AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊವಿಡ್ ವರದಿ ವಿಳಂಬ: ಪ್ರಯಾಣಿಕರ ಆಕ್ರೋಶ

ವರದಿಗಾಗಿ 5 ಗಂಟೆಗಳಿಂದ ಕಾಯುತ್ತಿರುವ ಪ್ರಯಾಣಿಕರು ಅಸಮಾಧಾನ ಹೊರಹಾಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊವಿಡ್ ವರದಿ ವಿಳಂಬ: ಪ್ರಯಾಣಿಕರ ಆಕ್ರೋಶ
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು
TV9 Web
| Edited By: |

Updated on:Apr 06, 2022 | 10:55 PM

Share

ಬೆಂಗಳೂರು: ರೂಪಾಂತರಿ ಕೊರೊನಾ ಗದ್ದಲದ ಬಳಿಕ ಲಂಡನ್‌ನಿಂದ ಭಾರತಕ್ಕೆ ವಿಮಾನ ಹಾರಾಟ ಆರಂಭವಾಗಿದೆ. ಲಂಡನ್​ನಿಂದ ಬೆಂಗಳೂರಿಗೆ ಇಂದು ಮುಂಜಾನೆ 4.30ಕ್ಕೆ ಮೊದಲ ವಿಮಾನ ಆಗಮಿಸಿದೆ. ಲಂಡನ್‌ನಿಂದ ವಾಪಾಸಾದ ಭಾರತೀಯರಿಗೆ ಕೊವಿಡ್-19 ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಆ ಬಗ್ಗೆ ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಲಾಗಿತ್ತು.

ಆದರೆ, 4.30ರ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಪ್ರಯಾಣಿಕರು, ಕೊವಿಡ್ ಪರೀಕ್ಷಾ ವರದಿಗಾಗಿ ಇನ್ನೂ ಕಾಯುತ್ತಿದ್ದಾರೆ. ವರದಿಗಾಗಿ 5 ಗಂಟೆಗಳಿಂದ ಕಾಯುತ್ತಿರುವ ಪ್ರಯಾಣಿಕರು ಅಸಮಾಧಾನ ಹೊರಹಾಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಪ್ರಯೋಗಾಲಯ ತೆರೆಯದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಾಗೂ ಅಧಿಕಾರಿಗಳ ಗಂಟಲು ದ್ರವ ಮಾದರಿಯನ್ನು ನಿಮ್ಹಾನ್ಸ್​ಗೆ ಕಳುಹಿಸಲಾಗಿದೆ. ನಿನ್ನೆ, ಮೂರು ಗಂಟೆಯಲ್ಲಿ ವರದಿ ಬರುತ್ತದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದರು. ಆದರೆ, ಇಂದು 5 ಗಂಟೆ ಕಳೆದರೂ ವರದಿ ಬಂದಿಲ್ಲ. ಹಾಗಾಗಿ ಪ್ರಯಾಣಿಕರು ಸರ್ಕಾರದ ಕ್ರಮಗಳ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಲಂಡನ್​ನಿಂದ ಆಗಮಿಸಿದವರ ಮಾಹಿತಿ ಸಂಗ್ರಹ (ಡಾಟಾ ಎಂಟ್ರಿ) ಮಾಡುತ್ತಿದ್ದ ಸಿಬ್ಬಂದಿ‌ ಮೇಲೆ ಪ್ರಯಾಣಿಕರು ಗರಂ ಆಗಿದ್ದಾರೆ. ಪ್ರಯಾಣಿಕರನ್ನು ಸಮಾಧಾನಪಡಿಸಲು ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ. ಬೆಂಗಳೂರು, ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.

ದೇಶದ ಮೂಲೆ ಮೂಲೆಗೂ ಹಾರಲಿವೆ ಕೊರೊನಾ ಲಸಿಕೆ ಹೊತ್ತ ವಿಮಾನಗಳು!

Published On - 12:04 pm, Sun, 10 January 21

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ