Covid-19 Karnataka Update: ಕರ್ನಾಟಕದಲ್ಲಿ ಇಂದು 10,250 ಮಂದಿಗೆ ಕೊರೊನಾ ಸೋಂಕು, 40 ಸಾವು

ಕರ್ನಾಟಕದಲ್ಲಿ ಭಾನುವಾರ ಒಂದೇ ದಿನ 10,250 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 40 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 7584 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4815 ಮುಟ್ಟಿದೆ.

Covid-19 Karnataka Update: ಕರ್ನಾಟಕದಲ್ಲಿ ಇಂದು 10,250 ಮಂದಿಗೆ ಕೊರೊನಾ ಸೋಂಕು, 40 ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 11, 2021 | 7:48 PM

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಒಂದೇ ದಿನ 10,250 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 40 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 12,889 ಕ್ಕೆ ಮುಟ್ಟಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 7584 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 27 ಜನರು ಮೃತಪಟ್ಟಿದ್ದಾರೆ. ಈವರೆಗೆ ಬೆಂಗಳೂರಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4815ಕ್ಕೆ ಮುಟ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 10,65,290ಕ್ಕೆ (10.65 ಲಕ್ಷ) ಮುಟ್ಟಿದೆ. ಸೋಂಕಿತರ ಪೈಕಿ 9,83,157 (9.83 ಲಕ್ಷ) ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 69,225 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 7584 ಜನರಿಗೆ ಸೋಂಕು ದೃಢಪಡುವ ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 4,81,982ಕ್ಕೆ (4.81 ಲಕ್ಷ) ಏರಿಕೆಯಾಗಿದೆ. ಈವರೆಗೆ 4815 ಜನರು ಗುಣಮುಖರಾಗಿದ್ದಾರೆ. 4,81,982 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 10,250 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 7584 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಕಲಬುರಗಿ 291, ಬೀದರ್ 290, ಮೈಸೂರು 277, ಹಾಸನ 170, ಧಾರವಾಡ 150, ತುಮಕೂರು 150, ದಕ್ಷಿಣ ಕನ್ನಡ 133, ಬೆಂಗಳೂರು ಗ್ರಾಮಾಂತರ 117, ರಾಯಚೂರು 103, ಬಳ್ಳಾರಿ 103 ಜಿಲ್ಲೆಗಳಲ್ಲಿ ಒಟ್ಟು ಸೋಂಕು ಪ್ರಕರಣಗಳು ಮೂರಂಕಿ ದಾಟಿದೆ.

ಉಡುಪಿ 75, ಬೆಳಗಾವಿ 74, ಉತ್ತರ ಕನ್ನಡ 73, ಚಿಕ್ಕಬಳ್ಳಾಪುರ 64, ವಿಜಯಪುರ 63, ಮಂಡ್ಯ 51, ದಾವಣಗೆರೆ 50, ಚಾಮರಾಜನಗರ 49, ಬಾಗಲಕೋಟೆ 46, ಕೋಲಾರ 41, ಚಿಕ್ಕಮಗಳೂರು 41, ಶಿವಮೊಗ್ಗ 39, ಕೊಡಗು 39, ಯಾದಗಿರಿ 38, ರಾಮನಗರ 33, ಚಿತ್ರದುರ್ಗ 33, ಕೊಪ್ಪಳ 32, ಹಾವೇರಿ 22, ಗದಗ ಜಿಲ್ಲೆಯಲ್ಲಿ 19 ಗಮನಾರ್ಹ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 40 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ 27 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು, ಬೆಳಗಾವಿ ಜಿಲ್ಲೆಯಲ್ಲಿ ತಲಾ ಮೂವರು, ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು, ಬೆಂಗಳೂರು ಗ್ರಾಮಾಂತರ, ಬೀದರ್, ಶಿವಮೊಗ್ಗ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 12,889ಕ್ಕೆ ಏರಿಕೆಯಾಗಿದೆ.

ಹಾಸನದಲ್ಲಿ 167, ವಿಜಯಪುರದಲ್ಲಿ 54 ಹಾಸನ ಜಿಲ್ಲೆಯಲ್ಲಿ ಇಂದು 167 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 30,572ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 29,092 ಸೋಂಕಿತರು ಗುಣಮುಖರಾಗಿದ್ದರೆ, ಕೊರೊನಾದಿಂದ ಒಟ್ಟು 479 ಜನರು ಮೃತಪಟ್ಟಿದ್ದಾರೆ. ಒಟ್ಟು 1,001 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯಪುರ ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 15,546ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿಗೆ 211 ಜನರು ಬಲಿಯಾಗಿದ್ದಾರೆ. 4,063 ಜನರ ಕೊವಿಡ್ ವರದಿಗೆ ಜಿಲ್ಲಾಡಳಿತ ಕಾಯುತ್ತಿದೆ.

ಮೈಸೂರಿನಲ್ಲಿ ನಿಲ್ಲದ ಕೊರೊನಾ ಮರಣ‌ ಮೃದಂಗ ಮೈಸೂರಿನಲ್ಲಿ ಇಂದು ಸಹ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ 13 ಸೋಂಕಿತರು ಮೃತಪಟ್ಟಿದ್ದಾರೆ. ಇಂದು 277 ಹೊಸ ಪ್ರಕರಣಗಳು ಪತ್ತೆಯಾಗಿವೆ. 198 ಮಂದಿ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 55,224ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 58,211. ಸಕ್ರಿಯ ಪ್ರಕರಣಗಳ ಸಂಖ್ಯೆ 1904. ಈವರೆಗೆ ಕೊರೊನಾದಿಂದ ಒಟ್ಟು 1083 ಮಂದಿ ಸಾವನ್ನಪ್ಪಿದ್ದಾರೆ.

ಆಂಧ್ರದಲ್ಲಿ ಏಕಾಏಕಿ ಕೊವಿಡ್ ಹೆಚ್ಚಳ ಆಂಧ್ರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,495 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸೋಂಕಿನಿಂದ 9 ಜನರು ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ 100ಕ್ಕಿಂತ ಕಡಿಮೆ ಕೇಸ್ ಇತ್ತು. ಈಗ ಏಕಾಏಕಿ 3 ಸಾವಿರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ.

(Covid-19 Karnataka Update coronavirus infection to 10250 people 40 death)

Published On - 7:36 pm, Sun, 11 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ