Covid 19 Live Updates Karnataka: ಹೊರರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಏಪ್ರಿಲ್ 1ರಿಂದ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

|

Updated on: Mar 25, 2021 | 6:17 PM

ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು RT-PCR ಟೆಸ್ಟ್ ಮಾಡಿಸಿಕೊಂಡು ಕೊರೊನಾ ನೆಗೆಟಿವ್ ವರದಿ ತರಬೇಕು ಎಂಬ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.

Covid 19 Live Updates Karnataka: ಹೊರರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಏಪ್ರಿಲ್ 1ರಿಂದ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ
ಬೆಂಗಳೂರು
Follow us on

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕುರಿತು ರಾಜ್ಯ ಸರ್ಕಾರ ಗಂಭೀರ ನಿರ್ಣಯ ಕೈಗೊಂಡಿದೆ. ಏಪ್ರಿಲ್ 1ರಿಂದ ಹೊರ ರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವ ಎಲ್ಲರಿಗೂ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಇದ್ದರಷ್ಟೇ ಪ್ರವೇಶ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು RT-PCR ಟೆಸ್ಟ್ ಮಾಡಿಸಿಕೊಂಡು ಕೊರೊನಾ ನೆಗೆಟಿವ್ ವರದಿ ತರಬೇಕು ಎಂಬ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ ಎಂದು ದಿ ನ್ಯೂಸ್ ಮಿನ್ಯೂಟ್ ವರದಿ ಮಾಡಿದೆ. (Covid negative report is compulsory for all passengers who come to bengaluru from all states starting April 1)

ರಾಜ್ಯದಲ್ಲಿ ಇಂದು ಹೊಸದಾಗಿ 2,523 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,78,478ಕ್ಕೇರಿದೆ. ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 10 ಜನರ ಸಾವನ್ನಪ್ಪಿದ್ದು, ಈವರೆಗೆ 12,471 ಜನರು ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಪೈಕಿ 9,47,781 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. (Today Karnataka Corona Updates)

18,207 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬೆಂಗಳೂರಲ್ಲಿ ಇಂದು ಒಂದೇ ದಿನ 1,623 ಜನರಿಗೆ ಸೋಂಕು ತಗುಲಿದೆ. ಹೀಗಾಗಿ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,22,859ಕ್ಕೆ ತಲುಪಿದಂತಾಗಿದೆ. ಬೆಂಗಳೂರಿನಲ್ಲಿ ಒಂದೇ ಇಂದು ಕೊರೊನಾ ಸೋಂಕಿಗೆ 6 ಜನರ ಬಲಿಯಾಗಿದ್ದು, ಇದುವರೆಗೆ 4,569 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಲಸಿಕೆ ರಫ್ತಿಗೆ ತಾತ್ಕಾಲಿಕ ತಡೆ?

Corona Cases and Lockdown News Live: ಕೊರೊನಾ ಸೋಂಕಿನ ಕುರಿತು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆಯಾ?

Published On - 5:55 pm, Thu, 25 March 21