Covid 19 Vaccination: ಏಪ್ರಿಲ್ 1ರಿಂದಲೇ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ; ಕೇಂದ್ರ ಸರ್ಕಾರದಿಂದ ಘೋಷಣೆ

Corona Vaccination: ದೇಶದ ಎಲ್ಲ ಅರ್ಹರು ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯುವಂತೆ ಸಚಿವ ಪ್ರಕಾಶ್ ಜಾವಡೇಕರ್ ಮನವಿ ಮಾಡಿದ್ದಾರೆ. (Vaccination for all aged 45 and above starting April 1 says Centre Govt) 

Covid 19 Vaccination: ಏಪ್ರಿಲ್ 1ರಿಂದಲೇ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ; ಕೇಂದ್ರ ಸರ್ಕಾರದಿಂದ ಘೋಷಣೆ
ಕೊರೊನಾ ಲಸಿಕೆ
Follow us
guruganesh bhat
|

Updated on:Mar 23, 2021 | 3:51 PM

ದೆಹಲಿ: ಏಪ್ರಿಲ್ 1ರಿಂದ 45 ವರ್ಷ ಮತ್ತು ಮೇಲ್ಪಟ್ಟ ಸಾರ್ವಜನಿಕರಿಗೆ ಕರೊನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಕುರಿತು ಇನ್ನೂ ಹೆಚ್ಚಿನ ವಿವರ ತಿಳಿದುಬರಬೇಕಿದ್ದು, ಕೇಂದ್ರ ಸರ್ಕಾರ ಇಂದು ಮಧ್ಯಾಹ್ನ ಈ ಘೋಷಣೆ ಮಾಡಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು,  ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆಯ ಕೊರತೆ ಇಲ್ಲ. ಕಳೆದ 24 ಗಂಟೆಯಲ್ಲಿ 32 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಈವರೆಗೆ ದೇಶದಲ್ಲಿ ಒಟ್ಟು 4.8 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ದೇಶದ ಎಲ್ಲ ಅರ್ಹರು ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯಲು ಎಂದು ಸಚಿವ ಪ್ರಕಾಶ್ ಜಾವಡೇಕರ್ ಮನವಿ ಮಾಡಿದ್ದಾರೆ. (Vaccination for all aged 45 and above starting April 1 says Centre Govt) 

ಕರ್ನಾಟಕದಲ್ಲಿ ಲಸಿಕೆಯ ಕೊರೆತ ಇಲ್ಲ ಕರ್ನಾಟಕ ರಾಜ್ಯದಲ್ಲಿ 2 ದಿನಗಳಿಂದ ಕೊರೊನಾ ಕೇಸ್​ ಕಡಿಮೆಯಾಗಿವೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ಅವಲನಾಗೇನಹಳ್ಳಿಯಲ್ಲಿ ಹೇಳಿದರು. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಇದೆ ಎಂಬುದು ಸ್ಪಷ್ಟ. ಸಾರ್ವಜನಿಕರು ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸದೇ ಓಡಾಡಿದರೆ 250 ರೂಪಾಯಿ ದಂಡ ವಿಧಿಸಲಾಗುವುದು. ಕೇಂದ್ರ ಆರೋಗ್ಯ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ರಾಜ್ಯಕ್ಕೆ 12 ಲಕ್ಷದ 5 ಸಾವಿರ ಡೋಸ್​ ಲಸಿಕೆ ಕೊಡಲಿದ್ದಾರೆ. ನಾಳೆ 4 ಲಕ್ಷ ಡೋಸ್ ಲಸಿಕೆ ವಿಮಾನದ ಮೂಲಕ ಬರಲಿದೆ ಹಾಗಾಗಿ ಕರ್ನಾಟಕದಲ್ಲಿ ಕೊರೊನಾ ವ್ಯಾಕ್ಸಿನ್ ಕೊರತೆ ಇಲ್ಲ ಎಂದು ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

2021 ರ ಜನವರಿ 16 ರಿಂದ ದೇಶದ ಜನರಿಗೆ ಕೊರೊನಾ ಲಸಿಕೆ ವಿತರಣೆ ಆರಂಭವಾಗಿತ್ತು. ಆರಂಭದಲ್ಲಿ ಕೇಂದ್ರ ಸರ್ಕಾರ ಒಟ್ಟು 30 ಕೋಟಿ ಭಾರತೀಯರಿಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಿತ್ತು ಮೊದಲು  3 ಕೋಟಿ ಕೊರೊನಾ ವಾರಿಯರ್ಸ್​ಗೆ ಮಾತ್ರ ಲಸಿಕೆ ನೀಡಿ ಉಳಿದ 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಹಂಚಿಕೆ ಮಾಡೋ ಪ್ಲ್ಯಾನ್ ಮಾಡಿತ್ತು. ಮೊದಲ ಮೂರು ಕೋಟಿ ವ್ಯಾಕ್ಸಿನ್ ಕೊರೊನಾ ವಾರಿಯರ್ಸ್​ಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳು, ದಾದಿಯರು, ಮೇಲ್ವಿಚಾರಕರು, ಅರೆವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ ಒಟ್ಟು 1 ಕೋಟಿ ಮಂದಿ ಸೇರಿದ್ದರು.  ಉಳಿದ 2 ಕೋಟಿ ವ್ಯಾಕ್ಸಿನ್ ಫ್ರಂಟ್ ಲೈನ್ ವಾರಿಯರ್ಸ್​ಗೆ ಲಭ್ಯವಾಗಲಿದೆ. ಈ ಫ್ರಂಟ್ ಲೈನ್ ವಾರಿಯರ್ಸ್​ಗಳಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ, ಸಶಸ್ತ್ರ ಪಡೆ, ಗೃಹರಕ್ಷಕ, ವಿಪತ್ತು ನಿರ್ವಹಣೆ, ನಾಗರಿಕ ರಕ್ಷಣಾ ಸಂಸ್ಥೆ, ಜೈಲು ಸಿಬ್ಬಂದಿ, ಪುರಸಭೆ ಕಾರ್ಮಿಕರು, ಕಂಟೇನ್​ಮೆಂಟ್ ವಲಯದ ಕಣ್ಗಾವಲು ಸಿಬ್ಬಂದಿ ಕೊರೊನಾ ವ್ಯಾಕ್ಸಿನ್ ಮೊದಲು ಪಡೆದಿದ್ದರು.

ಇದನ್ನೂ ಓದಿ: ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ

ಪಾಕ್​ ಕೈಹಿಡಿದ ಭಾರತ: ಆತ್ಮನಿರ್ಭರ್ ಕೊರೊನಾ ಲಸಿಕೆ ಇದೀಗ ಪಾಕಿಸ್ತಾನಕ್ಕೂ ಪೂರೈಕೆ!

Published On - 3:36 pm, Tue, 23 March 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್