AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Karnataka Update: ಕರ್ನಾಟಕದಲ್ಲಿ 5279, ಬೆಂಗಳೂರಿನಲ್ಲಿ 3728 ಮಂದಿಗೆ ಕೊರೊನಾ ಸೋಂಕು

ಬೆಂಗಳೂರಿನಲ್ಲಿ ಸೋಮವಾರ ರಾಜ್ಯದಲ್ಲಿಯೇ ಅತಿಹೆಚ್ಚು ಅಂದರೆ, 3728 ಸೋಂಕು ಪ್ರಕರಣಗಳು ವರದಿಯಾಗಿವೆ. ನಗರದಲ್ಲಿ ಈವರೆಗೆ 4667 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 30,782 ಸಕ್ರಿಯ ಪ್ರಕರಣಗಳಿವೆ.

Covid-19 Karnataka Update: ಕರ್ನಾಟಕದಲ್ಲಿ 5279, ಬೆಂಗಳೂರಿನಲ್ಲಿ 3728 ಮಂದಿಗೆ ಕೊರೊನಾ ಸೋಂಕು
ಕೊರೊನಾ ಸೋಂಕು
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 05, 2021 | 7:47 PM

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ರಾಜ್ಯದಲ್ಲಿಂದು ಹೊಸದಾಗಿ 5279 ಜನರಿಗೆ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,20,434ಕ್ಕೆ (10.20 ಲಕ್ಷ) ಏರಿಕೆಯಾದಂತೆ ಆಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,657 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 9,65,275 (9.65 ಲಕ್ಷ) ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 42,483 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಸೋಮವಾರ ರಾಜ್ಯದಲ್ಲಿಯೇ ಅತಿಹೆಚ್ಚು ಅಂದರೆ, 3728 ಸೋಂಕು ಪ್ರಕರಣಗಳು ವರದಿಯಾಗಿವೆ. ನಗರದಲ್ಲಿ ಈವರೆಗೆ 4667 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 30,782 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ದಿನೇದಿನೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಒಟ್ಟು 198 ವಾರ್ಡ್​ಗಳ ಪೈಕಿ 150 ವಾರ್ಡ್​ಗಳಲ್ಲಿ ತಲಾ 50 ಸಕ್ರಿಯ ಕೇಸ್​ಗಳಿರಬಹುದು ಎಂದು ಶಂಕಿಸಲಾಗಿದೆ. ಉಳಿದ 48 ವಾರ್ಡ್​ಗಳಲ್ಲಿ 50ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿರಬಹುದು ಎಂದು ಅಂದಾಜಿಸಲಾಗಿದೆ.

ಕಲಬುರ್ಗಿ (181), ಮೈಸೂರು (165), ತುಮಕೂರು (139) ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಮೂರಂಕಿ ದಾಟಿದೆ. ಕೋಲಾರ ಜಿಲ್ಲೆಯಲ್ಲಿಂದು 82 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,769ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾ ಸೋಂಕಿಗೆ 180 ಮಂದಿ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ 9 ಮಂದಿಗೆ ಜನರಿಗೆ ಕೊರೊನಾ ದೃಢ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,704ಕ್ಕೆ ಏರಿಕೆಯಾಗಿದೆ. ದಾವಣಗೆರೆ ನಗರ 8, ಚನ್ನಗಿರಿ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಇಂದು 14 ಜನರಿಗೆ ಕೊರೊನಾ ದೃಢಪಟ್ಟಿದೆ.

ರಾಜ್ಯದಲ್ಲಿ ಸೋಮವಾರ ಒಂದೇ ದಿನ 74,135 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಈವರೆಗೆ ರಾಜ್ಯದಲ್ಲಿ ಲಸಿಕೆ ಪಡೆದವರ ಸಂಖ್ಯೆ 4,47,5,617 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 9,79,874 ಮಂದಿ ಮೊದಲ ಡೋಸ್ ಪಡೆದಿದ್ದರೆ, 5029 ಮಂದಿ ಎರಡೂ ಹಂತದ ಡೋಸ್​ಗಳನ್ನು ಪಡೆದುಕೊಂಡಿದ್ದಾರೆ.

(Covid-19 Karnataka Update Total 5279 new Coronavirus infections 32 deaths in Karnataka)

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ಪಾಸಿಟಿವ್

ಇದನ್ನೂ ಓದಿ: ಕಳೆದ ವರ್ಷದಂತೆ.. ಈ ಬಾರಿಯೂ ಬೆಂಗಳೂರು ಕರಗದ ಸಂಭ್ರಮಕ್ಕೆ ಕೊರೊನಾ ಬ್ರೇಕ್

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು