ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

ರೈಲ್ವೆ ನಿಲ್ದಾಣ, ಬಸ್ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆ ಮಾಡಲಾಗುವುದು. ಖಾಸಗಿ ವಾಹನದಲ್ಲಿ ಬರುವವರನ್ನೂ ತಪಾಸಣೆ ಮಾಡಲಾಗುವುದು. ಬಸ್​ನಲ್ಲಿ ಕಂಡಕ್ಟರ್​​​ ನೆಗೆಟಿವ್​ ವರದಿ ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ.

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Jun 29, 2021 | 9:15 PM

ಬೆಂಗಳೂರು: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ವೈರಸ್​ ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿಂದ ಕರ್ನಾಟಕಕ್ಕೆ ಬರುವವರು ಕೊವಿಡ್ ನೆಗೆಟಿವ್ ವರದಿ ಹಾಜರುಪಡಿಸುವುದು ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ನೆಗೆಟಿವ್ ವರದಿ 72 ಗಂಟೆಯ ಒಳಗಿನದ್ದಾಗಿರಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ವೈರಸ್ ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿಂದ ಬರುವವರು ನೆಗೆಟಿವ್​ ರಿಪೋರ್ಟ್​ ತರುವ ಜೊತೆಗೆ ಲಸಿಕೆ ಪಡೆದಿರುವ ದಾಖಲೆಯನ್ನೂ ಹಾಜರುಪಡಿಸಬೇಕು ಎಂದು ಸರ್ಕಾರಿ ಆದೇಶ ತಿಳಿಸಿದೆ. ವಿಮಾನ ಕಂಪನಿಗಳು ನೆಗೆಟಿವ್ ರಿಪೋರ್ಟ್ ಹಾಗೂ ಲಸಿಕೆ ಪಡೆದ ಬಗ್ಗೆ ಮಾಹಿತಿ ಪಡೆದುಕೊಂಡ ನಂತರವೇ ಬೋರ್ಡಿಂಗ್ ಪಾಸ್ ನೀಡಬೇಕು ಎಂದು ಸೂಚಿಸಲಾಗಿದೆ.

ರೈಲ್ವೆ ನಿಲ್ದಾಣ, ಬಸ್ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆ ಮಾಡಲಾಗುವುದು. ಖಾಸಗಿ ವಾಹನದಲ್ಲಿ ಬರುವವರನ್ನೂ ತಪಾಸಣೆ ಮಾಡಲಾಗುವುದು. ಬಸ್​ನಲ್ಲಿ ಕಂಡಕ್ಟರ್​​​ ನೆಗೆಟಿವ್​ ವರದಿ ಪರಿಶೀಲಿಸಬೇಕು. ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ಚೆಕ್​ಪೋಸ್ಟ್ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

ಕೇರಳದಿಂದ ಬರುವವರಿಗೂ ಕೊವಿಡ್ ರಿಪೋರ್ಟ್ ಕಡ್ಡಾಯ ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಕರ್ನಾಟಕ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು‌ ಮುಂದಾಗಿದೆ. ಕರ್ನಾಟಕದ ನೆರೆಯ ರಾಜ್ಯಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಕಂಡುಬಂದಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಹೊಸ ಪ್ರಕರಣಗಳು ಆತಂಕ‌ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರ ಬಳಿ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ.

ಕೊರೊನಾ ರೂಪಾಂತರಿ ಹರಡುವಿಕೆ ಪ್ರಮಾಣ ಕಡಿಮೆ‌ ಮಾಡುವ ಉದ್ದೇಶದಿಂದ ಜೂನ್ 28ರಿಂದ ಈ ಕ್ರಮ ಜಾರಿಯಲ್ಲಿರಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ಕೊರೊನಾ ಹೆಚ್ಚಾಗುತ್ತಿದೆ. ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬರುತ್ತಿದೆ. ಹೀಗಾಗಿ ಗಡಿಭಾಗಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

(Covid Negative Report Mandatory for Those Coming from Maharashtra)

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 3222 ಮಂದಿಗೆ ಕೊರೊನಾ ಸೋಂಕು, 93 ಮಂದಿ ಸಾವು

ಇದನ್ನೂ ಓದಿ: ಕೊರೊನಾಗೆ ಆನಂದಯ್ಯ ಔಷಧಿ: ಕರ್ನಾಟಕದಲ್ಲಿಯೂ ವಿತರಣೆಗೆ ಅನುಮತಿ ನೀಡಲು ಮನವಿ

Published On - 9:14 pm, Tue, 29 June 21

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್