Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 2984 ಮಂದಿಗೆ ಕೊರೊನಾ ಸೋಂಕು, 88 ಮಂದಿ ಸಾವು

ರಾಜ್ಯದಲ್ಲಿ ಒಟ್ಟು 30,447 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಬೆಂಗಳೂರಲ್ಲಿ 23,424 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 2984 ಮಂದಿಗೆ ಕೊರೊನಾ ಸೋಂಕು, 88 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 02, 2021 | 8:33 PM

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ (ಜೂನ್ 2) ಒಟ್ಟು 2984 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 88 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 593 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, 11 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 30,447 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಬೆಂಗಳೂರಲ್ಲಿ 23,424 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,49,997ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 27,60,881 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,222 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 30,447 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 593 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,14,828ಕ್ಕೆ ಏರಿಕೆಯಾಗಿದೆ. ಈ ಪೈಕಿ 11,75,748 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,655 ಜನರು ಸಾವನ್ನಪ್ಪಿದ್ದಾರೆ. ಒಟ್ಟು 23,424 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 2,984 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 593 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ಬಾಗಲಕೋಟೆ 12, ಬಳ್ಳಾರಿ 30, ಬೆಳಗಾವಿ 97, ಬೆಂಗಳೂರು ಗ್ರಾಮಾಂತರ 73, ಬೀದರ್ 4, ಚಾಮರಾಜನಗರ 43, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 107, ಚಿತ್ರದುರ್ಗ 31, ದಕ್ಷಿಣ ಕನ್ನಡ 302, ದಾವಣಗೆರೆ 63, ಧಾರವಾಡ 33, ಗದಗ 9, ಹಾಸನ 271, ಹಾವೇರಿ 6, ಕಲಬುರಗಿ 3, ಕೊಡಗು 170, ಕೋಲಾರ 87, ಕೊಪ್ಪಳ 18, ಮಂಡ್ಯ 109, ಮೈಸೂರು 457, ರಾಯಚೂರು 6, ರಾಮನಗರ 13, ಶಿವಮೊಗ್ಗ 145, ತುಮಕೂರು 131, ಉಡುಪಿ 91, ಉತ್ತರ ಕನ್ನಡ 53, ವಿಜಯಪುರ 8, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 88 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 13 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 11, ಬಳ್ಳಾರಿ 10, ಧಾರವಾಡ, ಮಂಡ್ಯ ತಲಾ 7, ಮೈಸೂರು 5, ಚಿಕ್ಕಬಳ್ಳಾಪುರ, ಹಾಸನ, ಹಾವೇರಿ, ಕೋಲಾರ, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ತಲಾ ಮೂವರು, ಬಾಗಲಕೋಟೆ, ಕೊಡಗು, ತುಮಕೂರು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್​​, ಗದಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಕೊರೊನಾ ಸೋಂಕಿನಿಂದ ಒಟ್ಟು 35,222 ಜನರು ಸಾವನ್ನಪ್ಪಿದ್ದಾರೆ.

(Covid Karnataka Numbers 2984 Infected 88 Died of Coronavirus Infection July 2)

ಇದನ್ನೂ ಓದಿ: ಭಾರತದಲ್ಲಿ ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ: ಕೇಂದ್ರ ಕೊರೊನಾ ಕಾರ್ಯಪಡೆ ಅಧ್ಯಕ್ಷ ವಿ.ಕೆ.ಪೌಲ್

ಇದನ್ನೂ ಓದಿ: ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ

Published On - 8:29 pm, Fri, 2 July 21

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ