AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್

ಕರ್ನಾಟಕ ಗುತ್ತಿಗೆದಾರರ ಸಂಘದೊಳಗೇ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಸಂಘದ ಪದಾಧಿಕಾರಿಗಳು ಸಣ್ಣ ಗುತ್ತಿಗೆದಾರರಿಂದ ಟೆಂಡರ್ ಪ್ರಕ್ರಿಯೆಗೆ ಕಮಿಷನ್ (ಶೇ 2.5-3) ಕೇಳಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಆಗಿದೆ. ಅಲ್ಲದೆ, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್
ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್Image Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Feb 03, 2026 | 7:02 AM

Share

ಬೆಂಗಳೂರು, ಫೆಬ್ರವರಿ 3: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಹಾಗೂ ಸಚಿವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಆರೋಪ ಕೇಳಿಬಂದ ಬೆನ್ನಲ್ಲೇ, ಇದೀಗ ಅದೇ ಗುತ್ತಿಗೆದಾರರ ಸಂಘದೊಳಗೇ (Karnataka Contractors’ Association) ಭ್ರಷ್ಟಾಚಾರದ ಡೀಲ್ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೇ ಬಡ ಗುತ್ತಿಗೆದಾರರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದಲ್ಲದೇ, ಅದಕ್ಕೆ ಸಂಬಂಧಿಸಿದ ಆಡಿಯೋ ಸಹ ವೈರಲ್ ಆಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿವೆ.

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಅವರ ಸಂಗಡಿಗರು ವಿವಿಧ ಸರ್ಕಾರಿ ಇಲಾಖೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗಿಯಾಗಿದ್ದು, ಬಡ ಗುತ್ತಿಗೆದಾರರಿಂದ ಕಮಿಷನ್ ವಸೂಲಿಗೆ ಇಳಿದಿದ್ದಾರೆ ಎನ್ನಲಾಗಿದೆ. ಲೋಕೋಪಯೋಗಿ ಇಲಾಖೆ, ಇಂಧನ ಇಲಾಖೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ಇಲಾಖೆಗಳ ಟೆಂಡರ್‌ಗಳಲ್ಲಿ ಗೋಲ್ಮಾಲ್ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಭ್ರಷ್ಟಾಚಾರದ ಡೀಲ್‌ನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಜಗನ್ನಾಥ್ ಜಿ., ಶಿವಾಜಿ ಹಾಗೂ ನಿರ್ದೇಶಕ ಹೆಚ್.ಆರ್. ಚಿಂಚಳಿ ಅವರ ಹೆಸರುಗಳು ಕೇಳಿಬರುತ್ತಿವೆ. ಟೆಂಡರ್‌ಗೆ ಬಿಡ್ ಹಾಕಿರುವ ಬಡ ಗುತ್ತಿಗೆದಾರರಿಗೆ ಬಿಡ್ ವಾಪಸ್ ಪಡೆಯುವಂತೆ ಒತ್ತಡ ಹಾಕಲಾಗುತ್ತಿದ್ದು, ಇದಕ್ಕೆ ಒಪ್ಪದಿದ್ದರೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬಂದಿವೆ.

ಅಲ್ಲದೆ, ತಾವು ಹಾಕಿದ್ದ ಬಿಡ್ ವಾಪಸ್ ಪಡೆಯಬೇಕಾದರೆ ಗುತ್ತಿಗೆ ಮೊತ್ತದಲ್ಲಿ ಮೊದಲಿಗೆ ಶೇ 3ರಷ್ಟು ಕಮಿಷನ್ ನೀಡಬೇಕು ಎಂಬ ಬೇಡಿಕೆ ಇಡಲಾಗಿತ್ತು. ನಂತರ ಮಾತುಕತೆ ನಡೆದು ಶೇ 2.5ರಷ್ಟು ಕಮಿಷನ್‌ಗೆ ಒಪ್ಪಿಗೆ ನೀಡಲಾಗಿದೆ ಎನ್ನಲಾಗಿದೆ. ಗುತ್ತಿಗೆ ಸಿಕ್ಕ ಕೂಡಲೇ ಡೀಲಿಂಗ್ ಹಣವನ್ನು ನೀಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಲಾಗುತ್ತಿದೆ ಎಂಬ ಆರೋಪಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಬಾಕಿ ಬಿಲ್ ಕ್ಲಿಯರ್ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

ಡೀಲಿಂಗ್‌ಗೆ ಸಂಬಂಧಿಸಿದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಸಂಘದ ಪದಾಧಿಕಾರಿಯೇ ಭ್ರಷ್ಟಾಚಾರದ ಡೀಲ್ ಬಗ್ಗೆ ಮಾತನಾಡಿರುವುದು ಕೇಳಿಸಿದೆ. ಸರ್ಕಾರ ಹಾಗೂ ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿ ಹೋರಾಟ ನಡೆಸಿದ್ದ ಗುತ್ತಿಗೆದಾರರ ಸಂಘದೊಳಗೇ ಈ ರೀತಿ ಭ್ರಷ್ಟಾಚಾರ ನಡೆಯುತ್ತಿರುವ ಆರೋಪಗಳು ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಂಘದ ವಿಶ್ವಾಸಾರ್ಹತೆ ಬಗ್ಗೆಯೇ ಸಂಶಯ ಮೂಡುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ