Covid-19 Karnataka Update: ಕರ್ನಾಟಕದಲ್ಲಿ 8778 ಮಂದಿಗೆ ಕೊರೊನಾ ದೃಢ, 67 ಸಾವು

ಕರ್ನಾಟಕದಲ್ಲಿ ಇಂದು (ಏಪ್ರಿಲ್ 13) ಕೊರೊನಾ ಸೋಂಕಿನಿಂದ 67 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 13,008ಕ್ಕೆ ಏರಿಕೆಯಾಗಿದೆ.

Covid-19 Karnataka Update: ಕರ್ನಾಟಕದಲ್ಲಿ 8778 ಮಂದಿಗೆ ಕೊರೊನಾ ದೃಢ, 67 ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 13, 2021 | 7:55 PM

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 8,778 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 10,83,647ಕ್ಕೆ (10.83 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು (ಏಪ್ರಿಲ್ 13) ಕೊರೊನಾ ಸೋಂಕಿನಿಂದ 67 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 13,008ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಈವರೆಗೆ 9,92,003 (9.92 ಲಕ್ಷ) ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 78,617 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 5 ಸಾವಿರಕ್ಕೂ ಹೆಚ್ಚು ಜನರಿಗೆ ಅಂದರೆ 5,500 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 4,93,869ಕ್ಕೆ (4.93 ಲಕ್ಷ) ಏರಿಕೆಯಾಗಿದೆ. 4,93,869 ಸೋಂಕಿತರ ಪೈಕಿ 4,31,383 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ 55 ಜನರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,910 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 57,575 ಕೊವಿಡ್ ಸಕ್ರಿಯ ಪ್ರಕರಣಗಳಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಕೊರೊನಾ? ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 5500 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರು ಜಿಲ್ಲೆಯಲ್ಲಿ 492, ತುಮಕೂರು 350, ಕಲಬುರಗಿ 290, ಬೀದರ್ 198, ಬಳ್ಳಾರಿ 168, ಬೆಂಗಳೂರು ಗ್ರಾಮಾಂತರ 163, ಹಾಸನ 150, ದಕ್ಷಿಣ ಕನ್ನಡ 142, ಧಾರವಾಡ 132, ಮಂಡ್ಯ 114, ಚಿಕ್ಕಬಳ್ಳಾಪುರ 114, ವಿಜಯಪುರ 105 ಜಿಲ್ಲೆಗಳಲ್ಲಿ ಇಂದು ವರದಿಯಾದ ಸೋಂಕು ಪ್ರಕರಣಗಳು ಮೂರಂಕಿ ದಾಟಿವೆ.

ಶಿವಮೊಗ್ಗ 95, ರಾಯಚೂರು 80, ಉಡುಪಿ 75, ಉತ್ತರ ಕನ್ನಡ 75, ಬಾಗಲಕೋಟೆ 73, ಕೋಲಾರ 67, ದಾವಣಗೆರೆ 66, ಚಾಮರಾಜನಗರ 51, ಚಿತ್ರದುರ್ಗ 45, ಯಾದಗಿರಿ 45, ಬೆಳಗಾವಿ 42, ರಾಮನಗರ 37, ಗದಗ 30, ಕೊಪ್ಪಳ 29, ಚಿಕ್ಕಮಗಳೂರು 19, ಹಾವೇರಿ 17 ಮತ್ತು ಕೊಡಗು 14 ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿವೆ.

ಎಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 67 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂದರೆ 55 ಜನರು ಮೃತಪಟ್ಟಿದ್ದಾರೆ. ಉಳಿದಂತೆ ಕಲಬುರಗಿ ಜಿಲ್ಲೆಯಲ್ಲಿ 4, ಬೀದರ್, ಮೈಸೂರು, ಬೆಳಗಾವಿ, ಧಾರವಾಡ ಜಿಲ್ಲೆಯಲ್ಲಿ ಇಂದು ತಲಾ ಒಬ್ಬರು ಬಲಿಯಾಗಿದ್ದಾರೆ. ಹಾವೇರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,008 ಜನರು ಸಾವನ್ನಪ್ಪಿದ್ದಾರೆ.

(Covid-19 Karnataka Update coronavirus infection confirmed in 8778 people 67 deaths)

ಇದನ್ನೂ ಓದಿ: Coronavirus India Update: ಕಳೆದ 24 ಗಂಟೆಗಳಲ್ಲಿ 1.61ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ, 879 ಮಂದಿ ಸಾವು

ಇದನ್ನೂ ಓದಿ: Coronavirus: ವಿಶ್ವದಲ್ಲಿ ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ದೇಶಗಳ ಪಟ್ಟಿಯಲ್ಲಿ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ಭಾರತ

Published On - 7:49 pm, Tue, 13 April 21

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ