DySp ಗಣಪತಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದ ಕೋರ್ಟ್
ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ. ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎಂ.ಎಂ.ಪ್ರಸಾದ್, ಪ್ರಣಬ್ ಮೊಹಂತಿಗೆ ನೋಟಿಸ್ ನೀಡಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಪುತ್ರ ನೇಹಾಲ್ ಅರ್ಜಿ ಸಲ್ಲಿಸಿದ್ದರು. ಸದ್ಯ ಈಗ ಬಿ ರಿಪೋರ್ಟನ್ನು ತಿರಸ್ಕರಿಸಿದ ನ್ಯಾಯಾಲಯ ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ.

ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟನ್ನು ನ್ಯಾಯಾಲಯ ತಿರಸ್ಕರಿಸಿದೆ.
ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ. ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎಂ.ಎಂ.ಪ್ರಸಾದ್, ಪ್ರಣಬ್ ಮೊಹಂತಿಗೆ ನೋಟಿಸ್ ನೀಡಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಪುತ್ರ ನೇಹಾಲ್ ಅರ್ಜಿ ಸಲ್ಲಿಸಿದ್ದರು. ಸದ್ಯ ಈಗ ಬಿ ರಿಪೋರ್ಟನ್ನು ತಿರಸ್ಕರಿಸಿದ ನ್ಯಾಯಾಲಯ ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ.




