Karnataka Covid Updates: ರಾಜ್ಯದಲ್ಲಿ ಕೊರೊನಾ ಏರಿಕೆ, ಕಳೆದ 24 ಗಂಟೆಯಲ್ಲಿ 537 ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರುನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರವಾಸಿಗಳಲ್ಲಿ ಆತಂಕ ಶುರುವಾಗಿದೆ.

Karnataka Covid Updates: ರಾಜ್ಯದಲ್ಲಿ ಕೊರೊನಾ ಏರಿಕೆ, ಕಳೆದ 24 ಗಂಟೆಯಲ್ಲಿ 537 ಪ್ರಕರಣಗಳು ಪತ್ತೆ
ಕೊರೊನಾ
Follow us
ವಿವೇಕ ಬಿರಾದಾರ
|

Updated on: Apr 22, 2023 | 10:59 AM

ಬೆಂಗಳೂರು: ಕೊರೊನಾ ಸಾಂಕ್ರಾಮಿಕ (Covid-19) ರೋಗ ಕಡಿಮೆಯಾಯಿತೆಂದು ಅನ್ನುವಷ್ಟರಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರುನಲ್ಲಿಯೇ (Bengaluru) 367 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರವಾಸಿಗಳಲ್ಲಿ ಢವಢವ ಶುರುವಾಗಿದೆ. ರಾಜ್ಯದಲ್ಲಿ 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಏರಿಕೆ ಪ್ರಮಾಣ 3.52ರಷ್ಟಿದೆ. ದೈನಂದಿನ ಏರಿಕೆಯು ಶೇ 3.06 ರಷ್ಟಿದೆ. ಕೊರೊನಾದಿಂದ ರಾಜ್ಯದಲ್ಲಿ ಕಳೆದ 15 ದಿನದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 42 ಮಂದಿ‌ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ: ಕೋವಿಡ್ ಪ್ರಕರಣಗಳ ಬಗ್ಗೆ ನಿಗಾ ಇರಿಸುವಂತೆ 8 ರಾಜ್ಯಗಳಿಗೆ ಕೇಂದ್ರ ಸೂಚನೆ

ಎಚ್ಚರಿಕೆ ಗಂಟೆ ರವಾನಿಸಿದ ಕೇಂದ್ರ ಆರೋಗ್ಯ ಇಲಾಖೆ

ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚುತ್ತಿರುವುದರಿಂದ ಕೊರೊನಾ ಪರಿಸ್ಥಿತಿ ಮೇಲೆ ತೀವ್ರ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ 8 ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಉತ್ತರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಹರಿಯಾಣ ಮತ್ತು ದೆಹಲಿ ಈ ಎಂಟು ರಾಜ್ಯಗಳಿಗೆ ಭೂಷಣ್ ಪತ್ರ ಬರೆದಿದ್ದಾರೆ. ಈ ರಾಜ್ಯಗಳಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಸಕಾರಾತ್ಮಕತೆಯ ಪ್ರಮಾಣ ಹೊಂದಿರುವ ಜಿಲ್ಲೆಗಳ ಸಂಖ್ಯೆ ಯುಪಿ (1), ತಮಿಳುನಾಡು (11), ರಾಜಸ್ಥಾನ (6), ಮಹಾರಾಷ್ಟ್ರ (8), ಕೇರಳ (14), ಹರಿಯಾಣ (12) ಮತ್ತು ದೆಹಲಿ (11).

ಕೊರೊನಾ ಲಕ್ಷಣಗಳ ಬಗ್ಗೆ ಅಲಕ್ಷ್ಯ ವಹಿಸಬೇಡಿ. ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಮೇಲೆ ಹೆಚ್ಚು ನಿಗಾ ವಹಿಸಿ. ಕೊರೊನಾ ಹರಡದಂತೆ ಜಾಗರುಕತೆಯಿಂದಿರಿ. ಅಲ್ಲದೇ ಉಸಿರಾಟದ ತೊಂದರೆ, ಜ್ವರ ಮಾದರಿಯ ಐಎಲ್‌ಐ ಪ್ರಕರಣಗಳ ಬಗ್ಗೆ ನಿಗಾ ಇರಲಿ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇಂದ್ರ ಸೂಚನೆ ಬೆನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್