ಕರ್ನಾಟಕದಲ್ಲಿ ಕೋವಿಡ್​ ಹೆಚ್ಚಳ, 500ರ ಗಡಿ ದಾಟಿದ ಸೋಂಕಿನ ಪ್ರಕರಣ, ಹೆಚ್ಚಿದ ಆತಂಕ

ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಮಾರ್ಚ್​ 13ರ ವರೆಗೆ 510 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 62 ಜನರಲ್ಲಿ ಕೊರೊನಾ ಪಾಸಿಟಿವ್​ ಬಂದಿದೆ. ದಿನದ ಏರಿಕೆ ಶೇ 4.5 ರಷ್ಟಿದ್ದು, ವಾರದ ಏರಿಕೆ ಶೇ 2.60 ರಷ್ಟಿದೆ.

ಕರ್ನಾಟಕದಲ್ಲಿ ಕೋವಿಡ್​ ಹೆಚ್ಚಳ, 500ರ ಗಡಿ ದಾಟಿದ ಸೋಂಕಿನ ಪ್ರಕರಣ, ಹೆಚ್ಚಿದ ಆತಂಕ
ಸಾಂಧರ್ಬಿಕ ಚಿತ್ರ
Follow us
|

Updated on:Mar 14, 2023 | 11:48 AM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು (Karnataka Covid) ಕಡಿಮೆಯಾಗಿದೆ ಎಂದು ಅಂದುಕೊಳ್ಳುವಷ್ಟರಲ್ಲೇ ಆಘಾತಕಾರಿ ಅಂಶವೊಂದು ಬಹಿರಂಗವಾಗಿದೆ. ಕೊರೊನಾ ಸೋಂಕು ಪ್ರಕರಣಗಳು ನಿಧಾನವಾಗಿ ದಿನದಿಂದ ದಿನಕ್ಕೆ ಏರುತ್ತಿವೆ. ರಾಜ್ಯ ಆರೋಗ್ಯ ಇಲಾಖೆಯ (Karnataka Health Department) ಅಂಕಿ ಅಂಶಗಳ ಪ್ರಕಾರ ಮಾರ್ಚ್​ 13ರ ವರೆಗೆ 510 ಜನರಿಗೆ ಕೊರೊನಾ (Covid-19) ಸೋಂಕು ತಗುಲಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 62 ಜನರಲ್ಲಿ ಕೊರೊನಾ ಪಾಸಿಟಿವ್​ ಬಂದಿದೆ. ದಿನದ ಏರಿಕೆ ಶೇ 4.5 ರಷ್ಟಿದ್ದು, ವಾರದ ಏರಿಕೆ ಶೇ 2.60 ರಷ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರುತ್ತಿರವುದನ್ನು ಕಾಣುತ್ತಿದ್ದೇವೆ. ಆಸ್ಪತ್ರೆಗೆ ದಾಖಲಾಗುವ ಹೆಚ್ಚಿನ ಕೊರೊನಾ ರೋಗಿಗಳು ಒಂದೇ ಸಮಯದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆರೋಗ್ಯ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಹೆಚ್ಚಾಗುತ್ತಿರುವ ಎಚ್​3ಎನ್​2 ವೈರಸ್​​ನ ಲಕ್ಷಣ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ

ಕಳೆದ 113 ದಿನಗಳಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ 500 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿನ ಪ್ರಕರಣ ಏರುತ್ತಿರುವುದು ಕಾಣಬಹುದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಿನ ಜನರು ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಆಘಾತಕಾರಿ ಅಂಶವಾಗಿದೆ. ಮತ್ತು ಬೇರೆ ರಾಜ್ಯಗಳಲ್ಲೂ ಕೊರೊನಾ ಪ್ರಕರಣಗಳು ಏರುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಆಯುಕ್ತ ಡಿ ರಂದೀಪ್ ಹೇಳಿದರು.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಡಿಸೆಂಬರ್ 2022 ರಲ್ಲಿ 3 ಪ್ರಕರಣಗಳು ವರದಿಯಾಗಿದ್ದವು. ಜನವರಿ 2023ರಲ್ಲಿ 6 ಪ್ರಕರಣಗಳು ಮತ್ತು ಫೆಬ್ರವರಿಯಲ್ಲಿ 4 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಮಾರ್ಚ್ ಮೊದಲ 10 ದಿನಗಳಲ್ಲಿ ಈಗಾಗಲೇ 2 ಪ್ರಕರಣಗಳು ವರದಿಯಾಗಿವೆ ಎಂದು ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ಹೆಚ್.ವಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ವೈದ್ಯರನ್ನೇ ಬೆಚ್ಚಿ ಬೀಳಿಸಿತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯ ಸ್ಕ್ಯಾನಿಂಗ್​ ರಿಪೋರ್ಟ್

ಹೆಚ್ಚಿದ ಪ್ರಯಾಣ, ಮಾಸ್ಕ್‌ ಬಳಕೆ ಮಾಡದಿರುವುದು, ಕೊರೊನಾ ಲಿಸಿಕೆ ಪಡೆಯುವರ ಸಂಖ್ಯೆಯಲ್ಲಿ ಇಳಿಕೆ ಮತ್ತು ಹೆಚ್ಚಿದ ಕೊರೊನಾ ಪರೀಕ್ಷೆಯಿಂದ, ಪ್ರಕರಣಗಳು ಹಠಾತ್ತನೆ ಹೆಚ್ಚಿವೆ ಎಂದು ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯ ಸಾಂಕ್ರಾಮಿಕ ರೋಗಗಳು ಮತ್ತು ಟ್ರಾವೆಲ್ ಮೆಡಿಸಿನ್ ಸಲಹೆಗಾರರಾದ ಡಾ. ಸ್ವಾತಿ ರಾಜಗೋಪಾಲ್ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 am, Tue, 14 March 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ