
ಬೆಂಗಳೂರು, ಅಕ್ಟೋಬರ್ 04: ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ (Coldrif syrup) ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ (Ban) ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಪತ್ರ ಬರೆಯುವ ಮೂಲಕ ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಮಾರಾಟ ಮಾಡದಂತೆ ಸೂಚನೆ ನೀಡಿದೆ.
ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಎಲ್ಲಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಗಳಿಗೆ ಪತ್ರ ಬರೆಯಲಾಗಿದ್ದು, ಕೋಲ್ಡ್ರಿಫ್ ಕಾಫ್ ಸಿರಪ್ ಮಾರಾಟ ಮಾಡದಂತೆ ಮೆಡಿಕಲ್ ಸ್ಟೋರ್ಸ್ ಹಾಗೂ ಡಿಸ್ಟ್ರಿಬ್ಯೂಟರ್ಗಳಿಗೆ ಸೂಚನೆ ನೀಡಿದೆ. ಜೊತೆಗೆ ಡೈಎಥಿಲೀನ್ ಗ್ಲೈಕಾಲ್ ಕಂಟೇಟ್ ಕಾಫ್ ಸಿರಪ್ ತಡೆಗೂ ಸೂಚಿಸಲಾಗಿದೆ.
ಇದನ್ನೂ ಓದಿ: ಕೆಮ್ಮಿನ ಸಿರಪ್ಗೆ 11 ಮಕ್ಕಳ ಬಲಿ, ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಆದೇಶ
ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳನಾಡಿನಲ್ಲೂ ಬ್ಯಾನ್ ಮಾಡಲಾಗಿದೆ. ಎಲ್ಲಾ ಸ್ಟಾಕ್‌ಗಳನ್ನು ಕೂಡ ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಮುಂದಿನ ಸರ್ಕಾರದ ಆದೇಶದವರೆಗೆ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕಾಫ್ ಸಿರಫ್ ಮಾರಟ ಮಾಡದ್ದಂತೆ ತಿಳಿಸಲಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಮಾರಾಟಗೊಂಡಿರುವ ಮತ್ತು ನಿಮ್ಮ ಬಳಿ ಇರುವ ಕೋಲ್ಡ್ರಿಫ್ ಸಿರಪ್‌ನ ಪ್ರಸ್ತುತ ಸ್ಟಾಕ್ ವಿವರಗಳನ್ನು ಡ್ರಗ್ಸ್ ಕಂಟ್ರೋಲ್ ಇಲಾಖೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.
ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ನಕಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಇಲ್ಲಿಯವರೆಗೆ 9 ಸಾವು, ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕೋಲ್ಡ್ರಿಫ್ ಎಂಬ ಕೆಮ್ಮಿನ ಔಷದಿ ತೆಗೆದುಕೊಂಡು ಈ ಸಾವುಗಳು ಸಂಭವಿಸಿವೆ ಅಂತಾ ಹೇಳಲಾಗುತ್ತಿದೆ. ಪ್ರಸ್ತುತ ಕೋಲ್ಡ್ರಿಫ್, ನೆಸ್ಟೋ ಡಿಎಸ್ ಕೆಮ್ಮಿನ ಸಿರಪ್‌ಗಳ ಮಾರಾಟವನ್ನು ಅವುಗಳ ಪರೀಕ್ಷಾ ವರದಿಗಳು ಬರುವವರೆಗೆ ನಿಷೇಧಿಸಲಾಗಿದೆ.
ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; 11 ಮಕ್ಕಳ ಸಾವಿನ ಬಳಿಕ ಕೇಂದ್ರ ಸರ್ಕಾರ ಎಚ್ಚರಿಕೆ
ಮಕ್ಕಳ ಸಾವುಗಳ ಬೆನ್ನಲ್ಲೇ ಕಾಫ್ ಸಿರಪ್ ಬಳಕೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಎರಡು ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡದಂತೆ ವೈದ್ಯರಿಗೆ ಸೂಚನೆ ನೀಡಿದೆ.
ಈ ಕುರಿತಾಗಿ ಮೈಸೂರಿನಲ್ಲಿ ಸಚಿವ ಮಹದೇವಪ್ಪ ಪ್ರತಿಕ್ರಿಯಿಸಿದ್ದು, ಮಾರುಕಟ್ಟೆಗೆ ಔಷಧ ಬಿಡುವ ಮುನ್ನವೇ ಪರೀಕ್ಷೆ ಮಾಡಬೇಕಿತ್ತು. ಈಗ ಬಳಸಬೇಡಿ ಅಂತಾ ಕೇಂದ್ರ ಹೇಳಿದ್ದು ಸರಿಯಾದ ಕ್ರಮ ಅಲ್ಲ ಅಂತಾ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:01 pm, Sat, 4 October 25