ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ; ಹೊರಬಿತ್ತು ಅಧಿಕೃತ ಆದೇಶ

ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದರು. ಜೊತೆಗೆ, ಇದು ಬಿಪಿಎಲ್ ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ.  ಬಿಪಿಎಲ್  ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ಅವರು ತಿಳಿಸಿದ್ದರು.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ; ಹೊರಬಿತ್ತು ಅಧಿಕೃತ ಆದೇಶ
ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: guruganesh bhat

Updated on:Jul 08, 2021 | 11:08 PM

ಬೆಂಗಳೂರು: ಕೊವಿಡ್​ನಿಂದ ಮೃತರ ಕುಟುಂಬಸ್ಥರಿಗೆ ₹1 ಲಕ್ಷ ಪರಿಹಾರ ಘೋಷಣೆಯ ಆದೇಶವನ್ನು ರಾಜ್ಯ ಸರ್ಕಾರ ಇಂದು ಅಧಿಕೃತವಾಗಿ ಪ್ರಕಟಿಸಿದೆ. ಕೆಲವು ದಿನಗಳ ಮುನ್ನವೇ ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡುವ ಕುರಿತು ಸಿಎಂ ಯಡಿಯೂರಪ್ಪ ಘೋಷಿಸಿದ್ದರು. ಇಂದು ಈ ಆದೇಶ ಅಧಿಕೃತವಾಗಿ ಹೊರಬಿದ್ದಂತಾಗಿದೆ.   

ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದರು. ಜೊತೆಗೆ, ಇದು ಬಿಪಿಎಲ್ ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ.  ಬಿಪಿಎಲ್  ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ಅವರು ತಿಳಿಸಿದ್ದರು.

ಕೊವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟ ಪಡ್ತಾ ಇದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಇದಕ್ಕಾಗಿ ಸುಮಾರು 250-300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲ ಬಾರಿಗೆ ಇಂತಹ ಹಣಕಾಸು ನೆರವನ್ನು ನಾವು ನೀಡುತ್ತಿದ್ದೇವೆ. ಹಣಕಾಸಿನ‌ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಈಗ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಕೊಡ್ತಾ ಇದ್ದೇವೆ. ಅಂದ್ರೆ ಇದರ ಅರ್ಥ ಹಣಕಾಸಿನ ಪರಿಸ್ಥಿತಿ ಇರೋದರಲ್ಲಿಯೇ ಉತ್ತಮವಾಗಿದೆ ಎಂಬುದು ತಿಳಿದುಬರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

CoWin: ಕೊವಿಡ್ ಲಸಿಕೆ ಬುಕಿಂಗ್ ಪೋರ್ಟಲ್​ ಕೊವಿನ್​ನಲ್ಲಿ ಏನಿದೆ?

(Covid death relief fund 1 lakh compensation to Covids family of one who died official order released)

Published On - 9:31 pm, Thu, 8 July 21