Covid 3rd Wave: ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್

ಸಾಮಾಜಿಕ ಅಂತರ ಪಾಲನೆಯೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಜನರು ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯ. ನಿರ್ಲಕ್ಷ್ಯ ವಹಿಸಿದರೆ ಲಾಕ್‌ಡೌನ್ ಮಾಡಬೇಕಾಗುತ್ತದ ಎಂದು ಪರೋಕ್ಷವಾಗಿ ಕಠಿಣ ನಿರ್ಧಾರದ ಸುಳಿವು ನೀಡಿದರು.

Covid 3rd Wave: ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್
ಸಚಿವ ಆರ್ ಅಶೋಕ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 02, 2022 | 3:09 PM

ಬೆಂಗಳೂರು: ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಕೊರೊನಾ ಪಿಡುಗಿನ (Coronavirus Pandemic) ಆತಂಕ ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರನ್ನು ರೆಡ್​ಜೋನ್ (Red Zone) ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ಸೇರಿದಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಆರ್.ಅಶೋಕ್ (R Ashoka) ಸರ್ಕಾರದ ಚಿಂತನೆಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಕಾಣಿಸಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಕೊರೊನಾ ಸೋಂಕಿನ ನಿಯಂತ್ರಣ ಸಂಬಂಧ ಮತ್ತೊಮ್ಮೆ ಸಭೆ ಕರೆಯಲಾಗಿದೆ. ಜನವರಿ 7ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಕೇಂದ್ರ ಸರ್ಕಾರವು ಬೆಂಗಳೂರನ್ನು ರೆಡ್​ ಝೋನ್ ಎಂದು ಘೋಷಿಸಿರುವುದರಿಂದ ಕಠಿಣ ನಿಯಮಗಳ ಜಾರಿ ಅನಿವಾರ್ಯವಾಗಬಹುದು. ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ತಜ್ಞರು ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ. ಸಾಮಾಜಿಕ ಅಂತರ ಪಾಲನೆಯೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಜನರು ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯ. ನಿರ್ಲಕ್ಷ್ಯ ವಹಿಸಿದರೆ ಲಾಕ್‌ಡೌನ್ ಮಾಡಬೇಕಾಗುತ್ತದ ಎಂದು ಪರೋಕ್ಷವಾಗಿ ಕಠಿಣ ನಿರ್ಧಾರದ ಸುಳಿವು ನೀಡಿದರು.

ಕರ್ನಾಟಕದ ಇತರ ಜಿಲ್ಲೆಗಳ ವಿಚಾರ ಒಂದು ಥರ ಇದ್ದರೆ ಬೆಂಗಳೂರಿನ ಬೆಳವಣಿಗೆ ಮತ್ತೊಂದು ರೀತಿಯಿದೆ. ಬೆಂಗಳೂರು ನಗರದಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡಿದರೆ ಮಾತ್ರ ಜನರನ್ನು ಉಳಿಸಲು ಸಾಧ್ಯವಾಗುತ್ತದೆ. ನೈಟ್ ಕರ್ಫ್ಯೂ ವಿಧಿಸಿರುವ ಅವಧಿ ಮುಗಿಯುವ ಮೊದಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ, ಸಭೆ ನಡೆಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ತಜ್ಞರ ಸೂಚನೆಗಳನ್ನು ಯಥಾವತ್ತಾಗಿ ಪಾಲನೆ ಮಾಡುತ್ತೇವೆ. 2ನೇ ಅಲೆಯಲ್ಲಿ ಆದಂತೆ ಈ ಬಾರಿ ಆಗುವುದಿಲ್ಲ. ಈ ಬಾರಿ ನಾವು ಸರ್ವಸನ್ನದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ರಾಜ್ಯದ ಜನರು ಕೂಡ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸಹಕರಿಸಬೇಕು. ಇಲ್ಲದಿದ್ದರೆ ನಾವು ಕೂಡ ಮುಂಬೈನಂಥದ್ದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ತಜ್ಞರ ಸಭೆ ಎಂದು ನಡೆಸಬೇಕು ಎಂಬ ಬಗ್ಗೆ ಈವರೆಗೆ ಅಧಿಕೃತ ದಿನಾಂಕ ನಿಗದಿಯಾಗಿಲ್ಲ. ದಿನಾಂಕ ನಿಗದಿಯಾದ ಬಳಿಕ ಸಭೆಯಲ್ಲಿ ಈ ಕುರಿತು ಚರ್ಚಿಸುತ್ತೇವೆ. ಯಾವುದೇ ಱಲಿ ಅಥವಾ ಜಾತ್ರೆಗಳು ನಮಗೆ ಮುಖ್ಯವಲ್ಲ. ರಾಜ್ಯದ ಜನರ ಮಾತ್ರ ನಮ್ಮ ಗಮನದಲ್ಲಿದ್ದಾರೆ. ಕಾಂಗ್ರೆಸ್, ಜೆಡಿಎಸ್​ನವರು ಅವರ ಪಕ್ಷಗಳ ಉಳಿವಿಗಾಗಿ ಏನು ಬೇಕಾದರೂ ಮಾಡಿಕೊಳ್ಳಲಿ. ಅವುಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ರಾಜ್ಯದ ಜನರ ಹಿತದೃಷ್ಟಿಯೇ ಮುಖ್ಯ ಎಂದು ನುಡಿದರು.

ಇದನ್ನೂ ಓದಿ: 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; ದೆಹಲಿ ಮಾದರಿ ಕ್ರಮಕ್ಕೆ ತಜ್ಞರ ಶಿಫಾರಸು

Published On - 2:57 pm, Sun, 2 January 22