪ್ರಕರಣ ಈಗ ಮತ್ತೆ ಏರಿಕೆ ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1240 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,04,665ಕ್ಕೇರಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,971 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,77,199 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 15,476 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 248 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿಂದು 676 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. 6 ಜನರ ಪೈಕಿ ನಾಲ್ವರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ರಾಮನಗರದಲ್ಲಿ ಅತಿ ಕಡಿಮೆ ಎಂದರೆ 4 ಕೊರೊನಾ ಕೇಸ್ ಪತ್ತೆ ಆಗಿದೆ.
ಈಗಾಗಲೇ ತುರ್ತು ಬಳಕೆಗೆ ಕೊರೊನಾ ಔಷಧ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈಗಾಗಲೇ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸುತ್ತೋಲೆ ಕೂಡ ಹೊರಡಿಸಿದೆ. ದೇಶದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಒಪ್ಪಿಗೆ ಸಿಗುತ್ತಿದ್ದಂತೆ, ಜನರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಐಐಟಿ ಮದ್ರಾಸ್ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು: ವಿದ್ಯಾರ್ಥಿಗಳಿಗೆ ಇನ್ನು ಕೊರೊನಾ ಪರೀಕ್ಷೆ ಕಡ್ಡಾಯ