AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ಕಂಡುಬಂದಿವೆ. ಮಕ್ಕಳು, ವೃದ್ಧರು ಮತ್ತು ಆರೋಗ್ಯ ಸಮಸ್ಯೆಗಳಿರುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸುವುದು ಮತ್ತು ಕೈಗಳ ನೈರ್ಮಲ್ಯ ಕಾಪಾಡುವುದು ಮುಖ್ಯ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 24, 2025 | 10:32 AM

Share

ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಕೊರೊನಾ ವೈರಸ್ (Coronavirus) ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ.

2025 ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಆದರೂ, ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಎಚ್ಚರಿಕೆ ವಹಿಸಬೇಕಾದ್ದುಅಗತ್ಯ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಮಾಸ್ಕ್ ಧರಿಸಿ ಓಡಾಡಿ

ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಯಮಿತವಾಗಿ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಲು ಸಲಹೆ ನೀಡಲಾಗಿದೆ.

ಇದನ್ನೂ ಓದಿ
Image
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
Image
ಮೇ 29 ರಿಂದ ಮದ್ಯದಂಗಡಿ ಬಂದ್: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲಾನ್
Image
ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ
Image
ಕರ್ನಾಟಕದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ವೈರಸ್ ಸೋಂಕು

ತೀವ್ರ ಉಸಿರಾಟದ ಕಾಯಿಲೆಯ ಲಕ್ಷಣಗಳನ್ನು ಹೊಂದಿರುವವರು ಸಕಾಲಿಕವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್ -19 ಪರೀಕ್ಷೆಯನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಒಂಬತ್ತು ತಿಂಗಳ ಮಗುವಿಗೆ ಕೋವಿಡ್ -19 ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಇದನ್ನು ದೃಢಪಡಿಸಿದ್ದಾರೆ. ಶಿಶುವಿಗೆ ಸೋಂಕು ತಗುಲಿರುವುದು ಮೇ 22 ರಂದು ರಾಪಿಡ್ ಆಂಟಿಜೆನ್ ಪರೀಕ್ಷೆ (ಆರ್‌ಎಟಿ) ನಡೆಸಿದಾಗ ದೃಢಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಶುಕ್ರವಾರ ದೃಢಪಡಿಸಿದ್ದಾರೆ.

ಮಗುವನ್ನು ಆರಂಭದಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆಒಯ್ಯಲಾಗಿತ್ತು. ನಂತರ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಮಗುವಿನ ಆರೋಗ್ಯ ಪ್ರಸ್ತುತ ಸ್ಥಿರವಾಗಿದ್ದು, ಸೂಕ್ತ ವೈದ್ಯಕೀಯ ಆರೈಕೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಮೇ ತಿಂಗಳಲ್ಲಿ ಒಟ್ಟು 33 ಪ್ರಕರಣ

ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮೇ 21 ರ ವೇಳೆಗೆ ರಾಜ್ಯದಲ್ಲಿ 16 ಸಕ್ರಿಯ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಈ ಪ್ರಕರಣ ನಡೆದಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ರಾಷ್ಟ್ರೀಯವಾಗಿ, ಭಾರತದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಮೇ 19 ರ ವೇಳೆಗೆ 257 ರಷ್ಟಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು