ಬೆಂಗಳೂರು ನಗರದಲ್ಲಿ 656 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. 211 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,63,618 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,39,931 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 7286 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 16,400 ಮಂದಿ ಮೃತಪಟ್ಟಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು ನಗರ 656, ಬಳ್ಳಾರಿ 6, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 5, ಚಾಮರಾನಗರ, ಚಿಕ್ಕಬಳ್ಳಾಪುರ, ರಾಮನಗರ, ಗದಗ, ಉತ್ತರ ಕನ್ನಡ, ವಿಜಯಪುರ 1, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 30, ಧಾರವಾಡ, ಮೈಸೂರು 9, ಹಾಸನ 11, ಕಲಬುರಗಿ 9, ಕೊಡಗು 21, ಕೋಲಾರ 8, ಮಂಡ್ಯ 7, ಶಿವಮೊಗ್ಗ 2, ತುಮಕೂರು 3, ಉಡುಪಿ 35.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 5, ದಕ್ಷಿಣ ಕನ್ನಡ, ಮಂಡ್ಯ, ಉತ್ತರ ಕನ್ನಡ 1
ವಿದೇಶಗಳಿಂದ ಬಂದ 9 ಮಂದಿಗೆ ಕೊರೊನಾ
ವಿವಿಧ ದೇಶಗಳಿಂದ ವಿಮಾನಗಳಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 9 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ.
ಇದನ್ನೂ ಓದಿ: Omicron: ಒಮಿಕ್ರಾನ್ ಮೊದಲು ಪತ್ತೆಯಾದ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಹೊಸ ಕೇಸುಗಳ ಸಂಖ್ಯೆ ಕುಸಿತ
ಇದನ್ನೂ ಓದಿ: Covid Update: ದೇಶದಲ್ಲಿ ಒಂದೇ ದಿನ 16,764 ಕೊರೊನಾ ಪ್ರಕರಣಗಳು ದಾಖಲು; ಒಮಿಕ್ರಾನ್ ಕೇಸ್ಗಳಲ್ಲೂ ತೀವ್ರ ಏರಿಕೆ