AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ ಕೋವಿಡ್ ಗೈಡ್‌ಲೈನ್ಸ್ ಬಿಡುಗಡೆ: ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ

ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಹೊಣೆ ನೀಡಿದೆ. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.

ಕೇಂದ್ರದಿಂದ ಕೋವಿಡ್ ಗೈಡ್‌ಲೈನ್ಸ್ ಬಿಡುಗಡೆ: ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:Dec 18, 2023 | 7:24 PM

Share

ಬೆಂಗಳೂರು, ಡಿಸೆಂಬರ್​​ 18: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ (Coronavirus) ರೂಪಾಂತರಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.

ಐಎಲ್​ಐ, ಸ್ಯಾರಿ ಕೇಸ್​ಗಳ ಮೇಲೆ ನಿಗಾ ಇಡಲು ಚಿಕಿತ್ಸೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ. ಆರ್ಟಿಪಿಸಿಆರ್ ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್​ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಹೊಣೆ ನೀಡಿದೆ.

ಹೆಚ್ಚಿನ ಸಂಖ್ಯೆಯ RT-PCR ಪರೀಕ್ಷೆ ಮಾಡುವುದದು ಮತ್ತು ಜೀನೋಮ್ ಅನುಕ್ರಮಕ್ಕಾಗಿ ಧನಾತ್ಮಕ ಮಾದರಿಗಳನ್ನು ಭಾರತೀಯ SARS COV-2 ಜೀನೋಮಿಕ್ಸ್ ಕನ್ಸೋರ್ಟಿಯಮ್ ಪ್ರಯೋಗಾಲಯಗಳಿಗೆ ಕಳುಹಿಸಿ, ಇದರಿಂದಾಗಿ ದೇಶದಲ್ಲಿ ಯಾವುದಾದರೂ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಸಚಿವಾಲಯವು ನಡೆಸುತ್ತಿರುವ ಡ್ರಿಲ್‌ನಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳ ಸಕ್ರಿಯ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿಕೊಳ್ಳುವುದು. ಅವುಗಳ ಸನ್ನದ್ಧತೆ ಮತ್ತು ಪ್ರತಿಕ್ರಿಯೆ ಸಾಮರ್ಥ್ಯಗಳನ್ನು ಪರಿಶೀಲಿಸುವುದು.

ಉಸಿರಾಟದ ನೈರ್ಮಲ್ಯವನ್ನು ಅನುಸರಿಸುವುದು ಸೇರಿದಂತೆ ಕೋವಿಡ್​ ನಿಯಂತ್ರಿಸುವಲ್ಲಿ ನಿರಂತರ ಬೆಂಬಲದೊಂದಿಗೆ ಸಮುದಾಯದ ಜಾಗೃತಿಯನ್ನು ಉತ್ತೇಜಿಸುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:10 pm, Mon, 18 December 23

Follow Us
Vinay Kashappanavar
Vinay Kashappanavar
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!