ಬೆಂಗಳೂರು, ಜ.08: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 279 ಜನರಿಗೆ ಕೊರೊನಾ (Covid) ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಮೃತ ಪ್ರಕರಣಗಳ ಪೈಕಿ ಮೈಸೂರು ಜಿಲ್ಲೆಯಲ್ಲೇ ಎರಡು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ ಒಂದು ಸಾವು ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 134 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6,359 ಜನರನ್ನು ಕೊವೀಡ್ ಟೆಸ್ಟ್ಗೆ ಒಳಪಡಿಸಲಾಗಿದ್ದು, 279 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,222 ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 4.38 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: Covid Cases In India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆ
ಮೈಸೂರಿನಲ್ಲಿ ಇಂದು 23 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಹಾಸನದಲ್ಲಿ 13, ಬಳ್ಳಾರಿ ಜಿಲ್ಲೆಯಲ್ಲಿ 11, ಚಿಕ್ಕಮಗಳೂರು 8, ರಾಯಚೂರು 8, ವಿಜಯನಗರ 8, ಚಿಕ್ಕಬಳ್ಳಾಪುರ 7, ಚಿತ್ರದುರ್ಗ 7, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉತ್ತರ ಕನ್ನಡ 6, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5, ಚಾಮರಾಜನಗರ 5, ಗದಗ 5, ಕೊಡಗು ಜಿಲ್ಲೆಯಲ್ಲಿ 5, ಬಾಗಲಕೋಟೆ 4, ದಾವಣಗೆರೆ 4, ಧಾರವಾಡ 4, ಕಲಬುರಗಿ 4, ಕೋಲಾರ 3, ಮಂಡ್ಯ 3, ಬೆಳಗಾವಿ ಜಿಲ್ಲೆಯಲ್ಲಿ 2, ರಾಮನಗರ, ತುಮಕೂರು, ಯಾದಗಿರಿ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:52 pm, Mon, 8 January 24