ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ (ಜೂನ್ 2) ಒಟ್ಟು 2984 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 88 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 593 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, 11 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 30,447 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಬೆಂಗಳೂರಲ್ಲಿ 23,424 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,49,997ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 27,60,881 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,222 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 30,447 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 593 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,14,828ಕ್ಕೆ ಏರಿಕೆಯಾಗಿದೆ. ಈ ಪೈಕಿ 11,75,748 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,655 ಜನರು ಸಾವನ್ನಪ್ಪಿದ್ದಾರೆ. ಒಟ್ಟು 23,424 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ರಾಜ್ಯದಲ್ಲಿಂದು ಹೊಸದಾಗಿ 2,984 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 593 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ಬಾಗಲಕೋಟೆ 12, ಬಳ್ಳಾರಿ 30, ಬೆಳಗಾವಿ 97, ಬೆಂಗಳೂರು ಗ್ರಾಮಾಂತರ 73, ಬೀದರ್ 4, ಚಾಮರಾಜನಗರ 43, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 107, ಚಿತ್ರದುರ್ಗ 31, ದಕ್ಷಿಣ ಕನ್ನಡ 302, ದಾವಣಗೆರೆ 63, ಧಾರವಾಡ 33, ಗದಗ 9, ಹಾಸನ 271, ಹಾವೇರಿ 6, ಕಲಬುರಗಿ 3, ಕೊಡಗು 170, ಕೋಲಾರ 87, ಕೊಪ್ಪಳ 18, ಮಂಡ್ಯ 109, ಮೈಸೂರು 457, ರಾಯಚೂರು 6, ರಾಮನಗರ 13, ಶಿವಮೊಗ್ಗ 145, ತುಮಕೂರು 131, ಉಡುಪಿ 91, ಉತ್ತರ ಕನ್ನಡ 53, ವಿಜಯಪುರ 8, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 88 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 13 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 11, ಬಳ್ಳಾರಿ 10, ಧಾರವಾಡ, ಮಂಡ್ಯ ತಲಾ 7, ಮೈಸೂರು 5, ಚಿಕ್ಕಬಳ್ಳಾಪುರ, ಹಾಸನ, ಹಾವೇರಿ, ಕೋಲಾರ, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ತಲಾ ಮೂವರು, ಬಾಗಲಕೋಟೆ, ಕೊಡಗು, ತುಮಕೂರು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಗದಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಕೊರೊನಾ ಸೋಂಕಿನಿಂದ ಒಟ್ಟು 35,222 ಜನರು ಸಾವನ್ನಪ್ಪಿದ್ದಾರೆ.
ಇಂದಿನ 02/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/0r6wdYzRqW
@CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/kj3BaOL2P4
— K’taka Health Dept (@DHFWKA) July 2, 2021
(Covid Karnataka Numbers 2984 Infected 88 Died of Coronavirus Infection July 2)
ಇದನ್ನೂ ಓದಿ: ಭಾರತದಲ್ಲಿ ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ: ಕೇಂದ್ರ ಕೊರೊನಾ ಕಾರ್ಯಪಡೆ ಅಧ್ಯಕ್ಷ ವಿ.ಕೆ.ಪೌಲ್
ಇದನ್ನೂ ಓದಿ: ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ
Published On - 8:29 pm, Fri, 2 July 21