AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ..

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಟೆಸ್ಟ್ ಕಡ್ಡಾಯ ಮಾಡಲಾಗಿದೆ. KSRTC ಬಸ್‌ನಲ್ಲಿ ಬರಲು ನೆಗೆಟಿವ್ ರಿಪೋರ್ಟ್ ತರಬೇಕು. ಕೊವಿಡ್ ವರದಿ ಇಲ್ಲದಿದ್ದರೆ ಬಸ್‌ನಲ್ಲಿ ಪ್ರಯಾಣಿಸುವಂತಿಲ್ಲ ಎಂದು ಸರ್ಕಾರದ ಆದೇಶ ಹಿನ್ನೆಲೆಯಲ್ಲಿ KSRTC ಸಿಬ್ಬಂದಿಗೆ ಸೂಚಿಸಲಾಗಿದೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ..
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jun 28, 2021 | 9:49 AM

Share

ಬೆಂಗಳೂರು: ಕೊರೊನಾ ಸಂಖ್ಯೆ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ಕಡೆ ಅನ್ಲಾಕ್ ಘೋಷಿಸಲಾಗಿದೆ. ಹೀಗಾಗಿ ತಮ್ಮ ತಮ್ಮ ಊರುಗಳಿಗೆ ಹೋಗಿದ್ದವರು ಮರಳಿ ಬೆಂಗಳೂರಿಗೆ ಬರುತ್ತಿದ್ದಾರೆ. ನೆರೆ ರಾಜ್ಯಗಳ ಜನ ಕರ್ನಾಟಕಕ್ಕೆ ಮರಳುತ್ತಿದ್ದು ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುವವರಿಗೆ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಟೆಸ್ಟ್ ಕಡ್ಡಾಯ ಮಾಡಲಾಗಿದೆ. KSRTC ಬಸ್‌ನಲ್ಲಿ ಬರಲು ನೆಗೆಟಿವ್ ರಿಪೋರ್ಟ್ ತರಬೇಕು. ಕೊವಿಡ್ ವರದಿ ಇಲ್ಲದಿದ್ದರೆ ಬಸ್‌ನಲ್ಲಿ ಪ್ರಯಾಣಿಸುವಂತಿಲ್ಲ ಎಂದು ಸರ್ಕಾರದ ಆದೇಶ ಹಿನ್ನೆಲೆಯಲ್ಲಿ KSRTC ಸಿಬ್ಬಂದಿಗೆ ಸೂಚಿಸಲಾಗಿದೆ. ಇನ್ನು ಮಹಾಮಾರಿ ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ರಾಜ್ಯದ ಗಡಿ ಭಾಗದಲ್ಲಿರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ಪೋಸ್ಟ್ಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಸೂಚಿಸಿದ್ದರು. ಅಥವಾ ಕರ್ನಾಟಕದವರೇ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದರೆ ಆ ಪ್ರಯಾಣಿಕರು ಗಡಿಯಲ್ಲಿರುವ ಚೆಕ್ಪೋಸ್ಟ್ಗಳಲ್ಲಿಯೇ ಅವರ ಮಾದರಿಯನ್ನು ಸಂಗ್ರಹಿಸಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಕಳುಹಿಸಬೇಕು. ವರದಿ ಬಂದ ತಕ್ಷಣವೇ ಆ ವ್ಯಕ್ತಿಗೆ ಮಾಹಿತಿಯನ್ನು ನೀಡಬೇಕು. ನಂತರ ಅವರ ವರದಿಯನ್ನು ಅವರ ವಿಳಾಸಕ್ಕೆ ಕಳಿಸಬೇಕು ಎಂದು ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರತ ಅರೋಗ್ಯ ಇಲಾಖೆಯ ತಂಡಗಳಿಗೆ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂನಲ್ಲೂ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ; ಜನರ ಅನುಕೂಲಕ್ಕಾಗಿ ಕ್ರಮ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್