ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ರಾಜ್ಯದಲ್ಲಿಂದು ಹೊಸದಾಗಿ 5279 ಜನರಿಗೆ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,20,434ಕ್ಕೆ (10.20 ಲಕ್ಷ) ಏರಿಕೆಯಾದಂತೆ ಆಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,657 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 9,65,275 (9.65 ಲಕ್ಷ) ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 42,483 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಸೋಮವಾರ ರಾಜ್ಯದಲ್ಲಿಯೇ ಅತಿಹೆಚ್ಚು ಅಂದರೆ, 3728 ಸೋಂಕು ಪ್ರಕರಣಗಳು ವರದಿಯಾಗಿವೆ. ನಗರದಲ್ಲಿ ಈವರೆಗೆ 4667 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 30,782 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ದಿನೇದಿನೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಒಟ್ಟು 198 ವಾರ್ಡ್ಗಳ ಪೈಕಿ 150 ವಾರ್ಡ್ಗಳಲ್ಲಿ ತಲಾ 50 ಸಕ್ರಿಯ ಕೇಸ್ಗಳಿರಬಹುದು ಎಂದು ಶಂಕಿಸಲಾಗಿದೆ. ಉಳಿದ 48 ವಾರ್ಡ್ಗಳಲ್ಲಿ 50ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿರಬಹುದು ಎಂದು ಅಂದಾಜಿಸಲಾಗಿದೆ.
ಕಲಬುರ್ಗಿ (181), ಮೈಸೂರು (165), ತುಮಕೂರು (139) ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಮೂರಂಕಿ ದಾಟಿದೆ. ಕೋಲಾರ ಜಿಲ್ಲೆಯಲ್ಲಿಂದು 82 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,769ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾ ಸೋಂಕಿಗೆ 180 ಮಂದಿ ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 9 ಮಂದಿಗೆ ಜನರಿಗೆ ಕೊರೊನಾ ದೃಢ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,704ಕ್ಕೆ ಏರಿಕೆಯಾಗಿದೆ. ದಾವಣಗೆರೆ ನಗರ 8, ಚನ್ನಗಿರಿ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಇಂದು 14 ಜನರಿಗೆ ಕೊರೊನಾ ದೃಢಪಟ್ಟಿದೆ.
ರಾಜ್ಯದಲ್ಲಿ ಸೋಮವಾರ ಒಂದೇ ದಿನ 74,135 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಈವರೆಗೆ ರಾಜ್ಯದಲ್ಲಿ ಲಸಿಕೆ ಪಡೆದವರ ಸಂಖ್ಯೆ 4,47,5,617 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 9,79,874 ಮಂದಿ ಮೊದಲ ಡೋಸ್ ಪಡೆದಿದ್ದರೆ, 5029 ಮಂದಿ ಎರಡೂ ಹಂತದ ಡೋಸ್ಗಳನ್ನು ಪಡೆದುಕೊಂಡಿದ್ದಾರೆ.
ಇಂದಿನ 05/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/mnfZTegyLD @mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity pic.twitter.com/cA9Vt3YWfE
— K’taka Health Dept (@DHFWKA) April 5, 2021
(Covid-19 Karnataka Update Total 5279 new Coronavirus infections 32 deaths in Karnataka)
ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ಪಾಸಿಟಿವ್
ಇದನ್ನೂ ಓದಿ: ಕಳೆದ ವರ್ಷದಂತೆ.. ಈ ಬಾರಿಯೂ ಬೆಂಗಳೂರು ಕರಗದ ಸಂಭ್ರಮಕ್ಕೆ ಕೊರೊನಾ ಬ್ರೇಕ್