ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಒಂದೊಂದು ಚಿಕಿತ್ಸೆಗೆ ಒಂದೊಂದು ರೇಟ್ ಫಿಕ್ಸ್

ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲವರಿಗೆ 3 ಸಾವಿರ ರೂ. ಸಿಜೇರಿಯನ್​​ಗೆ 20 ಸಾವಿರ ರೂ. ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ 30 ಸಾವಿರ ರೂ. ಅಂತ ಒಂದೊಂದು ಆಪರೇಷನ್​​ಗೆ ಒಂದೊಂದ ಹಣ ನಿಗದಿ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಆ ಹಣವನ್ನ ಸಂಗ್ರಹಿಸಿ ನರ್ಸ್​​ಗಳಿಗೆ ಕೊಡ್ಬೇಕಂತೆ. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನ ಸಂಗ್ರಹಿಸುತ್ತಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಒಂದೊಂದು ಚಿಕಿತ್ಸೆಗೆ ಒಂದೊಂದು ರೇಟ್ ಫಿಕ್ಸ್
ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Mar 24, 2024 | 6:16 PM

ಚಾಮರಾಜನಗರ, ಮಾರ್ಚ್​​ 24: ಬಡವರು, ಕೂಲಿ ಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾದ್ದರೆ ಹೋಗುವುದು ಸರ್ಕಾರಿ ಆಸ್ಪತ್ರೆಗೆ. ಆದರೆ ಅಂತ ಸರ್ಕಾರಿ ಆಸ್ಪತ್ರೆ (Government Hospital) ಯ ಸಿಬ್ಬಂದಿಗಳೇ ವಸೂಲಿಗೆ ನಿಂತ್ರೆ ಬಡ ಬಗ್ಗರ ಗತಿಯೇನು? ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಅಂತ ಫಿಕ್ಸ್ ಮಾಡಿ ಲಂಚ ಪಡೆಯುತ್ತಿರುವ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ ಈಗ ಬಟಾ ಬಯಲಾಗಿದೆ. ಜಿಲ್ಲೆಯ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದಾರೆ.

ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲವರಿಗೆ 3 ಸಾವಿರ ರೂ. ಸಿಜೇರಿಯನ್​​ಗೆ 20 ಸಾವಿರ ರೂ. ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ 30 ಸಾವಿರ ರೂ. ಅಂತ ಒಂದೊಂದು ಆಪರೇಷನ್​​ಗೆ ಒಂದೊಂದ ಹಣ ನಿಗದಿ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಆ ಹಣವನ್ನ ಸಂಗ್ರಹಿಸಿ ನರ್ಸ್​​ಗಳಿಗೆ ಕೊಡ್ಬೇಕಂತೆ. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನ ಸಂಗ್ರಹಿಸುತ್ತಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಶಿವರಾತ್ರಿ ಜಾತ್ರೆ: ಮಲೆಮಹದೇಶ್ವರ ದೇಗುಲದಲ್ಲಿ ಬರೋಬ್ಬರಿ ಆದಾಯ ಸಂಗ್ರಹ, ಇಲ್ಲಿದೆ ನೋಡಿ ವಿವರ

ಇದೇ ರೀತಿ ರಾಣಿ ಎಂಬ ಆಶಾ ಕಾರ್ಯಕರ್ತೆಗೆ 10 ಸಾವಿರ ರೂ. ಹಣವನ್ನ ಡೆಲವರಿ ರೋಗಿಗಳ ಬಳಿ ವಸೂಲಿ ಮಾಡೋಕೆ ಹೇಳಿದ್ರಂತೆ. ಇದಕ್ಕೊಪ್ಪದೆ ಇದ್ದಿದ್ದಕ್ಕೆ ವೈದ್ಯಾಧಿಕಾರಿ ರೇಣುಕಾದೇವಿ ಇಲ್ಲ ಸಲ್ಲದ ಆರೋಪ ಮಾಡಿ ಭ್ರಷ್ಟಾಚಾರ ವಿರುದ್ದ ಧ್ವನಿ ಎತ್ತಿದ್ದ ಆಶಾ ಕಾರ್ಯಕರ್ತೆ ರಾಣಿ ವಿರುದ್ದ ಮೆಮೋ ನೀಡಿದ್ದಾರೆ. ಅಸಲಿ ಆಶಾ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ನೋಟಿಸ್ ನೀಡಲು ಕಾನೂನಲ್ಲಿ ಅವಕಾಶವಿಲ್ಲ ಆದರೂ ಸಹ ಮೆಮೋ ನೀಡಿ ಈಗ ವೈದ್ಯಾಧಿಕಾರಿ ರೇಣುಕಾದೇವಿ ಅಡಕತ್ತರಿಗೆ ಸಿಲುಕಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಡಾಕ್ಟರ್ ಮೇಡಂ ಜಾತಿ ಅಸ್ತ್ರ ಪ್ರಯೋಗಿಸಿ ಅಟ್ರಾಸಿಟಿ ಕೇಸ್ ಹಾಕಿಸಿ ನಿನ್ನನ್ನ ಒಳಗೆ ಕಳಿಸುತ್ತೇನೆಂದು ಧಮ್ಕಿ ಹಾಕಿದ್ದಾರಂತೆ.

ಇದನ್ನೂ ಓದಿ: ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಲು ಹಣವಿಲ್ಲ ಅಂತ ಸರ್ಕಾರಿ ಆಸ್ಪತ್ರೆಗೆ ಬರುವ ಬಡ ಬಗ್ಗರ ಬಳಿಯೇ ಹಣ ಪಡೆದುಕೊಳ್ಳುವವರ ವಿರುದ್ದ ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ತಕ್ಕ ಶಾಸ್ತಿ ಮಾಡ್ಬೇಕಿದೆ. ಇಲ್ಲದೇ ಹೋದರೆ ಬಡ, ಬಗ್ಗರು ಚಿಕಿತ್ಸೆಯಿಂದ ವಂಚಿತರಾಗುವುದಂತು ಪಕ್ಕಾ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್