Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಕೋವಿಡ್ ಹೆಚ್ಚಳ, JN.1: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಆರೋಗ್ಯ ಇಲಾಖೆ ಸಜ್ಜು

ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೊನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಭಾರತದ ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇದು ಗಡಿ ಜಿಲ್ಲೆಗಳಾದ ಮಂಗಳೂರು, ಮೈಸೂರು, ಚಾಮರಾಜನಗರದಲ್ಲಿ ಆತಂಕ ಹೆಚ್ಚಾಗಿದ್ದು, ಕರ್ನಾಟಕ ಸರ್ಕಾರವು ಹೈ ಅಲರ್ಟ್ ಆಗಿದೆ.

ಕೇರಳದಲ್ಲಿ ಕೋವಿಡ್ ಹೆಚ್ಚಳ, JN.1: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಆರೋಗ್ಯ ಇಲಾಖೆ ಸಜ್ಜು
ಕರ್ನಾಟಕದಲ್ಲಿ ಕೋವಿಡ್ ಕೇಸ್​
Follow us
Vinay Kashappanavar
| Updated By: Rakesh Nayak Manchi

Updated on: Dec 18, 2023 | 9:26 AM

ಬೆಂಗಳೂರು, ಡಿ.18: ಕೇರಳದಲ್ಲಿ ಮತ್ತೆ ಕೋವಿಡ್ (Covid) ಹೆಚ್ಚುತ್ತಿದ್ದು, JN.1 ಕೋವಿಡ್‌ ಹೊಸ ಉಪತಳಿಯೂ ಪತ್ತೆಯಾಗಿದೆ. ಇದು ನೆರೆಯ ಕರ್ನಾಟಕ ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ, ಗಡಿ ಜಿಲ್ಲೆಗಳಾದ ಮಂಗಳೂರು, ಮೈಸೂರು, ಚಾಮರಾಜನಗರದಲ್ಲಿ ಆತಂಕದ ಛಾಯೆ ಆವರಿಸಿದೆ.

ದೇಶದಲ್ಲಿಯೇ ಕೋವಿಡ್ ಉಗಮ ಕೇಂದ್ರವಾದ ಕೇರಳವೇ ಈಗ ಜನರ ಹೃದಯ ಬಡಿತಕ್ಕೆ ಕಾರಣವಾಗಿದೆ. ಅಲ್ಲದೆ, JN.1 ಕೋವಿಡ್‌ ಹೊಸ ಉಪತಳಿ ಕೇರಳದಲ್ಲಿ ಪತ್ತೆಯಾಗಿದೆ. ದೇಶದಲ್ಲಿ‌ ಶೇಕಡಾ 90ಕ್ಕಿಂತ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ಕೇರಳ ರಾಜ್ಯದಲ್ಲೇ ಪತ್ತೆಯಾಗಿದೆ. ಈ ರಾಜ್ಯದ 18 ಹೆಚ್ಚು ಗಡಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿದೆ. ಉಳ್ಳಾಲ ತಾಲೂಕಿನ ತಲಪಾಡಿ ಮುಖ್ಯ ಗಡಿಯಾಗಿದ್ದು, ಸುಳ್ಯ, ಬಂಟ್ವಾಳ ತಾಲೂಕಿನಲ್ಲಿ ಸಾಕಷ್ಟು ಗಡಿ ಪ್ರದೇಶಗಳು ಇವೆ.

ಇದನ್ನೂ ಓದಿ: ಕೋವಿಡ್ 19: ಕೇರಳದಲ್ಲಿ ಒಂದೇ ದಿನ 230 ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 949ಕ್ಕೆ ಏರಿಕೆ

ಈ ಗಡಿ ಪ್ರದೇಶದಿಂದ ಕೇರಳಲ್ಲಿರುವ ಸೋಂಕು ರಾಜ್ಯಕ್ಕೆ ಹರಡು ಸಾಧ್ಯತೆ ಇದೆ. ಹೀಗಿದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ. ವಿವಿಧ ಕೆಲಸ ಕಾರ್ಯಗಳಿಗೆ ಮಾತ್ರವಲ್ಲದೆ ವಿವಿಧ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕೇರಳದಿಂದ ಜನರ ಜಿಲ್ಲೆಗೆ ಬಂದು ಹೋಗುತ್ತಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್​ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ, ಕೊವೀಡ್ ತುರ್ತು ಪರಿಸ್ಥಿತಿ ನಿಭಾಯಿಸಲು ಇಲಾಖೆಯು ವ್ಯವಸ್ಥೆ ಮಾಡಿಕೊಂಡಿದೆ.

  • ಆರೋಗ್ಯ ಸೌಲಭ್ಯಗಳ ಲಭ್ಯತೆ, ಹಾಸಿಗೆಗಳ ಸಾಮರ್ಥ್ಯ, ವೈದ್ಯರು, ದಾದಿಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮಾನವ ಸಂಪನ್ಮೂಲಗಳ ಲಭ್ಯತೆ
  • ತಾಂತ್ರಿಕ ಮತ್ತು ಅಕ್ಸಿಜನ್ ಬೆಂಬಲ ಸೌಲಭ್ಯಗಳೊಂದಿಗೆ ಆಂಬ್ಯುಲೆನ್ಸ್ ಸೇವೆ
  • ಪರೀಕ್ಷಾ ಸಾಮರ್ಥ್ಯ ಮತ್ತು ವೈದ್ಯಕೀಯ ಆಮ್ಲಜನಕದ ಲಭ್ಯತೆಯ ಪರಿಶೀಲನೆ ನಡೆಸಬೇಕು
  • ಆರೋಗ್ಯ ಇಲಾಖೆ ರಾಜ್ಯಾದ್ಯಂತ ಸ್ಥಾಪಿಸಲಾಗಿರುವ ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಪರೀಶೀಲನೆ
  • ಜೊತೆಗೆ ಕೋವಿಡ್‌ ಉಪಕರಣಗಳು, ಸಿಬ್ಬಂದಿ ಹಾಗೂ ವ್ಯವಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಸೂಚನೆ
  • ಟ್ಯಾಕ್ ಸಭೆ ನಡಿಸಿ ಮುನ್ನೇಚ್ಚರಿಕೆ ಕ್ರಮವಹಿಸಲು ಇಲಾಖೆ ಮುಂದಾಗಿದೆ

ಚೆಕ್​ಪೋಸ್ಟ್​ ಮೂಲಕ ರಾಜ್ಯಕ್ಕೆ ಕೆರಳಿಗರ ಪ್ರವೇಶ

ಒಂದೆಡೆ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ರೂಪಾಂತರ ತಳಿಯೂ ಪತ್ತೆಯಾಗಿದೆ. ಪರಿಸ್ಥಿತಿ ಹೀಗಿದ್ದರೂ ಚಾಮರಾಜನಗರ ಗಡಿ ಭಾಗದಲ್ಲಿ ಆರೋಗ್ಯ ಇಲಾಖೆಯು ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿಲ್ಲ. ಕೋವಿಡ್ ಪ್ರೋಟೋಕಾಲ್ ಪಾಲಿಸದೆ ಕೇರಳದಿಂದ ಜನರು ಜಿಲ್ಲೆಗೆ ಎಂಟ್ರಿ ಕೊಡುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ಕೋವಿಡ್ ಸೋಂಕು ಹರಡುವ ಭೀತಿ ಎದುರಾಗಿದೆ. ಮೂಲೆಹೊಳೆ ಚೆಕ್ ಪೋಸ್ಟ್ ಮುಖಾಂತರ ಗುಂಡ್ಲುಪೇಟೆ ಮಾರ್ಗವಾಗಿ ಕೇರಳದ ವಾಹನ ಸವಾರರು ರಾಜ್ಯ ಪ್ರವೇಶಿಸುತ್ತಿದ್ದಾರೆ. ಶಬರಿಮಲೆಯಿಂದ ಆಗಮಿಸುವ ಭಕ್ತರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ.

ಬಾವಲಿ ಚೆಕ್ ಪೋಸ್ಟ್ ನಿರ್ಮಾಣ

ಮೈಸೂರು ಜಿಲ್ಲಾಧಿಕಾರಿ ಸಭೆ ಬಳಿಕ ಹೆಚ್​ಡಿ ಕೋಟೆ ತಾಲೂಕಿನ ಬಾವಲಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವ ಸಾಧ್ಯತೆ ಇದೆ. ಗಡಿಯಲ್ಲಿ ಈಗಾಗಲೇ ಆರೋಗ್ಯ ಇಲಾಖೆಯಿಂದ ಶೆಡ್ ನಿರ್ಮಾಣವಾಗಿದ್ದು, ಒಂದೆರೆಡು ದಿನಗಳಲ್ಲಿ ಕೊರೋನಾ ತಪಾಸಣೆ ಆರಂಭಿಸುವ ಸಾಧ್ಯತೆ ಇದೆ.

ಬಾವಲಿ ಗಡಿ ಪ್ರದೇಶದಿಂದ ಪ್ರತಿದಿನ ಕೇರಳದಿಂದ ನೂರಾರು ವಾಹನಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ತರಕಾರಿ ಸೇರಿದಂತೆ ಎಲ್ಲದಕ್ಕೂ ಮೈಸೂರನ್ನೆ ಅವಲಂಬಿಸಿದೆ. ಇದರ ಜೊತೆಗೆ ಹೆಚ್.ಡಿ.ಕೋಟೆ ಭಾಗದಲ್ಲಿ ಕೇರಳದ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದ ಪ್ರತಿದಿನ ಸಾವಿರಾರು ಜನರು ಮೈಸೂರಿಗೆ ಆಗಮಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್