ಬೆಳಗಾವಿ: ಕೊರೊನಾ 2ನೇ ಅಲೆ ಗಣನೀಯವಾಗಿ ಏರಿಕೆ ಕಂಡು ಸಂಕಷ್ಟದ ಪರಿಸ್ಥಿತಿ ಎದುರಾಗಿರುವುದು ನಮಗೆಲ್ಲಾ ತಿಳಿದೇ ಇದೆ. 3ನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ಮುನ್ಸೂಚನೆ ಕೂಡ ಲಭ್ಯವಾಗಿದೆ. ಹೀಗೆಂದು ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಸೂಕ್ತ ಜಾಗ್ರತೆ ವಹಿಸಲಾಗುತ್ತಿದೆ. ಅದರಂತೆ 30 ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೊವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ಚಿಕ್ಕೋಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.
ಸಿಸಿಸಿಗಳಿಗಾಗಿ ವಸತಿ ಶಾಲೆಗಳನ್ನು ಗುರುತಿಸಲಾಗಿದೆ. ಈಗಾಗಲೇ ನೋಡಲ್ ಅಧಿಕಾರಿಯನ್ನು ನೇಮಿಸಿದ್ದೇವೆ. ಅನಾಥ ಮಕ್ಕಳಿಗೆ ಸೌಲಭ್ಯ ಒದಗಿಸುವ ಸಂಬಂಧ ಚರ್ಚೆ ಮಾಡಿದ್ದೇವೆ. ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಮುಖ್ಯಮಂತ್ರಿಗಳಿಂದ ಸ್ಪಂದನೆ ಸಿಕ್ಕಿದೆ ಎಂದು ಚಿಕ್ಕೋಡಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.
ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ತಾಂತ್ರಿಕ ಸಲಹಾ ಸಮೀತಿ ವರದಿ ಹಿನ್ನೆಲೆಯಲ್ಲಿ, 30 ಜಿಲ್ಲೆಯಲ್ಲಿ ಮಕ್ಕಳಿಗೆ ಕೊವಿಡ್ ಕೇರ್ ಸೆಂಟರ್ ತೆರೆಯಲು ಈಗಾಗಲೇ ನಿರ್ಧರಿಸಲಾಗಿದೆ. ಇದಕ್ಕೆ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ಚೆನ್ನಮ ಶಾಲೆಗಳನ್ನು ಗುರುತಿಸಲಾಗಿದೆ. ಇಲಾಖೆಯ ವಿಶೇಷ ಮಕ್ಕಳ ಶಾಲೆಯಲ್ಲಿ ಕೊವಿಡ್ ಕೇರ್ ಸೆಂಟರ್ ಮಾಡಲು ನಿರ್ಧರಿಸಲಾಗಿದೆ ಎಂದು ಜೊಲ್ಲೆ ಹೇಳಿದ್ದಾರೆ.
ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂದೆ ತಾಯಿಗೆ ಕೊರೊನಾ ಪಾಸಿಟಿವ್ ಬಂದು ತೀರಿಹೋಗಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಆ ಮಕ್ಕಳ ಪಾಲನೆ ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ಸೌಕರ್ಯ ನೀಡಲಾಗುವುದು. ಆ ಮಕ್ಕಳಿಗೆ ಶಾಶ್ವತವಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಇನ್ನೊಂದು ವಾರ ಲಾಕ್ಡೌನ್ ವಿಸ್ತರಿಸಿದರೆ ಸೂಕ್ತ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟಿದ್ಧಾರೆ. ನಗರ ಪ್ರದೇಶಗಳ ಜೊತೆ ಹಳ್ಳಿಗಳಲ್ಲೂ ಕೊರೊನಾ ಹಬ್ಬುತ್ತಿದೆ. ಜೀವಹಾನಿ ತಡೆಯಲು ಇನ್ನೊಂದು ವಾರ ಲಾಕ್ಡೌನ್ ಸೂಕ್ತವಾಗಿದೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಆಶಾದಾಯಕ ಸುದ್ದಿ: ಈಗಲೇ ಕಠಿಣ ಕ್ರಮಗಳನ್ನು ಕೈಗೊಂಡರೆ ಮೂರನೇ ಅಲೆಯನ್ನು ತಡೆಗಟ್ಟಬಹುದು
Published On - 5:55 pm, Wed, 19 May 21