ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾದ ಕೊರೊನಾ.. ನಾಳೆಯಿಂದ ಹಳ್ಳಿಗಳಲ್ಲಿ ಸಂಪೂರ್ಣ ಲಾಕ್​ಡೌನ್

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ವಿಧಿಸಲಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾದ ಕೊರೊನಾ.. ನಾಳೆಯಿಂದ ಹಳ್ಳಿಗಳಲ್ಲಿ ಸಂಪೂರ್ಣ ಲಾಕ್​ಡೌನ್
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅನೇಕ ಸಂಕಷ್ಟಗಳನ್ನು ತಂದು ನಿಲ್ಲಿಸಿದೆ. ಅದರಲ್ಲೂ ಈ ಬಾರಿ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಲಾಕ್ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಿದ್ದಾರೆ. ಸದ್ಯ ಈಗ ಅನೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಣೆಯಾಗುತ್ತಿದೆ.

ಕೊರೊನಾ ತಡೆಯಲು ಸಹಕರಿಸಿ ಎಂದು ಮನವಿ ಮಾಡಿದ ಸಚಿವರು
ಹಾಸನದಲ್ಲಿ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ 4 ದಿನ ಕಂಪ್ಲೀಟ್ ಲಾಕ್‌ಡೌನ್ ಘೋಷಿಸಿದ್ದಾರೆ. ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಜಿಲ್ಲೆಯಲ್ಲಿ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಉಳಿದ ನಾಲ್ಕು ದಿನಗಳು ಸಂಪೂರ್ಣ ಲಾಕ್ಡೌನ್‌ ಇರಲಿದೆ. ಜನರು ಕೊರೊನಾ ತಡೆಯಲು ಸಹಕರಿಸಿ ಎಂದು ಕೆ. ಗೋಪಾಲಯ್ಯ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಲಾಕ್
ಚಿಕ್ಕಬಳ್ಳಾಪುರದಲ್ಲಿ ಮೇ 20 ರಿಂದ 23 ರವರೆಗೆ ಕಂಪ್ಲೀಟ್ ಲಾಕ್ಡೌನ್ ವಿಧಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಶಾಪ್, ಆಸ್ಪತ್ರೆಗೆ ಮಾತ್ರ ವಿನಾಯಿತಿ ನೀಡಲಾಗಿದ್ದು ಹಾಲಿನ ಬೂತ್‌ಗಳಿಗೆ ಬೆಳಗ್ಗೆ 6 ರಿಂದ 10ಗಂಟೆವರೆಗೂ ಮಾತ್ರ ಅವಕಾಶ ನೀಡಲಾಗಿದೆ. ಅಂತರ್ ಜಿಲ್ಲೆ, ಅಂತರ್ ರಾಜ್ಯ ಜಿಲ್ಲೆಯ ಪ್ರಯಾಣ ಸಂಪೂರ್ಣ ಬಂದ್ ಮಾಡಲಾಗಿದ್ದು ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಉತ್ತರ ಕನ್ನಡದ ಕಾರವಾರದಲ್ಲೂ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ದಿನಸಿ ಅಂಗಡಿ ತೆರೆಯಲು ಇದ್ದ ಪರ್ಮಿಷನ್ ಕೂಡಾ ರದ್ದು ಮಾಡಿದ್ದು ಮೇ 24 ರ ಬೆಳಗ್ಗೆ 10 ಗಂಟೆವರೆಗೂ ಅಂಗಡಿ ತೆರೆಯುವಂತಿಲ್ಲ. ಕಾರವಾರ, ದಾಂಡೇಲಿ ವಿಶೇಷ ಕಂಟೇನೆಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿದೆ. ಮದುವೆಗೆ 40 ಜನರ ಬದಲು 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಐತಿಹಾಸಿಕ ಪುಣ್ಯಕ್ಷೇತ್ರ ಉಚ್ಚಂಗಿದುರ್ಗ ಗ್ರಾಮ ಸಂಪೂರ್ಣ ಲಾಕ್ಡೌನ್ಗೆ ನಿರ್ಧರಿಸಲಾಗಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದಲ್ಲಿ ಎರಡು ದಿನಗಳಲ್ಲಿ ಮೂರು ಜನ‌ ಕೋವಿಡ್ಗೆ ಬಲಿಯಾಗಿದ್ದಾರೆ. ಹತ್ತಾರು ಜನರಿಗೆ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಮೇ 25ರ ವರೆಗೆ ಆಸ್ಪತ್ರೆ ಮೆಡಿಕಲ್ ಶಾಪ್ ಬಿಟ್ರೆ ಇಡೀ ಗ್ರಾಮದಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ಉಚ್ಚಂಗಿದುರ್ಗ ಗ್ರಾಪಂ ಅಧ್ಯಕ್ಷೆ ಮಮತಾ ಸಿದ್ದನಗೌಡ್ರ ನೇತ್ರತ್ವದಲ್ಲಿ ನಡೆದ ಟಾಸ್ಕ್ಪೋರ್ಸ್ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು. ಇಡೀ ಗ್ರಾಮದ ಜನರ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ.

ಬಳ್ಳಾರಿಯಲ್ಲೂ ಸಂಪೂರ್ಣ ಲಾಕ್ಡೌನ್
ನಾಳೆ ಬೆಳಗ್ಗೆ 10 ಗಂಟೆಯಿಂದ 5 ದಿನ ಸಂಪೂರ್ಣ ಲಾಕ್ಡೌನ್ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಘೋಷಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬರದಿದ್ರೆ ಇದೇ ಮುಂದುವರೆಯುತ್ತೆ. ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಲು ಮುಂದಾಗುತ್ತೇವೆ. ಕೊರೊನಾ 3ನೇ ಅಲೆ ಬಗ್ಗೆ ಕೂಡ ಪ್ರಧಾನಿ ಮೋದಿ ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈಗಿನಿಂದಲೇ ಸಿದ್ಧತೆ ಮಾಡ್ತಿದ್ದೇವೆ ಎಂದು ಆನಂದ್ ಸಿಂಗ್ ತಿಳಿಸಿದ್ದಾರೆ.

ಇನ್ನು ಗ್ರಾಮೀಣ ಭಾಗದಲ್ಲಿ ಕೊರೊನಾ ನಿಯಂತ್ರಣಕ್ಕೆ ಗ್ರಾ,ಪಂ ಸದಸ್ಯರಿಂದಿಡಿದು ಸಂಸದರವರೆಗೂ ಕೆಲಸ ಮಾಡಬೇಕು. ಚುನಾವಣೆಯಲ್ಲಿ ಸೋತ ವ್ಯಕ್ತಿಗಳನ್ನ ಕೂಡ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಚಂಡೀಗಡದಲ್ಲಿ ಟ್ರಾಯೆಜ್ ಚೆನ್ನಾಗಿ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಒಂದೊಂದು ಸಮಸ್ಯೆ ಇರುತ್ತವೆ. ಫ್ರಂಟ್ ಲೈನ್ ವರ್ಕರ್ನ್ನ ವಿಶ್ವಾಸಕ್ಕೆ ತೆಗೆದು ಕೊಳ್ಳಬೇಕು. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾಡೋದನ್ನ ಸವಾಲಾಗಿ ಸ್ವೀಕರಿಸಿದ್ದೇವೆ. ಜಿಲ್ಲಾಡಳಿತ ಹಗಲು ರಾತ್ರಿ ಕೆಲಸ ಮಾಡುತ್ತಿದೆ ಎಂದರು.

ಕಲಬುರಗಿಯಲ್ಲಿ 3 ದಿನ ಕಂಪ್ಲೀಟ್ ಲಾಕ್ಡೌನ್
ಕಲಬುರಗಿ ಜಿಲ್ಲೆಯಲ್ಲಿ 3 ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ತಿಳಿಸಿದ್ದಾರೆ. ಗುರುವಾರ, ಶುಕ್ರವಾರ, ಶನಿವಾರ ಸೇರಿ ಈ ವಾರ 3 ದಿನ ಸಂಪೂರ್ಣ ಲಾಕ್ಡೌನ್ ಮಾಡ್ತೇವೆ. ಇದನ್ನು ನೋಡಿಕೊಂಡು ಮುಂದಿನ ದಿನದಲ್ಲಿ ನಿರ್ಧಾರ ಮಾಡಲಾಗುತ್ತೆ. ತರಕಾರಿ, ದಿನಸಿ ಖರೀದಿಸಲು ಕೂಡಾ ಅವಕಾಶ ನೀಡಲ್ಲ. ಹೋಟೆಲ್ಗಳಲ್ಲಿ ಪಾರ್ಸೆಲ್ ಪಡೆಯಲು ಅವಕಾಶವಿರುತ್ತೆ ಎಂದು ವಿ.ವಿ.ಜೋತ್ಸ್ನಾ ತಿಳಸಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ 6 ದಿನ ಲಾಕ್‌ಡೌನ್
ಜಿಲ್ಲೆಯಾದ್ಯಂತ ವಾರದಲ್ಲಿ 6 ದಿನ ಸಂಪೂರ್ಣ ಲಾಕ್‌ಡೌನ್ ಮಾಡಲಾಗುತ್ತೆ ಎಂದು ಪ್ರಧಾನಿ ವಿಡಿಯೋ ಕಾನ್ಫರೆನ್ಸ್‌ ಬಳಿಕ DCM ಸವದಿ ಹೇಳಿಕೆ ನೀಡಿದ್ದಾರೆ. ನಾಳೆಯಿಂದ ಮೇ 22ರ ರಾತ್ರಿ 12ರವರೆಗೂ 3 ದಿನ ಲಾಕ್‌ಡೌನ್ ಬಳಿಕ 1 ದಿನ ಅಗತ್ಯವಸ್ತು ಖರೀದಿಗೆ ಅವಕಾಶ ನೀಡಲಾಗುತ್ತೆ. ನಾಳೆ ಅಗತ್ಯವಸ್ತು ಖರೀದಿಗೆ ಮಧ್ಯಾಹ್ನ 12ರವರೆಗೆ ಅವಕಾಶ ನೀಡಲಾಗಿದ್ದು ಜಿಲ್ಲೆಯಲ್ಲಿ 6 ದಿನ ಸಂಪೂರ್ಣ ಲಾಕ್‌ಡೌನ್ ವಿಧಿಸಲಾಗಿದೆ. ರಾಜ್ಯದ ಲಾಕ್‌ಡೌನ್ ಅನುಗುಣವಾಗಿ ಮುಂದೆ ಬದಲಾವಣೆ ಮಾಡಲಾಗುತ್ತೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಇದನ್ನೂ ಓದಿ:Lockdown Package: 2ನೇ ಹಂತದ ಲಾಕ್​ಡೌನ್ ಘೋಷಣೆ ವೇಳೆ ಸ್ವತಃ ಸಿಎಂ ಯಡಿಯೂರಪ್ಪರಿಂದಲೇ ಪ್ಯಾಕೇಜ್ ಘೋಷಣೆ; ಸಚಿವ ಆರ್ ಅಶೋಕ್