ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗಿರುವ ಅಶ್ಲೀಲ ಸಿಡಿ ಪ್ರಕರಣದ ಶಂಕಿತ ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಜೂನ್ 2ಕ್ಕೆ ಮುಂದೂಡಿದೆ. ಈ ಸಂಬಂಧ ಸಿಟಿ ಸಿವಿಲ್ ಕೋರ್ಟ್ನ 91ನೇ ಕೋರ್ಟ್ ಆದೇಶ ನೀಡಿದೆ. ಬ್ಲಾಕ್ಮೇಲ್ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ಈ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಟಿ ಸಿವಿಲ್ ಕೋರ್ಟ್ನ ಮೇ 24ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆ ಪೊಲೀಸರಿಗೆ ನೊಟೀಸ್ ನೀಡಿದ್ದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 29ರಂದು ನಡೆಸುವುದಾಗಿ ಹೇಳಿತ್ತು. ಸಿಡಿ ಪ್ರಕರಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಎಸಗಲಾಗಿದೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಆಪಾದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಾದ ನರೇಶ್ ಮತ್ತು ಶ್ರವಣ್ ಅವರುಗಳು ತಲೆಮರಿಸಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಇವರಿಬ್ಬರಿಗಾಗಿ ಹುಡುಕಾಟ ನಡೆಸುತ್ತಿತ್ತು.
ಆರೋಪಿಗಳಾದ ನರೇಶ್, ಶ್ರವಣ್ಗೆ ಜಾಮೀನು ನೀಡಬಾರದು ಎಂದು ಎಸ್ಐಟಿ ಹೈಕೋರ್ಟ್ಗೆ ಮನವಿ ಸಲ್ಲಿಸಿತ್ತು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ನಲ್ಲಿ ಆರೋಪಿಗಳಾದ ನರೇಶ್ ಮತ್ತು ಶ್ರವಣ್ ಪಾತ್ರದ ಬಗ್ಗೆ ಹಲವು ಅನುಮಾನಗಳಿವೆ. ಇವರು ಹನಿಟ್ರ್ಯಾಪ್ ಸಂಚಿನ ಭಾಗವಾಗಿರುವ ಬಗ್ಗೆ ಹಲವು ದಾಖಲೆಗಳು ಸಿಕ್ಕಿವೆ. ಸಿಸಿಟಿವಿ ದೃಶ್ಯಗಳು ಹಾಗೂ ದಾಖಲಾತಿಗಳ ಸಹಿತ ಎಸ್ಐಟಿ ಕೋರ್ಟ್ಗೆ ಮನವಿ ಸಲ್ಲಿಸಿದೆ.
ಎಸ್ಪಿ ರೋಡಿನಲ್ಲಿ ದುಬಾರಿ ಕ್ಯಾಮರಾ ಖರೀದಿ ಪೊಲೀಸರ ಕೈಗೆ ಸಿಗದೆ, ಈವರೆಗೂ ಎಲ್ಲೆಲ್ಲಿ ತಿರುಗಿದ್ದಾರೆ ಎಂಬ ಮಾಹಿತಿಯನ್ನೂ ಪೊಲೀಸರು ನ್ಯಾಯಾಲಯಕ್ಕೆ ನೀಡಿದ್ದಾರೆ.
(Court Postpones hearing of anticipatory bail plea of suspects in Ramesh Jarkiholi CD Case)
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್ನಲ್ಲಿ ಆರೋಪಿಗಳಾದ ನರೇಶ್, ಶ್ರವಣ್ ಗೆ ಬೇಲ್ ನೀಡದಂತೆ ಎಸ್ಐಟಿಯಿಂದ ಮನವಿ
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ತನಿಖೆ ಮುಂದುವರಿಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್