ಕೊನೆಗೂ ನಿಗಮ ಮಂಡಳಿ ನೇಮಕಕ್ಕೆ ಸಿಗಲಿದೆ ಮುಕ್ತಿ: ಶನಿವಾರ ಸಂಜೆಯೊಳಗೆ ಪಟ್ಟಿ ಪ್ರಕಟ

25 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ವಿಧಾನಪರಿಷತ್​ನ 4 ಅಥವಾ 5 ಸದಸ್ಯರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. 5-8 ಶಾಸಕರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಕೊನೆಗೂ ನಿಗಮ ಮಂಡಳಿ ನೇಮಕಕ್ಕೆ ಸಿಗಲಿದೆ ಮುಕ್ತಿ: ಶನಿವಾರ ಸಂಜೆಯೊಳಗೆ ಪಟ್ಟಿ ಪ್ರಕಟ
ಕೊನೆಗೂ ನಿಗಮ ಮಂಡಳಿ ನೇಮಕಕ್ಕೆ ಸಿಗಲಿದೆ ಮುಕ್ತಿ: ಶನಿವಾರ ಸಂಜೆಯೊಳಗೆ ಪಟ್ಟಿ ಪ್ರಕಟ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Dec 01, 2023 | 5:49 PM

ಬೆಂಗಳೂರು, ಡಿಸೆಂಬರ್ 1: ಕೊನೆಗೂ ನಿಗಮ ಮಂಡಳಿ ನೇಮಕ (Corporation Board Appointment) ಕಗ್ಗಂಟು ಬಗೆಹರಿಯುವ ಲಕ್ಷಣ ಕಾಣಿಸುತ್ತಿದ್ದು, ಶನಿವಾರ ಸಂಜೆಯೊಳಗೆ ಆಯ್ಕೆ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರ ನಾಯಕರ ಜತೆ ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಿದ್ದರು. ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, ನಿಗಮ ಮಂಡಳಿ ನೇಮಕಕ್ಕೆ ಸಂಬಂಧಿಸಿದ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಲಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದರು.

25 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ವಿಧಾನಪರಿಷತ್​ನ 4 ಅಥವಾ 5 ಸದಸ್ಯರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. 5-8 ಶಾಸಕರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವ ನಿರೀಕ್ಷೆ ಇದೆ. ಸಿಎಂಗೆ ಈಗಾಗಲೇ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕವಾಗಿದೆ. ಸಿಎಂಗೆ ಹೆಚ್ಚುವರಿಯಾಗಿ 5-8 ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಬಹುದು ಎನ್ನಲಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್​​​​ಗೂ 3-4 ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಬಹುದೆಂದು ಹೇಳಲಾಗಿದೆ. ಒಟ್ಟು 38ರಿಂದ 40 ಶಾಸಕರು ಅವಕಾಶದ ನಿರೀಕ್ಷೆಯಲ್ಲಿದ್ದಾರೆ. ನಿಗಮ ಮಂಡಳಿ, ರಾಜಕೀಯ ಕಾರ್ಯದರ್ಶಿ ಸೇರಿದಂತೆ 38-40 ಸ್ಥಾನಗಳಿಗೆ ಹೆಸರು ಘೋಷಣೆ ಮಾಡಬಹುದು ಎನ್ನಲಾಗಿದೆ.

ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕಾತಿಯಾಗಬಹುದು ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ.

ನಿಗಮ ಮಂಡಳಿ ನೇಮಕ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಉಂಟಾಗಿದೆ ಎಂದು ಹೇಳಲಾಗಿತ್ತು. ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ಕಲ್ಪಿಸುವ ಬಗ್ಗೆ ಸಿದ್ದರಾಮಯ್ಯ ಒಲವು ಹೊಂದಿದ್ದರೆ, ಕಾರ್ಯಕರ್ಗತರ ಪರ ಡಿಕೆ ಶಿವಕುಮಾರ್ ಒಲವು ಹೊಂದಿದ್ದಾರೆ ಎನ್ನಲಾಗಿತ್ತು. ಇದೇ ಕಾರಣಕ್ಕೆ, ರಾಜ್ಯ ಉಸ್ತುವಾರಿಗಳು ಬೆಂಗಳೂರಿಗೆ ಬಂದು ಹಲವು ಸುತ್ತಿನ ಸಭೆ ನಡೆಸಿದ್ದರೂ ಪಟ್ಟಿ ಅಂತಿಮಗೊಳಿಸುವುದು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ನಿಗಮ ಮಂಡಳಿಗೆ ನೇಮಕ, ಹೈಕಮಾಂಡ್​ಗೆ ಪಟ್ಟಿ ಕಳುಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಕೊನೆಯದಾಗಿ ನವೆಂಬರ್ 28ರಂದು ನಡೆದ ಸಭೆಯಲ್ಲಿ ಪಟ್ಟಿ ಅಂತಿಮಗೊಳಿಸಲಾಗಿತ್ತು. ನಿಗಮ ಮಂಡಳಿ ನೇಮಕಾತಿಯಲ್ಲಿ ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ನೀಡಲಾಗುವುದು. 2 ಹಾಗೂ 3ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೈಕಮಾಂಡ್​​ಗೆ ಪಟ್ಟಿ ರವಾನೆ ಬಳಿಕ ಸಿದ್ದರಾಮಯ್ಯ ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ