ರಾಜ್ಯದಲ್ಲಿ ಇಂದು ಕೊವಿಡ್-19 ಸಾವು ಮತ್ತು ಸೋಂಕು ಇಳಿಮುಖ| Covid-19: Fewer deaths and positive cases in Karnataka today
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ದೊರೆತಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 21 ಜನ ಸತ್ತಿದ್ದಾರೆ ಮತ್ತು ಹೊಸದಾಗಿ 2,116 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೆ 11,474 ಜನ ಬಲಿಯಾಗಿದ್ದಾರೆ ಸೋಂಕಿತರ ಸಂಖ್ಯೆ 8,55,912 ತಲುಪಿದೆ. ಸೋಂಕಿತರ ಪೈಕಿ 8,14,949 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 29,470 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 8 […]
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ದೊರೆತಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 21 ಜನ ಸತ್ತಿದ್ದಾರೆ ಮತ್ತು ಹೊಸದಾಗಿ 2,116 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೆ 11,474 ಜನ ಬಲಿಯಾಗಿದ್ದಾರೆ ಸೋಂಕಿತರ ಸಂಖ್ಯೆ 8,55,912 ತಲುಪಿದೆ.
ಸೋಂಕಿತರ ಪೈಕಿ 8,14,949 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 29,470 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 8 ಜನ ಬಲಿಯಾಗಿದ್ದಾರೆ ಮತ್ತು 1, 069 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊವಿಡ್-19 ವ್ಯಾಧಿಯಿಂದ ಈವರೆಗೆ 3,985 ಜನ ಮರಣಿಸಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,54,215ಕ್ಕೇರಿದೆ.
ಸೋಂಕಿತರಲ್ಲಿ 3,32,287 ಜನ ಗುಣಮುಖರಾಗಿದ್ದಾರೆ ಮತ್ತು ಉಳಿದ17,942 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಿಕ್ಕಿರುವ ಮಾಹಿತಿ ತಿಳಿಸುತ್ತದೆ.