AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OBC Virat Convention:ಕಲಬುರಗಿಯಲ್ಲಿ ಬಿಜೆಪಿಯ ಓಬಿಸಿ ವಿರಾಟ್ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ

ಬಿಜೆಪಿಯು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ. ಕೆಸರಟಗಿ ಬಳಿ 40 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಸಮಾವೇಶಕ್ಕೆ ಕೊನೆಯ ಹಂತದ ತಯಾರಿ ನಡೆಯುತ್ತಿದೆ.

OBC Virat Convention:ಕಲಬುರಗಿಯಲ್ಲಿ ಬಿಜೆಪಿಯ ಓಬಿಸಿ ವಿರಾಟ್ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ
OBC Virat Convention
TV9 Web
| Updated By: ನಯನಾ ರಾಜೀವ್|

Updated on:Oct 30, 2022 | 9:53 AM

Share

ಬಿಜೆಪಿಯು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ. ಕೆಸರಟಗಿ ಬಳಿ 40 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಸಮಾವೇಶಕ್ಕೆ ಕೊನೆಯ ಹಂತದ ತಯಾರಿ ನಡೆಯುತ್ತಿದೆ. ಸರಿಸುಮಾರು ಎರಡು ಲಕ್ಷ ಜನ ಕೂತು ಕೊಳ್ಳಲು ಬೇಕಾದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದೆ.

ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಮುಖ್ಯ ಅತಿಥಿಗಳಾಗಿರುವರು. ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಕೇಂದ್ರದ ಸಚಿವರು, ರಾಜ್ಯದ ಸಚಿವರು, ಒಬಿಸಿ ಹಾಲಿ- ಮಾಜಿ ಶಾಸಕರು, ಜನಪ್ರತಿನಿಧಿಗಳು, ಮುಖಂಡರು ಬೃಹತ್ ಒಬಿಸಿ ವಿರಾಟ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್.ರವಿಕುಮಾರ್ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವಾಗ ಸಮಾಜದಲ್ಲಿರುವ ಹಿಂದುಳಿದ ವರ್ಗದವರನ್ನು ತನ್ನತ್ತ ಸೆಳೆಯಲು ಬಿಜೆಪಿ ಮುಂದಾಗಿದೆ, ಇದರ ಭಾಗವಾಗಿ ಸಮಾವೇಶವನ್ನು ಆಯೋಜಿಸುತ್ತಿದೆ.

ಸಮಾವೇಶದ ಹಿನ್ನೆಲೆ ಕಲಬುರಗಿಯ ಪ್ರಮುಖ ವೃತ್ತಗಳಲ್ಲಿ ಬಿಜೆಪಿಯ ಬಾವುಟಗಳು ಕಂಡುಬರುತ್ತಿವೆ. ಕಲಬುರಗಿ ಜಿಲ್ಲೆಯೊಂದರಿಂದಲೇ ಸುಮಾರು ಎರಡೂವರೆ ಲಕ್ಷ ಜನ ಪಾಲ್ಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಒಟ್ಟು 5 ಲಕ್ಷ ಮಂದಿ ಪಾಲ್ಗೊಳ್ಳಬಹುದು ಎಂದು ಅಂದಾಜಿಸಲಾಗಿದೆ.

200 ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕಾಗಿ ಬೃಹತ್‌ ಪೆಂಡಾಲ್‌ ವ್ಯವಸ್ಥೆ ಮಾಡಲಾಗಿದ್ದು, ವೇದಿಕೆಯ ಮುಂಭಾಗದಲ್ಲಿ ಎರಡೂವರೆ ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಬರಲು ರಾಜ್ಯಾದ್ಯಂತ 4 ಸಾವಿರ ಬಸ್ಸುಗಳು, 20 ಸಾವಿರ ನಾಲ್ಕುಚಕ್ರದ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕಲಬುರಗಿ ನಗರದ 50 ಕಲ್ಯಾಣ ಮಂಟಪಗಳಲ್ಲಿ ಜನರ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:51 am, Sun, 30 October 22

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್