ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಹತ್ವದ ಅಪ್ಡೇಟ್
ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಅಕ್ಟೋಬರ್ 22) ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಲವು ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಬಾಕಿ ಇರುವ ಸಂಪುಟ ಭರ್ತಿ ಹಾಗೂ ನಿಗಮ ಮಂಡಳಿ ನೇಮಕ ವಿಚಾರ ಮಾತುಕತೆ ಮಾಡಿದ್ದಾರೆ. ಅಲ್ಲದೇ ನಿಗಮ ಮಂಡಳಿ ನೇಮಕ ಸಹ ಫೈನಲ್ ಆಗಿದ್ದು, ಪಟ್ಟಿಯನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದಾರೆ. ಆದ್ರೆ, ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಟ್ಟಿಯನ್ನು ಪ್ರಕಟಿಸಿಲ್ಲ. ಈ ಬಗ್ಗೆ ಸ್ವತಃ ಡಿಕೆಶಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ನವದೆಹಲಿ, ಅಕ್ಟೋಬರ್ 22: ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಅಕ್ಟೋಬರ್ 22) ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಲವು ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಬಾಕಿ ಇರುವ ಸಂಪುಟ ಭರ್ತಿ ಹಾಗೂ ನಿಗಮ ಮಂಡಳಿ ನೇಮಕ ವಿಚಾರ ಮಾತುಕತೆ ಮಾಡಿದ್ದಾರೆ. ಅಲ್ಲದೇ ನಿಗಮ ಮಂಡಳಿ ನೇಮಕ ಸಹ ಫೈನಲ್ ಆಗಿದ್ದು, ಪಟ್ಟಿಯನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದಾರೆ. ಆದ್ರೆ, ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಟ್ಟಿಯನ್ನು ಪ್ರಕಟಿಸಿಲ್ಲ. ಈ ಬಗ್ಗೆ ಸ್ವತಃ ಡಿಕೆಶಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಹೈಕಮಾಂಡ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನವದೆಹಲಿಗೆ ಬಂದ ಮೇಲೆ ಹೈಕಮಾಂಡ್ ಭೇಟಿ ಸಹಜ. ನಿಗಮ ಮಂಡಳಿ ನೇಮಕ ವಿಚಾರ ಚರ್ಚೆ ಮಾಡಿದ್ದೇವೆ ಸಂಪುಟ ಭರ್ತಿ ಬಗ್ಗೆಯೂ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಹೊಸಬರಿಗೆ ಅವಕಾಶ ಕೊಡಬೇಕು ಎಂದು ಹೇಳಿದ್ದೇನೆ. ಇನ್ನು ನಿಗಮ ಮಂಡಳಿ ಡೈರೆಕ್ಟರ್ ಹೆಸರು ಫೈನಲ್ ಮಾಡಿ ವರಿಷ್ಠರು ಕೊಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಪ್ರಕಟಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

