Covid-19 Karnataka Update: ಕರ್ನಾಟಕದಲ್ಲಿ 11,265 ಮಂದಿಗೆ ಕೊರೊನಾ ಸೋಂಕು, 38 ಜನರ ಸಾವು

Ghanashyam D M | ಡಿ.ಎಂ.ಘನಶ್ಯಾಮ

Ghanashyam D M | ಡಿ.ಎಂ.ಘನಶ್ಯಾಮ |

Updated on: Apr 14, 2021 | 7:02 PM

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 38 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 13,046ಕ್ಕೆ ಏರಿಕೆಯಾಗಿದೆ.

Covid-19 Karnataka Update: ಕರ್ನಾಟಕದಲ್ಲಿ 11,265 ಮಂದಿಗೆ ಕೊರೊನಾ ಸೋಂಕು, 38 ಜನರ ಸಾವು
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ (ಏಪ್ರಿಲ್ 14) ದಾಖಲೆ ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿಂದು ಹೊಸದಾಗಿ 11,265 ಜನರಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 10,94,912ಕ್ಕೆ (10.94 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 38 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 13,046ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 9,96,367 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 85,480 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 8,155 ಜನರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 5,02,024ಕ್ಕೆ (5 ಲಕ್ಷ) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 23 ಜನರು ಮೃತಪಟ್ಟಿದ್ದಾರೆ. ಕೊರೊನಾದಿಂದ ಈವರೆಗೆ ನಗರದಲ್ಲಿ 4,933 ಜನರು ಸಾವನ್ನಪ್ಪಿದ್ದಾರೆ. 5,02,024 ಸೋಂಕಿತರ ಪೈಕಿ 4,33,923 ಜನ ಗುಣಮುಖರಾಗಿದ್ದಾರೆ. 63,167 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 11,265 ಜನರಿಗೆ ಕೊರೊನಾ ದೃಢಪಟ್ಟಿದೆ. ಕೊರೊನಾ ಸೋಂಕು ಪ್ರಕರಣಗಳ ಜಿಲ್ಲಾವಾರು ಮಾಹಿತಿ ಇಲ್ಲಿದೆ.

ಬೆಂಗಳೂರು ನಗರ 8,155, ಕಲಬುರಗಿ 376, ಮೈಸೂರು 356, ಬೀದರ್ 290, ತುಮಕೂರು 245, ಬಳ್ಳಾರಿ 159, ದಕ್ಷಿಣ ಕನ್ನಡ 140, ಹಾಸನ 132, ಧಾರವಾಡ 127, ವಿಜಯಪುರ 122, ಕೋಲಾರ 116, ಉಡುಪಿ 110, ಬೆಳಗಾವಿ 107, ಶಿವಮೊಗ್ಗ 92, ಮಂಡ್ಯ 85, ಚಾಮರಾಜನಗರ 72, ಬಾಗಲಕೋಟೆ 68, ರಾಯಚೂರು 65, ಯಾದಗಿರಿ 58, ಬೆಂಗಳೂರು ಗ್ರಾಮಾಂತರ 48, ಚಿಕ್ಕಬಳ್ಳಾಪುರ 44, ಹಾವೇರಿ 44, ಚಿಕ್ಕಮಗಳೂರು 42, ಉತ್ತರ ಕನ್ನಡ 41, ಕೊಪ್ಪಳ 37, ರಾಮನಗರ 35, ದಾವಣಗೆರೆ 34, ಗದಗ 25, ಕೊಡಗು 23, ಚಿತ್ರದುರ್ಗ 17 ಜನರಲ್ಲಿ ಸೋಂಕು ದೃಢಪಟ್ಟಿದೆ.

ಎಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 38 ಜನರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 23 ಜನರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಐವರು, ಕಲಬುರಗಿ, ಧಾರವಾಡ ಜಿಲ್ಲೆಗಳಲ್ಲಿ ತಲಾ ಮೂವರು, ಬೀದರ್ ಜಿಲ್ಲೆಯಲ್ಲಿ ಇಬ್ಬರು, ತುಮಕೂರು, ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,046 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Covid India Update: ಭಾರತದಲ್ಲಿ ಒಂದೇ ದಿನ 1027 ಮಂದಿ ಸಾವು; 1.84 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ

ಇದನ್ನೂ ಓದಿ: Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada