ಕರ್ನಾಟಕದಿಂದ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್

Kumbha Mela 2021: ನಮ್ಮಲ್ಲೂ ಕೂಡ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನಾಳೆ ಹಿರಿಯ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ಕರ್ನಾಟಕದಿಂದ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್
ಕುಂಭಮೇಳಕ್ಕೆ ಹೋಗಿಬಂದವರಿಗೆ ಕೊರೊನಾ ಟೆಸ್ಟ್
Follow us
guruganesh bhat
|

Updated on:Apr 15, 2021 | 3:36 PM

ಬೆಂಗಳೂರು: ಕುಂಭಮೇಳದ ಪವಿತ್ರ ಸ್ನಾನಕ್ಕೆ ಕರ್ನಾಟಕದಿಂದಲೂ ಭಕ್ತರು ತೆರಳಿದ್ದಾರೆ. ಕುಂಭಮೇಳದಲ್ಲಿ ಕೊರೊನಾ ಸೋಂಕಿತರು ಭಾಗವಹಿಸುವುದು ಕಂಡುಬಂದಿದೆ. ಅವರೆಲ್ಲರೂ ಕರ್ನಾಟಕಕ್ಕೆ ಬಂದ ಮೇಲೆ ಪ್ರತ್ಯೇಕ ವಾಸ ಮಾಡಿ, ಕೊರೊನಾ ಟೆಸ್ಟ್ ಮಾಡಿಸಬೇಕು. ಕೊರೊನಾ ನೆಗೆಟಿವ್ ಬಂದರೆ ಸರಿ, ಇಲ್ಲದಿದ್ದರೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ದೆಹಲಿ ಮತ್ತಿತರ ಕಡೆ ಜಾರಿಗೊಳಿಸಿದ ವಾರಾಂತ್ಯದ ಕರ್ಫ್ಯೂವನ್ನು ಸ್ವಾಗತಿಸುತ್ತೇವೆ. ಕೊರೊನಾ ಕೇಸ್​ ಹೆಚ್ಚಳವಾದ ಕಾರಣ ಈ ಕ್ರಮಗಳು ಅನಿವಾರ್ಯವಾಗಿವೆ. ನಮ್ಮಲ್ಲೂ ಕೂಡ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನಾಳೆ ಹಿರಿಯ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕಡ್ಡಾಯ ಸೇವೆಗೆ ಆದೇಶದ ಕುರಿತೂ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಕೆಲವು ವೈದ್ಯರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಪ್ರಮುಖರ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕುಂಭಮೇಳದ 3ನೇ ಶಾಹಿ ಸ್ನಾನದಲ್ಲಿ 13 ಲಕ್ಷ ಭಕ್ತರು ಭಾಗಿ, 5 ದಿನಗಳಲ್ಲಿ 2,167 ಮಂದಿಗೆ ಕೊವಿಡ್ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಏಪ್ರಿಲ್ 10ರಿಂದ ಈವರೆಗೆ 2,167 ಮಂದಿಗೆ ಕೊವಿಡ್ ದೃಢಪಟ್ಟಿದೆ. ಈ ಪೈಕಿ 18 ಸ್ವಾಮೀಜಿಗಳಿಗೆ ಕೊರೊನಾ ಸೋಂಕು ತಗಲಿದೆ. ಮಂಗಳವಾರ 9 ಸಾಮೀಜಿಗಳಿಗೆ ಸೋಂಕು ತಗುಲಿದ್ದು, ಇದಕ್ಕಿಂತ ಮುಂಚೆ 9 ಸ್ವಾಮೀಜಿಗಳಿಗೆ ಸೋಂಕು ತಗಲಿರುವುದು ದೃಢಪಟ್ಟಿತ್ತು ಎಂದು ಹರಿದ್ವಾರದ ಮುಖ್ಯ ವೈದ್ಯಕೀಯ ಅಧಿಕಾರಿ (CMO) ಡಾ.ಎಸ್.ಕೆ ಝಾ ಹೇಳಿದ್ದಾರೆ. ಏಪ್ರಿಲ್ 13 ಮತ್ತು ಏಪ್ರಿಲ್ 14ರಂದು ಕುಂಭ ಮೇಳದಲ್ಲಿ ಭಾಗವಹಿಸಿದ ಭಕ್ತರಿಗೆ ಆರ್​ಟಿಪಿಸಿಆರ್ ಪರೀಕ್ಷೆ ಮಾಡಿದರೆ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ಅವರು ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ ಎರಡು ಲಕ್ಷ ದಾಟಿದೆ. ಬುಧವಾರ ದೇಶದಲ್ಲಿ ಪತ್ತೆಯಾದ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2,00,739 ಆಗಿದ್ದು, 1,038 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಒಟ್ಟು ಸೋಂಕಿತರ ಸಂಖ್ಯೆ 1,40,74,564 (1.4 ಕೋಟಿಗೆ) ತಲುಪಿದ್ದು ಈವರೆಗೆ ಸಾವಿಗೀಡಾದವ ಸಂಖ್ಯೆ 1,73,123 ಆಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,71,877 ಆಗಿದ್ದು, 1,24,29,564 ಮಂದಿ ಚೇತರಿಸಿಕೊಂಡಿದ್ದಾರೆ. 11,44,93,238 ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

(Covid 19 test is compulsory for One who attend Kumbh Mela 2021 from Karnataka says Health Minister Dr K Sudhakar)

ಇದನ್ನೂ ಓದಿ: ಕುಂಭಮೇಳದ 3ನೇ ಶಾಹಿ ಸ್ನಾನದಲ್ಲಿ 13 ಲಕ್ಷ ಭಕ್ತರು ಭಾಗಿ, 5 ದಿನಗಳಲ್ಲಿ 2,167 ಮಂದಿಗೆ ಕೊವಿಡ್

Delhi Weekend Curfew: ಕೊರೊನಾ ತಡೆಗೆ ದೆಹಲಿಯಲ್ಲಿ ವೀಕೆಂಡ್​ ಕರ್ಫ್ಯೂ ಜಾರಿ

Published On - 3:27 pm, Thu, 15 April 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ