ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

Covid lockdown package to Building labor workers: ಕಮ್ಮಾರರು, ಗೃಹ ಕಾರ್ಮಿಕರು, ಅಕ್ಕಸಾಲಿಗ, ಹಮಾಲಿ, ಗೂಡು ಕೆಲಸಗಾರರು, ಮೆಕಾನಿಕ್, ಕುಂಬಾರರು, ಚಿಂದಿ ಆಯುವವರು, ಟೈಲರ್ಸ್, ಕ್ಷೌರಿಕರು, ಅಗಸರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಇನ್ನುಳಿದ ಕಾರ್ಮಿಕ ಸಂಘಟನೆಗಳಿಂದ ಪ್ಯಾಕೇಜ್ ನೀಡುವಂತೆ ಸರ್ಕಾರಕ್ಕೆ ಮನವಿ ನೀಡಲಾಗಿದೆ.

ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್
ಶಿವರಾಮ ಹೆಬ್ಬಾರ್​
Follow us
guruganesh bhat
|

Updated on: May 27, 2021 | 4:20 PM

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸೋಮವಾರದೊಳಗೆ ಲಾಕ್​ಡೌನ್ ಪ್ಯಾಕೇಜ್ ಹಣ ವರ್ಗಾವಣೆಯಾಗಲಿದೆ ಎಂದು ವಿಧಾನಸೌಧದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು. ಅಸಂಘಟಿತ ಕಾರ್ಮಿಕ ವರ್ಗದ 11 ವಲಯಗಳ 3,44,030 ಜನರಿಗೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮಹಿಳೆಯರಿಗೆ ಹೆಚ್ಚಿನ ಹೊತ್ತು ನೀಡಲಾಗಿದ್ದು, ಅವರಿಗೆ ಹೆಚ್ಚಿನ ಸೌಲಭ್ಯ ನೀಡಲಾಗಿದೆ. ಸದ್ಯ ಈಗ ಮತ್ತಷ್ಟು ವರ್ಗ ದವರನ್ನು ನಮ್ಮ ಇಲಾಖೆಗೆ ಸೇರಿಸಲಾಗಿದೆ. ಕಮ್ಮಾರರು, ಗೃಹ ಕಾರ್ಮಿಕರು, ಅಕ್ಕಸಾಲಿಗ, ಹಮಾಲಿ, ಗೂಡು ಕೆಲಸಗಾರರು, ಮೆಕಾನಿಕ್, ಕುಂಬಾರರು, ಚಿಂದಿ ಆಯುವವರು, ಟೈಲರ್ಸ್, ಕ್ಷೌರಿಕರು, ಅಗಸರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಇನ್ನುಳಿದ ಕಾರ್ಮಿಕ ಸಂಘಟನೆಗಳಿಂದ ಪ್ಯಾಕೇಜ್ ನೀಡುವಂತೆ ಸರ್ಕಾರಕ್ಕೆ ಮನವಿ ನೀಡಲಾಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಲಾಗಿದೆ. ಶೀಘ್ರವೇ ಸಿಎಂ ಈ ಬಗ್ಗೆ ನಿರ್ಧಾರ ಮಾಡಲಿದ್ದಾರೆ. ಉಳಿದ ಸಂಘಟನೆಗಳಿಗೆ ಪ್ಯಾಕೇಜ್ ಘೋಷಿಸುವ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ವಿಧಾನಸೌಧದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದರು.

ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್ ಕೊವಿಡ್​ನಿಂದ ನಿಧನರಾದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ನೌಕರಿ ನೀಡಿದೆ. ನೌಕರಿಯ ನೇಮಕಾತಿ ಪತ್ರವನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್​ ಇಂದು ವಿತರಣೆ ಮಾಡಿದ್ದಾರೆ. ಈವರೆಗೆ ಕೊವಿಡ್​ನಿಂದ ಮೃತಪಟ್ಟ 130 ಶಿಕ್ಷಕರ ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಲಾಗಿದೆ.

ಕೊವಿಡ್​ನಿಂದ ಶಿಕ್ಷಣ ಪರಿವಾರದ ಅನೇಕ ಶಿಕ್ಷಕರು ಅಗಲಿದ್ದಾರೆ. ಇದರಿಂದ ನಾಡಿಗೆ ಅಪಾರ ನಷ್ಟವಾಗಿದೆ.  ಮೃತ ಶಿಕ್ಷಕರು ತಮ್ಮ ಕುಟುಂಬಗಳಷ್ಟನ್ನೇ ಅಲ್ಲದೇ, ನಮ್ಮ ನಾಡಿನ ಶಾಲಾ ಮಕ್ಕಳೂ ತಮ್ಮ ನೆಚ್ಚಿನ ಶಿಕ್ಷಕರನ್ನು ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಕ್ಷಕರ ಕುಟುಂಬಗಳಿಗೆ ತಕ್ಷಣವೇ ಸ್ಪಂದಿಸಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ನೇಮಕಾತಿ ಪತ್ರ ಪಡೆದು ನೌಕರಿಗೆ ಸೇರ್ಪಡೆಯಾಗುತ್ತಿರುವವರಿಗೆ ಪರಿಣಾಮಕಾರಿ ವೃತ್ತಿ ತರಬೇತಿ ಮತ್ತು ಆಡಳಿತ ವ್ಯವಸ್ಥೆ ಕುರಿತ ಪರಿಚಯಾತ್ಮಕ ತರಬೇತಿ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:  ‘ನಾನಿನ್ನು ಡಾ. ರಾಹುಲ್​..’ಎಂದು ಖುಷಿಯಿಂದ ಹೇಳಿಕೊಂಡಿದ್ದ ವೈದ್ಯ ಕೊವಿಡ್​ 19ನಿಂದ ಸಾವು; ಆಸ್ಪತ್ರೆ ಬೆಡ್​ ಮೇಲೆ ಒಂದು ತಿಂಗಳು ಹೋರಾಟ

ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್

(Covid lockdown package will reach Building labor workers by Monday says Karnataka labour minister Shivaram Hebbar)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್